ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸುವ ಮೂಲಕ ಕ್ಷೇತ್ರದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಡಿ.21 ರಂದು ಚಾಲನೆ ನೀಡಿದರು.
ಭೂಮಿ ಪೂಜೆ ನೇರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳಾದ ರಸ್ತೆ ಚರಂಡಿ, ಸಮುದಾಯ ಭವನ ಸೇರಿದಂತೆ ಮುಂತಾದ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಂಡು ಗ್ರಾಮದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು” ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಐಎ ಟರ್ಮಿನಲ್ 2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳ ಪೈಕಿ ಒಂದು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ಸೇರಿದಂತೆ ಗುತ್ತಿಗೆದಾರರು ಗ್ರಾಮಸ್ಥರು ಹಾಜರಿದ್ದರು.