12 ಕಾಡಾನೆಗಳ ಹಿಂಡು ಗ್ರಾಮಕ್ಕೆ ನುಗ್ಗಿದ್ದು, ಗ್ರಾಮಸ್ಥರು ಭಯಭೀತರಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ನಡೆದಿದೆ.
ಗುರುವಾರ ರಾತ್ರಿ ಕಾಡಾನೆಗಳು ಗ್ರಾಮಕ್ಕೆ ನುಗ್ಗಿವೆ. ಇದರಿಂದಾಗಿ ಜನರು ಆತಂಕಗೊಂಡಿದ್ದಾರೆ. ಆನೆಗಳು ಕಾಂಚನಹಳ್ಳಿ ಎಡೆಗೆ ತೆರಳಿವೆ. ಅವುಗಳನ್ನು ಕೂಡಲೇ ಕಾಡಿಗಟ್ಟಬೇಕು ಎಂದು ಕಬ್ಬಾಳು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇತ್ತೀಚೆಗಷ್ಟೇ, ಕನಕಪುರ ತಾಲೂಕಿನಲ್ಲಿ ಆನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದರು. ಇದೀಗ, ಕಾಡಾನೆಗಳ ಹಿಂಡೇ ಗ್ರಾಮಗಳಲ್ಲಿ ಕಾಣಿಸಿಕೊಂಡಿದ್ದು, ಕಬ್ಬಾಳು ಹಾಗೂ ಸುತ್ತುಮುತ್ತಲ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.