ದಾವಣಗೆರೆ | ಔಷಧಿ ಕ್ಷೇತ್ರದಲ್ಲಿ ಅಕ್ರಮ ದಂಧೆ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ

Date:

Advertisements

ಔಷಧಿ ಕ್ಷೇತ್ರದಲ್ಲಿ ಅನೈತಿಕವಾಗಿ ನಡೆಯುತ್ತಿರುವ ಮಾರಾಟ ದಂಧೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಔಷಧಿ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಸದಸ್ಯರು ದಾವಣಗೆರೆ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಸಂಘದ ಮುಖಂಡ ಕೆ.ಎಚ್. ಆನಂದರಾಜ್ ಮಾತನಾಡಿ ಖಾಸಗಿ ಬಹುರಾಷ್ಟ್ರೀಯ ಕಂಪನಿಗಳು ಭ್ರಷ್ಟ ವ್ಯವಸ್ಥೆ ಮೂಲಕ ತಮ್ಮ ಲಾಭಕೋರತನದಿಂದ ಜನರಿಗೆ ಅವಶ್ಯಕವಾದ ಔಷಧಿಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಮೂಲಕ ಅದನ್ನು ಬಳಸುವ ರೋಗಿಗಳ ಆರೋಗ್ಯವನ್ನು ಮತ್ತಷ್ಟು ಹಾಳು ಮಾಡುತ್ತಿವೆ.

ಜನರ ಆರೋಗ್ಯವನ್ನು ರಕ್ಷಿಸಬೇಕಾದ ಕೇಂದ್ರ ಸರ್ಕಾರವು ಕಂಡು ಕಾಣದಂತೆ ವರ್ತಿಸುತ್ತಿದೆ. ಮಾತ್ರವಲ್ಲ ಸಾರ್ವಜನಿಕ ವಲಯದ ಔಷಧಿ ಕಂಪನಿಗಳನ್ನು ಮುಚ್ಚುವ ಮೂಲಕ ಖಾಸಗೀ ಕಂಪನಿಗಳ ಲಾಭಕೋರತನವನ್ನು ಸರ್ಕಾರವೇ ಬೆಂಬಲಿಸುತ್ತಿರುವುದು ದುರದೃಷ್ಟಕರ ಎಂದರು.

Advertisements

ಈ ವ್ಯವಸ್ಥೆಯಿಂದಾಗಿ ಖಾಸಗಿ ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಇಚ್ಛೆ ಬಂದಷ್ಟು ಔಷಧಿಗಳ ಬೆಲೆಗಳ ಏರಿಕೆಗೆ ಅವಕಾಶ ನೀಡಿದಂತಾಗಿದೆ. ಔಷಧಿಗಳ ಎಂಆರ್‌ಪಿ ಮೇಲೆ ಪ್ರತೀ ವರ್ಷ ಶೇ.10ರಷ್ಟು ಬೆಲೆ ಹೆಚ್ಚಿಸುವ ಅವಕಾಶವನ್ನು ಕೇಂದ್ರ ಸರ್ಕಾರ ಮಾಡಿದೆ. ಇದರಿಂದಾಗಿ ಇಡೀ ಆರೋಗ್ಯ ಕ್ಷೇತ್ರವೇ ಖಾಸಗೀಯವರ ದಾಳಕ್ಕೆ ಸಿಲುಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಇದರ ಪರಿಣಾಮವಾಗಿ ಅಲ್ಲಿ ಚಿಕಿತ್ಸೆ ಪಡೆಯುವುದು ಸಂಪೂರ್ಣ ಹಣದ ವ್ಯವಹಾರದ ಮೇಲೆ ನಿಂತಿದೆ. ಇದರಿಂದ ರೋಗಿಗಳ ಜೀವ ಸದಾ ಅಪಾಯದಲ್ಲಿದೆ ಎಂದರು.

ಇದಲ್ಲದೆ ಔಷಧಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಔಷಧಿ ಮಾರಾಟ ಪ್ರತಿನಿಧಿಗಳಿಗೆ ಯಾವುದೇ ಕನಿಷ್ಟವೇತನ, ಸಾಮಾಜಿಕ ಭದ್ರತೆ ಇಲ್ಲ. ಇಲ್ಲಿ ಕಾರ್ಮಿಕ ಕಾನೂನು ಉಲ್ಲಂಘನೆ ಎಂಬುದು ನಿತ್ಯ ನಡೆಯುತ್ತಲೇ ಇದೆ. ಹಲವಾರು ವರ್ಷಗಳಿಂದ ಬೆಂಗಳೂರಿನಲ್ಲಿರುವ ಔಷಧಿ ಕಂಪನಿಗಳ ದಾಖಲೆಗಳನ್ನ ಪರಿಶೀಲಿಸಲು ನಮ್ಮ ಸಂಘಟನೆಯು ಒತ್ತಾಯ ಮಾಡಿದ್ದರೂ ರಾಜ್ಯ ಸರ್ಕಾರವು ಸರಿಯಾದ ಕ್ರಮ ಕೈಗೊಂಡಿರುವುದಿಲ್ಲ. ಇದೀಗ ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕರನ್ನು ಶೋಷಣೆ ಮಾಡಿ, ಮಾಲಿಕರನ್ನು ಪೋಷಣೆ ಮಾಡುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಿರುವುದರಿಂದ ಮಾರಾಟ ಪ್ರತಿನಿಧಿಗಳ ರಕ್ಷಣೆಗೆ ಇದ್ದಂತಹ ಎಸ್‌ಪಿಇ ಖಾಯಿದೆ ರದ್ದಾಗಲಿದೆ.

ಆಸ್ಪತ್ರೆಗಳಲ್ಲಿ ಔಷಧಿ ಮಾರಾಟ ಪ್ರತಿನಿಧಿಗಳ ಪ್ರವೇಶ ನಿರ್ಬಂಧ ಮಾಡಿರುವುದು. ಸೇವಾ ಷರತ್ತುಗಳು ಮತ್ತು ಕೆಲಸದ ಅವಧಿಯನ್ನ ನಿಗಧಿ ಮಾಡದೇ ಜಿಪಿಆರ್‌ಎಸ್ ಮತ್ತು ಜಿಯೋಟ್ಯಾಗಿಂಗ್ ಮೂಲಕ ಗೌಪ್ಯತೆ ಬಹಿರಂಗಪಡಿಸುವ ಮೂಲಕ ಸುಮಾರು 13-15ಗಂಟೆ ಕೆಲಸ ಮಾಡಿಸುವ ಮೂಲಕ ಮಾರಾಟ ಪ್ರತಿನಿಧಿಗಳ ಮೇಲೆ ನಡೆಯುತ್ತಿರುವ ಶೋಷಣೆಯು ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಲೋಹಿತಾಶ್ವ, ವೆಂಕಟೇಶ್, ಶಶಿಆಚಾರ್, ಆಫರೊಜ್ ಸೇರಿದಂತೆ  ಸಂಘದ ಸದಸ್ಯರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X