ಬೆಂಗಳೂರು | ಎಲೆಕ್ಟ್ರಿಕ್ ವಾಹನಗಳ ನೋಂದಣಿ ಸಂಖ್ಯೆ ಮೂರು ಪಟ್ಟು ಏರಿಕೆ

Date:

Advertisements

ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ರಾಜಧಾನಿ ಬೆಂಗಳೂರಿನ ಜನ ಮುಖ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ ನೋಂದಣಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ನಾನಾ ಮಾದರಿಯ 2.83 ಲಕ್ಷ ವಾಹನಗಳು ಕಳೆದ ಆರು ವರ್ಷದಲ್ಲಿ ನೋಂದಣಿಯಾಗಿವೆ. ಅದರಲ್ಲೂ ನಗರದಲ್ಲಿ ಮೂರು ಪಟ್ಟು ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗಿದೆ.

ಪೆಟ್ರೋಲ್ ಬೆಲೆ ಹೆಚ್ಚಳ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಜನರು ಎಲೆಕ್ಟ್ರಿಕ್ವಾಹನಗಳತ್ತ ಮುಖ ಮಾಡುತ್ತಿದ್ದಾರೆ. 2017-2018 ಹಣಕಾಸಿನ ವರ್ಷದಲ್ಲಿ ದ್ವಿಚಕ್ರ, ತ್ರಿ ಚಕ್ರ, ನಾಲ್ಕು ಚಕ್ರದ ವಾಹನ ಸೇರಿ ಒಟ್ಟು 1,992 ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿದ್ದವು. 2018-19 ರಲ್ಲಿ 5,542, 2019-20ರಲ್ಲಿ 6,674, 2020-21ರಲ್ಲಿ 11,593 ಎಲೆಕ್ಟ್ರಿಕ್ ವಾಹನಗಳು ನೋಂದಣಿ ಆಗಿವೆ. 2021 ಬಳಿಕ ಎಲೆಕ್ಟ್ರಿಕ್ ವಾಹನಗಳ ಬಳಕೆಯ ಸಂಖ್ಯೆಯಲ್ಲಿ ಮೂರು ಪಟ್ಟು ಹೆಚ್ಚಳವಾಗಿದೆ.

2017-18ರಲ್ಲಿ ಎಲೆಕ್ಟ್ರಿಕ್ವಾಹನ ನೋಂದಣಿಯ ಸಂಖ್ಯೆ ಹಾಗೂ 2023-24ರಲ್ಲಿನ ವಾಹನಗಳ ನೋಂದಣಿಯನ್ನು ಗಮನಿಸಿದರೆ ಎಲೆಕ್ಟ್ರಿಕ್ವಾಹನಗಳ ನೋಂದಣಿ ಪ್ರಮಾಣ ಶೇ. 1000ರಷ್ಟು ಹೆಚ್ಚಾಗಿದೆ.

Advertisements

2021-22ರಲ್ಲಿ 44,217, 2022-23ರಲ್ಲಿ 1,10,492 ವಾಹನಗಳು ನೋಂದಣಿಯಾದರೆ, 2023-24 ರಲ್ಲಿ ಬರೋಬ್ಬರಿ 1,03,009 ಎಲೆಕ್ಟ್ರಿಕಲ್ ವಾಹನಗಳು ನೋಂದಣಿ ಆಗಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಂತರಿಕ್ಷಯಾನದ ಪರಿಕಲ್ಪನೆಯಡಿ ಜನವರಿ 7ರಂದು ಚಿತ್ರಸಂತೆ

2022-23ರಿಂದ ಈಚೆಗೆ ವಾರ್ಷಿಕ 1 ಲಕ್ಷಕ್ಕೂ ಹೆಚ್ಚಿನ ಎಲೆಕ್ಟ್ರಿಕ್ವಾಹನಗಳು ನೋಂದಣಿಯಾಗುತ್ತಿವೆ. ಪೈಕಿ ದ್ವಿಚಕ್ರ ವಾಹನಗಳ ನೋಂದಣಿಯಲ್ಲಿ ಭಾರೀ ಏರಿಕೆಯಾಗಿದೆ.

“ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗಿರೋದು, ನಿಜಕ್ಕೂ ಉತ್ತಮ ಬೆಳವಣಿಗೆಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X