ಧಾರವಾಡ | ಗಣಿತದಲ್ಲಿ ರಾಮಾನುಜನ್ ರವರ ಕೊಡುಗೆ ಅಪಾರ: ಅಶೋಕ ಸಜ್ಜನ

Date:

Advertisements

ಶ್ರೀನಿವಾಸ ರಾಮಾನುಜನ್ ಅವರು ಕಿರಿಯ ವಯಸ್ಸಿನಲ್ಲಿಯೇ 3,600ಕ್ಕೂ ಹೆಚ್ಚು ಗಣಿತದ ಸೂತ್ರಗಳನ್ನು ಕೊಟ್ಟಿದ್ದಾರೆ. ವಿಶ್ವಶ್ರೇಷ್ಠ ಗಣಿತಜ್ಞರಾಗಿದ್ದಾರೆ ಎಂದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ ಎಂ ಸಜ್ಜನ ಹೇಳಿದ್ದಾರೆ.

ಧಾರವಾಡ ಜಿಲ್ಲೆಯ ಹೆಬಸೂರ ಸರ್ಕಾರಿ ಶಾಲೆಯಲ್ಲಿ ನಡೆದ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಅಯ್ಯಂಗಾರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ರಾಮಾನುಜನ್ ಅವರು ಮೂವತ್ತೆರಡನೇ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದರು. ಆದರೆ, ಬದುಕಿದ್ದ ಅಲ್ಪ ಕಾಲಾವಧಿಯಲ್ಲಿಯೇ ಗಣಿತಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ” ಎಂದು ಹೇಳಿದರು.

“ಮೂರನೇ ತರಗತಿಯಲ್ಲಿದ್ದಾಗ ಗಣಿತ ವಿಷಯ ಬೋಧಿಸುತ್ತಿದ್ದ ಗುರುಮಾತೆಯರಿಗೆ ರಾಮಾನುಜನ್‌ ಮರು ಪ್ರಶ್ನೆ ಹಾಕಿದ್ದರು. ವಿದ್ಯಾರ್ಥಿಗಳು ಗಣಿತ ಕಲಿಕೆಯಲ್ಲಿ ಹಿಂಜರಿಕೆ, ಕೀಳರಿಮೆ, ಸಂಕೋಚ, ಭಯಗಳೆಂಬ ನಕಾರಾತ್ಮಕ ವಿಚಾರಗಳನ್ನು ಕೈಬಿಟ್ಟು ಆತ್ಮವಿಶ್ವಾಸದಿಂದ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು” ಎಂದು ತಿಳಿಹೇಳಿದರು.

Advertisements

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಪುರದಪ್ಪ ಗಾಳಿ ಸದಸ್ಯರಾದ ವೆಂಕಣ್ಣ ತಳವಾರ, ಗ್ರಾಮ ಪುರೋಹಿತ ಶಾರದಾ ಕಂಬಳಿ, ದ್ರಾಕ್ಷಾಯಿಣಿ ಕೊರಗರ, ದೇವೇಂದ್ರ ಪತ್ತಾರ, ಸುವರ್ಣ ಮಡಿವಾಳರ, ಸುಧಾ ಕೊಣ್ಣೂರ, ಗೀತಾ ಕೆಂಚರಡ್ಡಿ, ಶೃತಿ ಪೋಲೀಸ್ ಪಾಟೀಲ, ಮೆಹಬೂಬ ಮುಲ್ಲಾನವರ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X