ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಸಿಐಡಿ ತಂಡ ವಶಕ್ಕೆ ಪಡೆದಿದೆ.
ಗ್ರಾಮದ ಬಸಪ್ಪ ರುದ್ರಪ್ಪ ನಾಯಕ, ರಾಜು ರುದ್ರಪ್ಪ ನಾಯಕ ಹಾಗೂ ಶಿವಪ್ಪ ರಾಯಪ್ಪ ವಣ್ಣೂರ ಎಂಬ ಆರೋಪಿಗಳನ್ನು ಸಿಐಡಿ ತಂಡ ವಶಕ್ಕೆ ಪಡೆದುಕೊಂಡಿದೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದೆ. ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಎರಡು ವಾರಗಳ ಹಿಂದೆ ಪ್ರೇಮಿಗಳು ಊರು ತೊರೆದಿದ್ದರು. ಇದರಿಂದ ಕುಪಿತಗೊಂಡ ಯುವತಿಯ ಕುಟುಂಬಸ್ಥರು ಯುವಕನ ಮನೆಗೆ ನುಗ್ಗಿ, ಆತನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಹೈಕೋರ್ಟ್, “ಘಟನೆ ನಡೆಯುವಾಗ ಮೂಕಪ್ರೇಕ್ಷಕರಂತೆ ನಿಂತಿದ್ದ ಎಲ್ಲರಿಗೂ ದಂಡ ವಿಧಿಸಬೇಕು. ಆ ಹಣವನ್ನು ಸಂತ್ರಸ್ತೆಗೆ ನೀಡಬೇಕು” ಎಂದು ಆದೇಶಿಸಿದೆ.