ಅಧಿವೇಶನ ಮುಗಿಯಲು ಕೆಲವೇ ನಿಮಿಷಗಳಿರುವಾಗ ಲೋಕಸಭೆಯಲ್ಲಿ ಪ್ರತ್ಯಕ್ಷರಾದ ಪ್ರಧಾನಿ ಮೋದಿ!

Date:

Advertisements

ಲೋಕಸಭೆಯ ಚಳಿಗಾಲದ ಅಧಿವೇಶನವನ್ನು ನಿಗದಿಗಿಂತ ಒಂದು ದಿನ ಮೊದಲೇ ಮುಕ್ತಾಯಗೊಳಿಸಲಾಗಿದೆ. ಡಿ.4ರಿಂದ ಆರಂಭಗೊಂಡಿದ್ದ ಡಿ.22ವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಡಿ.21ಕ್ಕೆ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದಾಗಿ ಘೋಷಿಸಿದರು.

ಅಧಿವೇಶನ ಮುಗಿಯಲು ಕೆಲವೇ ನಿಮಿಷಗಳು ಇರುವಾಗ ಲೋಕಸಭೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು. ಈ ವೇಳೆ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಪತ್ರಿಕಾ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ-2023 ರ ಚರ್ಚೆಗೆ ಉತ್ತರಿಸುತ್ತಿದ್ದರು.

ಪ್ರಧಾನಿ ನರೇಂದ್ರ ಮೋದಿ ಲೋಕಸಭೆಗೆ ಸಂಜೆ 04:02ಕ್ಕೆ ಆಗಮಿಸುತ್ತಿದ್ದಂತೆಯೇ, ಕೂತಿದ್ದ ಆಡಳಿತ ಪಕ್ಷದ ಸಂಸದರು ಎದ್ದು ನಿಂತು, ‘ಜೈಶ್ರೀರಾಮ್, ಭಾರತ್ ಮಾತಾಕೀ ಜೈ’ ಎಂದು ಘೋಷಣೆ ಕೂಗಿದರು. ಪ್ರಧಾನಿಗೆ ಮೋದಿಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸಾಥ್ ನೀಡಿದರು. ಸಂಜೆ 04:15ಕ್ಕೆ ಲೋಕಸಭೆಯ ಕಲಾಪವನ್ನು ಮುಕ್ತಾಯಗೊಳಿಸಲಾಯಿತು.

Advertisements

modi came to parliament

ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಸದನದಲ್ಲಿ ಮಂಡಿಸಲಾದ ಮಸೂದೆ ಹಾಗೂ ಸಮಯದ ವಿವರಗಳನ್ನು ನೀಡಿದ ನಂತರ, ವಂದೇ ಮಾತರಂ ಗೀತೆಯೊಂದಿಗೆ ಸಮಾರೋಪಗೊಳಿಸಿ, ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿರುವುದಾಗಿ ಘೋಷಿಸಿದರು.

ಡಿ.4ರಿಂದ ಆರಂಭಗೊಂಡಿದ್ದ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಪ್ರಧಾನಿ ಒಂದು ದಿನವೂ ಭಾಗವಹಿಸಿರಲಿಲ್ಲ. ಡಿ.13ರಂದು ಕೆಲ ಯುವಕರು ಲೋಕಸಭೆಯ ಕಲಾಪದ ವೇಳೆ ನುಗ್ಗಿ ಹೊಗೆ ಬಾಂಬ್ ಸಿಡಿಸಿದ್ದರು.

ಸಂಸತ್‌ನ ಈ ಗಂಭೀರ ಭದ್ರತಾ ಲೋಪ ಪ್ರಕರಣದ ಬಗ್ಗೆ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಹೇಳಿಕೆ ನೀಡುವಂತೆ ಆಗ್ರಹಿಸಿ ಗದ್ದಲ ಎಬ್ಬಿಸಿದ್ದರಿಂದ, ಒಟ್ಟು 146 ಸಂಸದರನ್ನು ರಾಜ್ಯಸಭೆ ಹಾಗೂ ಲೋಕಸಭೆಯಿಂದ ಅಮಾನತು ಮಾಡಲಾಗಿದೆ. ಸಂಸತ್ತಿನ ಇತಿಹಾಸದಲ್ಲೇ ಮೊದಲ ಬಾರಿ ಈ ರೀತಿಯ ಬೆಳವಣಿಗೆ ನಡೆದಿದೆ.

ಸಂಸದರ ಅಮಾನತು ಮಾಡಿರುವುದನ್ನು ಖಂಡಿಸಿ, ದೆಹಲಿಯ ಜಂತ‌ರ್ ಮಂತರ್‌ ಸೇರಿ ದೇಶಾದ್ಯಂತ ನಾಳೆ(ಡಿ.22) ಪ್ರತಿಭಟಿಸಲು ‘ಇಂಡಿಯಾ’ ಮೈತ್ರಿಕೂಟ ಕರೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X