ಹೆಚ್‌ ಡಿ ಕೋಟೆ ತಾಲೂಕು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್:‌ ಸಚಿವ ಹೆಚ್‌ ಸಿ ಮಹದೇವಪ್ಪ

Date:

Advertisements

ಮೈಸೂರು ಜಿಲ್ಲೆ ಹೆಚ್‌ ಡಿ ಕೋಟೆ ತಾಲೂಕಿನಲ್ಲಿ ಅತಿ ಹೆಚ್ಚು ಬಡವರಿದ್ದು, ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಯವರಿಗೆ ಶಿಫಾರಸು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ತಿಳಿಸಿದರು.

ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಮತ್ತು ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.

“ತಾಲೂಕಿನ ಜನರ ಜೀವನ ಸುಧಾರಣೆಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದಲೂ ಸೌಲಭ್ಯ ಒದಗಿಸಲಾಗುವುದು” ಎಂದು ಭರವಸೆ ನೀಡಿದರು.

Advertisements

“ಅಭಿವೃದ್ಧಿಯಲ್ಲಿ ತಾಲೂಕು ಹಿಂದುಳಿದಿದ್ದು, ಎಲ್ಲ ರೀತಿಯಲ್ಲಿ ಅಭಿವೃದ್ಧಿಪಡಿಸಲು ಸರ್ಕಾರದಿಂದ ವಿಶೇಷ ಪ್ಯಾಕೇಜ್ ರೀತಿಯಲ್ಲಿ ಅನುದಾನ ಒದಗಿಸುವಂತೆ ಸರ್ಕಾರದ ಗಮನಕ್ಕೆ ತರುತ್ತೇನೆ. ಇಲ್ಲಿನ ರಸ್ತೆ ಅಭಿವೃದ್ಧಿ, ನೀರಾವರಿ ಸೇರಿದಂತೆ ಮುಂತಾದ ಅಭಿವೃದ್ಧಿ ಕೆಲಸಗಳನ್ನು ಶಾಸಕ ಅನಿಲ್ ಚಿಕ್ಕಮಾದು ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು” ಎಂದರು.

“ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಇಲ್ಲಿನ ಜನರು ಅನೇಕ ಮೂಲಸೌಕರ್ಯದಿಂದ ವಂಚಿತರಾಗಿದ್ದಾರೆ. ಅನೇಕ ಕಟ್ಟಡ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ತಾಲೂಕಿ‌ನ ಒಟ್ಟಾರೆ ಎಲ್ಲ ಸಮಸ್ಯೆಗಳು ನನ್ನ ಗಮನದಲ್ಲಿವೆ. ಕಳೆದ ಬಾರಿಯ ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಾಲೂಕಿಗೆ ಆಸ್ಪತ್ರೆ, ರಸ್ತೆ, ಸೇತುವೆ ಸೇರಿದಂತೆ ಅನೇಕ ಸೌಕರ್ಯ ಕಲ್ಪಿಸಲಾಗಿದೆ. ಆದರೂ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಮುಂದುವರೆದ ತಾಲೂಕಾಗಿ ಮಾರ್ಪಾಡು ಮಾಡಲಾಗುವುದು” ಎಂದು ಭರವಸೆ ನೀಡಿದರು.

“ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ, ಆಸ್ಪತ್ರೆ ಸೌಲಭ್ಯವಿಲ್ಲ, ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಊಟದ ಸಮಸ್ಯೆ ಕುರಿತಂತೆ ಎಲ್ಲ ಸಮಸ್ಯೆಗಳನ್ನು ಕೂಲಂಕಷವಾಗಿ ಅರಿತು ಪರಿಹಾರ ಒದಗಿಸಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಸರ್ಕಾರದ ಆಡಳಿತ ನೇರವಾಗಿ ಜನರ ಮನೆಯ ಬಾಗಿಲಿಗೆ ತೆರಳುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಇಲ್ಲಿ ಅರ್ಜಿ ಸಲ್ಲಿಸಿದ ಎಲ್ಲರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುವುದು” ಎಂದು ಹೇಳಿದರು.

“ಈ ಭಾಗದಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗಿದ್ದು, ಇದನ್ನು ತಡೆಯಲು ಟಾಸ್ಕ್ ಫೋರ್ಸ್ ರಚಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದು, ಸರ್ಕಾರದಿಂದ ಈ ಬಗ್ಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು. ಕಂದಾಯ ಹಾಗೂ ಅರಣ್ಯ ಇಲಾಖೆಯ ಅಧಿಕಾರಗಳು ಜಂಟಿಯಾಗಿ ಸಮನ್ವಯತೆಯಿಂದ ಕೆಲಸ ಮಾಡಬೇಕು. ಇಲ್ಲಿನ ರೈತರು ಹಾಗೂ ಆದಿವಾಗಳ ಸಮಸ್ಯೆಗೆ ತುರ್ತಾಗಿ ಸ್ಪಂದಿಸಬೇಕು” ಎಂದು ಸೂಚಿಸಿದರು.

ಶಾಸಕ ಅನಿಲ್ ಚಿಕ್ಕಮಾದು ಅವರು ಮಾತನಾಡಿ, “ತಾಲೂಕಿನಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿದ್ದು, ಸರ್ಕಾರದ ಸೌಲಭ್ಯಗಳ ಅಗತ್ಯವಿದೆ. ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಗಳ ಹಾವಳಿ ಹೆಚ್ಚಾಗಿದ್ದು, ಹೆಚ್ಚು ರೈಲ್ವೆ ಬ್ಯಾರಿಕೇಡ್ ನಿರ್ಮಿಸಬೇಕಿದೆ. ಕಳೆದ ಆರು ತಿಂಗಳಿಂದ ಎಂಟು ಪ್ರಕರಣಗಳು ದಾಖಲಾಗಿವೆ. ಅರಣ್ಯ ಹಾಗೂ ಕಂದಾಯ ಇಲಾಖೆ ಸಮಸ್ಯೆ ಇದೆ. ಈ ಎಲ್ಲವನ್ನೂ ಸಚಿವರು ಗಮನದಲ್ಲಿರಿಸಿ ಅಭಿವೃದ್ಧಿಗೆ ಅನುದಾನ ಒದಗಿಸಬೇಕು” ಎಂದು ಹೇಳಿದರು.

“ತಾಲೂಕಿನಲ್ಲಿರುವ ಜಲಾಶಯದಿಂದ ಈ ಭಾಗದ ರೈತರಿಗೆ ನೀರಿನ ಸೌಲಭ್ಯ ಕಲ್ಪಿಸಬೇಕು. ರೈತರಿಗೆ ಸಾಗುವಳಿ ಹಕ್ಕುಪತ್ರ ವಿತರಿಸಬೇಕು. ಅತಿ ಹೆಚ್ಚು ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ನೀಡಬೇಕು. ಮಳೆಯಿಂದ ಕುಸಿದ ಮನೆಗಳು, ಸಂಪರ್ಕ ರಸ್ತೆಗಳು, ಕುಡಿಯುವ ನೀರಿನ ಯೋಜನೆಗಳು ಸೇರಿದಂತೆ ಹೆಚ್ಚಿನ ಮೂಲ ಸೌಕರ್ಯ ಒದಗಿಸಿಕೊಡಬೇಕು” ಎಂದು ಸಚಿವರಿಗೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮಲೆನಾಡು ಕರಾವಳಿ ಜನಪರ ಒಕ್ಕೂಟ ಆಯೋಜಿಸಿದ್ದ ಎರಡು ದಿನಗಳ ಶಿಬಿರ ಯಶಸ್ವಿ

ಇದೇ ಸಂದರ್ಭದಲ್ಲಿ ಅರ್ಜಿದಾರರನ್ನು ಕರೆದು ಸಚಿವರು, ಅವರ ಕುಂದು ಕೊರತೆಯನ್ನು ಆಲಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸ್ಥಳದಲ್ಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯಿತ್ರಿ, ಉಪ ವಿಭಾಗಾಧಿಕಾರಿ ರುಚಿ ಬಿಂದಾಲ್, ತಹಶೀಲ್ದಾರ್ ಶ್ರೀನಿವಾಸ್, ತಾಲೂಕು ಪಂಚಾಯತ್ ಇಒ ಧರಣೇಶ್ ಸೇರಿದಂತೆ ಮುಂತಾದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X