ತುಮಕೂರು | ರೈತರು, ಕೃಷಿ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ರೈತ ಸಂಘ ಆಗ್ರಹ

Date:

Advertisements

ರೈತರು ಹಾಗೂ ಕೃಷಿ ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಪಾವಗಡದಲ್ಲಿ ಪ್ರತಿಭಟನೆ ನಡೆಸಿ ಗ್ರೇಡ್ -2 ತಹಸೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿದೆ.

ಅಕ್ರಮ-ಸಕ್ರಮ ಯೋಜನೆಯಲ್ಲಿ ಸುಮಾರು 30ವರ್ಷಗಳಿಂದ ಭೂಮಿ ಉಳುಮೆ ಮಾಡಿಕೊಂಡು ಬಂದಿರುವ ರೈತರಿಗೆ ಜಮೀನು ಮಂಜೂರು ಮಾಡಿಸಿ ಖಾತೆ ಪಹಣಿ ಮಾಡಿಕೊಡಬೇಕು. ರೈತರಿಗೆ ಸರಿಯಾಗಿ ವಿದ್ಯುತ್ ಸರಬರಾಜು ನೀಡದೇ ಇರುವುದರಿಂದ ಬೆಳೆ ಒಣಗುತ್ತಿವೆ. ಟ್ರಾನ್ಸ್ ಫಾರಂ (ಟಿಸಿ) ಅಳವಡಿಸಲು ಗುತ್ತಿಗೆದಾರರು ಸುಲಿಗೆ ಮಾಡುತ್ತಿದ್ದು, ಒಂದು ವಿದ್ಯುತ್ ಪರಿವರ್ತಕ ನೀಡಲು 3ಲಕ್ಷ ಕೇಳುತ್ತಿದ್ದಾರೆ ಎಂದು ರೈತ ಸಂಘದ ಅಧ್ಯಕ್ಷ ಪೂಜಾರಪ್ಪ ಆರೋಪಿಸಿದರು‌.

ಭಾರತೀಯ ಸೇನೆಯಲ್ಲಿ ಮೈಲಾರಪ್ಪ ಎಂಬುವರು ಸುಮಾರು 20ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾಗಿರುತ್ತಾರೆ. ಇವರು ಕಸಬಾ ಹೋಬಳಿ ಕೊಡಮಡಗು ಗ್ರಾಮದ ಸರ್ವೆ ನಂಬರ್ 126ರಲ್ಲಿ 4.34ಎಕರೆ ಜಮೀನಿಗೆ ಅರ್ಜಿ ಸಲ್ಲಿಸಿದ್ದು ಸಂಬಂಧಪಟ್ಟ ಅಧಿಕಾರಿಗಳು ಮಂಜೂರು ಮಾಡದೆ ನಿರ್ಲಕ್ಷ ವಹಿಸಿದ್ದಾರೆ. ಇನ್ನಾದರೂ ಸರ್ಕಾರವು ದೇಶ ಕಾದ ಯೋಧನಿಗೆ ಎಲ್ಲಾ ರೀತಿಯ ಸೌಲತ್ತುಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

Advertisements

ಪ್ರತಿವರ್ಷವೂ  ಬೆಳೆ ವಿಮೆಯನ್ನು ರೈತರು ಕಟ್ಟುತ್ತಾ ಬಂದಿದ್ದರು ಸಹ,  ಬೆಳೆವಿಮೆ ನೀಡದೆ ವಿಮೆ ಕಂಪನಿಯು ರೈತರಿಗೆ ವಂಚಿಸುತ್ತಿದೆ ಹಾಗೂ ಬರಗಾಲದಿಂದ ತತ್ತರಿಸಿರುವ ರೈತರಿಗೆ ಸಕಾಲಕ್ಕೆ ಬೆಳೆ ನಷ್ಟ ಪರಿಹಾರವನ್ನು ನೀಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನೂ ಬೃಹತ್ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗರತ್ನ, ತಾಲೂಕು ಉಪಾಧ್ಯಕ್ಷ ನಾರಾಯಣಪ್ಪ, ಕಾರ್ಯದರ್ಶಿ ನರಸಣ್ಣ, ಶಿವು, ಮಂಜುನಾಥ್, ಹನುಮಂತರಾಯಪ್ಪ, ಚಿತ್ತಯ್ಯ , ಸುಶೀಲಮ್ಮ ಇನ್ನಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X