ಚಿಕ್ಕಮಗಳೂರು | ಮಸೀದಿ ಬಳಿ ಕೇಸರಿ ಧ್ವಜ ಕಟ್ಟಲು ವಿರೋಧ; ಗಲಾಟೆ ಆರೋಪ

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದಲ್ಲಿ ಮಸೀದಿ ಬಳಿ ಕೇಸರಿ ಧ್ವಜ ಕಟ್ಟುತ್ತಿದ್ದ ದತ್ತ ಮಾಲಾಧಾರಿಗಳನ್ನು ಮತ್ತೊಂದು ಕೋಮಿನ ಯುವಕರು ತಡೆದಿದ್ದಾರೆ. ಈ ವೇಳೆ ಗಲಾಟೆ ನಡೆದಿದ್ದು, ಹಿಂದುತ್ವ ಕೋಮು ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಚಿಕ್ಕಮಗಳೂರಿನ ಬಾಬಾಬುಡನ್‌ಗಿರಿಯಲ್ಲಿ ಹಿಂದುತ್ವ ಕೋಮುವಾದಿ ಸಂಘಟನೆ ವಿಶ್ವ ಹಿಂದು ಪರಿಷತ್‌ 24, 25 ಮತ್ತು 26ರಂದು ದತ್ತ ಜಯಂತಿ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ದತ್ತ ಮಾಲೆ ಧರಿಸಿರುವ ಹಿಂದುತ್ವವಾದಿ ಕೋಮು ಕಾರ್ಯಕರ್ತರು ಚಿಕ್ಕಮಗಳೂರಿನ ವಿವಿಧ ಭಾಗಗಳಲ್ಲಿ ಕೇಸರಿ ಧ್ವಜಗಳನ್ನು ಕಟ್ಟುತ್ತಿದ್ದಾರೆ.

ಈ ವೇಳೆ, ಮಸೀದಿ ಬಳಿಯೂ ಕೇಸರಿ ಧ್ವಜ ಕಟ್ಟಲು ದತ್ತಮಾಲೆ ಧರಿಸಿದ್ದವರು ಮುಂದಾಗಿದ್ದಾರೆ. ಅವರನ್ನು ತಡೆದು, ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸ್ಥಳಕ್ಕೆ ಆಲ್ದೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

Advertisements

ಹಿಂದು-ಮುಸ್ಲಿಂ ಸೌಹಾರ್ದ ತಾಣವಾಗಿರುವ ಬಾಬಾಬುಡನ್‌ಗಿರಿ ದರ್ಗಾವನ್ನು ದತ್ತಪೀಠ ಮಾಡುತ್ತೇವೆಂದು ಹಿಂದುತ್ವ ಕೋಮು ಸಂಘಟನೆಗಳು ವಿವಾದ ಸೃಷ್ಠಿಸಿವೆ. ಹೀಗಾಗಿ, ಪ್ರತಿ ವರ್ಷವೂ ದತ್ತ ಜಯಂತಿ ಆಚರಿಸುತ್ತಿವೆ. ಬಾಬಾಬುಡನ್‌ಗಿರಿಯಲ್ಲಿ ಡಿಸೆಂಬರ್​ 24, 25 ಮತ್ತು 26ರಂದು ದತ್ತಜಯಂತಿ ನಡೆಯುವ ಕಾರಣ, ಡಿಸೆಂಬರ್ 23ರಿಂದ 27ರವರೆಗೆ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X