ದಕ್ಷಿಣ ಕನ್ನಡ | ಬೀದಿಬದಿ ವ್ಯಾಪಾರಿಗಳಿಂದ ಸೌಹಾರ್ದ ಕ್ರಿಸ್‌ಮಸ್ ಆಚರಣೆ

Date:

Advertisements

ಯೇಸು ಕ್ರಿಸ್ತನ ಪ್ರೀತಿ ಮತ್ತು ಕಾರುಣ್ಯದ ಸಂದೇಶ ಸಮಾಜಕ್ಕೆ ದಾರಿದೀಪವಾಗಿದೆ. ಪ್ರತಿ ಹಬ್ಬಗಳನ್ನು ಎಲ್ಲ ಜನರೂ ಸೇರಿಕೊಂಡು ಆಚರಿಸಿದಾಗ ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಗಟ್ಟಿಯಾಗಿಡಲು ಸಾಧ್ಯವಾಗಲಿದೆ ಎಂದು ಹಿರಿಯ ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ ಮತ್ತು ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘದ ಸಹಾಭಾಗಿತ್ವದಲ್ಲಿ ಮಂಗಳೂರಿನ ಬೀದಿ ವ್ಯಾಪಾರಿಗಳ ಕಚೇರಿಯಲ್ಲಿ ನಡೆದ ಸೌಹಾರ್ದ ಕ್ರಿಸ್‌ಮಸ್ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಬೀದಿಬದಿ ವ್ಯಾಪಾರಿಗಳು ಅತ್ಯಂತ ಶ್ರಮಜೀವಿಗಳು, ಅಭದ್ರತೆಯಲ್ಲಿ ಬದುಕುತ್ತಿರುವವರು. ವ್ಯಾಪಾರದಲ್ಲಿ ವ್ಯಾಪಾರ ಧರ್ಮ, ನ್ಯಾಯ, ನಿಷ್ಠೆ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡು ಸಮಾಜ ಗುರುತಿಸುವಂತೆ ಜೀವನ ನಡೆಸಬೇಕು” ಎಂದು ಕರೆ ನೀಡಿದರು.

Advertisements

ಪದುವ ಪ್ರೌಢ ಶಾಲೆಯ ಶಿಕ್ಷಕ ಸ್ಟ್ಯಾನಿ ತಾವ್ರೊ ಮಾತನಾಡಿ, “ನಿನ್ನ ಶತ್ರುಗಳನ್ನು ಪ್ರೀತಿಸು, ನಿನ್ನನ್ನು ದ್ವೇಷಿಸುವವರಿಗೆ ಒಳಿತನ್ನು ಬಯಸಬೇಕೆಂದು ಮಾನವ ಜನಾಂಗಕ್ಕೆ ಸಾರಿ ಹೇಳಿದ ಯೇಸು ಕ್ರಿಸ್ತ ಸಕಲ ಮಾನವರಿಗೆ ಭ್ರಾತೃತ್ವದ ಸಂದೇಶ ನೀಡಿದ ಮಹಾನ್ ಶಕ್ತಿಯಾಗಿದ್ದಾರೆ. ಬೀದಿ ವ್ಯಾಪಾರಿಗಳು ಎಲ್ಲ ಧರ್ಮದ ಹಬ್ಬಗಳನ್ನು ಆಚರಿಸುವ ಮೂಲಕ ಮಂಗಳೂರಿನ ನಿಜವಾದ ಸೌಹಾರ್ದತೆಯ ರಾಯಭಾರಿಗಳಾಗಿದ್ದೀರಿ. ಬೀದಿ ವ್ಯಾಪಾರಿಗಳಲ್ಲಿರುವ ಸಾಮರಸ್ಯದ ಸದ್ಭಾವನೆ ಸರ್ವರಿಗೂ ಅನುಕರಣೀಯ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | ರೇವ್ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟ-ಬಳಕೆ; ಮಾಹಿತಿ ನೀಡಲು ಎಸ್‌ಪಿ ಮನವಿ

ಡಿವೈಎಫ್ಐ ಜಿಲ್ಲಾ ಉಪಾಧ್ಯಕ್ಷ ನವೀನ್ ಕೊಂಚಾಡಿ, ಸಂಘದ ಗೌರವಧ್ಯಕ್ಷ ಬಿ.ಕೆ ಇಮ್ತಿಯಾಝ್ ಕ್ರಿಸ್‌ಮಸ್ ಹಬ್ಬಕ್ಕೆ ಶುಭ ಕೋರಿ ಮಾತನಾಡಿದರು.

ಸಂಘದ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ ಅಧ್ಯಕ್ಷತೆ ವಹಿಸಿದ್ದರು. ಮುಖಂಡರುಗಳಾದ ಹರೀಶ್ ಪೂಜಾರಿ ಆಸೀಫ್ ಬಾವ ಉರುಮನೆ, ಮೇಬಲ್ ಡಿಸೋಜ, ಮೇರಿ ಡಿಸೋಜಾ, ಫಿಲೋಮೀನಾ, ಪ್ರವೀಣ್ ಕದ್ರಿ, ನೌಷಾದ್ ಉಳ್ಳಾಲ, ಇಸ್ಮಾಯಿಲ್, ಆದಂ ಬಜಾಲ್, ಶ್ರೀಧರ ಭಂಡಾರಿ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X