ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಹರೀಶ್ ಗೌಡ ಹೇಳಿದ್ದಾರೆ.
ಮೈಸೂರಿನ ಮೇಟಗಳ್ಳಿ ಸಂಬೇಡ್ಕರ್ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ,
ಇಎಸ್‌ಐ ಆಸ್ಪತ್ರೆ, ಅಮೃತ ಕೃಪ ಆಸ್ಪತ್ರೆ, ಲಯನ್ಸ್ ರಕ್ತನಿಧಿ ಜೀವಧಾರ ಒಗ್ಗೂಡಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದವು. ಶಿಬಿರದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಗೈದ ಜೀವದಾರ ಗಿರೀಶ್, ದೇವರಾಜು, ಪುಟ್ಟರಾಜು, ಜಯಶ್ರೀ ಅವರಿಗೆ ಶಾಸಕ ಹರೀಶ್ ಗೌಡ ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣಾಧಿಕಾರಿ ಡಾ. ಮಹಮದ್ ಸಿರಾಜ್ ಅಹಮದ್,ಹಿರಿಯ ವೈದ್ಯಾಧಿಕಾರಿಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾಕ್ಟರ್ ಲೋಕೇಶ್,ಇ.ಎಸ್.ಐ. ಆಸ್ಪತ್ರೆ ಸ್ಥಾನಿಯ ವೈದ್ಯಾಧಿಕಾರಿ ಡಾ. ಚಂದ್ರಕಲಾ ಕೆ,ಅಮೃತ ಕೃಪ ಆಸ್ಪತ್ರೆ ವೈದ್ಯಾಧಿಕಾರಿಗಳು ಡಾ. ಸೌಮ್ಯ ಮೋದಿ,ಇ.ಎಸ್.ಐ. ಆಸ್ಪತ್ರೆ ವೈದ್ಯಾಧಿಕಾರಿಗಳು ಡಾ. ಕೆ.ಟಿ. ಅನಿತ,ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಆಪ್ತ ಸಮಾಲೋಚರಕರಾದ ನಾಗೇಂದ್ರ ಪ್ರಸಾದ್ ಹಾಗೂ ಗೋಪಾಲ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
1,000ಕ್ಕೂ ಅಧಿಕ ರೋಗಿಗಳ ಆರೋಗ್ಯ ತಪಾಸಣೆ ನಡೆಸಿ, ಉಚಿತ ಔಷಧ ವಿತರಿಸಿದರು.