ದಾವಣಗೆರೆ | ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಡಿ.26ರಂದು ಗಿರಿಜನ ಉತ್ಸವ

Date:

Advertisements

ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಡಿಸೆಂಬರ್‌ 26ರ ಸಂಜೆ 6ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗಿರಿಜನ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಹೇಳಿದರು.

ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಗಿರಿಜನ ಉತ್ಸವ ಸಂಪೂರ್ಣ ಎಸ್‌ಟಿ (ಪ.ಪಂಗಡ) ಜನಾಂಗದವರಿಗಾಗಿ ನಡೆಯುವ ಕಾರ್ಯಕ್ರಮವಾಗಿದ್ದು, ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಿಂದ ಬೇಡರ ಪಡೆ, ಪೋತ ರಾಜರ ಕುಣಿತ, ಕೋಲು ಕುಣಿತದವರು, ಡೊಳ್ಳುಕುಣಿತ, ವೀರಗಾಸೆ, ವಾದ್ಯ ಸಂಗೀತ, ಗಾರಡಿಗೊಂಬೆ, ಸುಗಮ ಸಂಗೀತ ಸೇರಿದಂತೆ ಅನೇಕ ಕಲಾತಂಡಗಳು ಭಾಗವಹಿಸಲಿವೆ. ಅದೇ ದಿನ ನಾಟಕ ಕಲಾವಿದರು ಮದಕರಿ ನಾಯಕನ ನಾಟಕ ಪ್ರದರ್ಶನ ಮಾಡಲಿದ್ದಾರೆ” ಎಂದರು.

“ಗ್ರಾಮೀಣ ಭಾಗಗಳಲ್ಲಿನ ಕಲೆಗಳು ಪ್ರಸ್ತುತ ದಿನಮಾನಗಳಲ್ಲಿ ನಶಿಸಿ ಹೋಗುವ ಕಾಲಘಟ್ಟದಲ್ಲಿ ಕಲೆಗಳನ್ನು ಇನ್ನು ಜೀವಂತವಾಗಿ ಉಳಿಸಿರುವುದು ಕನ್ನಡ ಸಂಸ್ಕೃತಿ ಇಲಾಖೆಯಾಗಿದೆ. ಜಗಳೂರು ತಾಲೂಕು ಆಡಳಿತ, ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆಸುವ ಕಾರ್ಯಕ್ರಮಕ್ಕೆ ಜಗಳೂರು ತಾಲೂಕಿನ ಪ್ರತಿ ಹಳ್ಳಿಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಪುರುಷರು ಭಾಗವಹಿಸಿ ಪ್ರೋತ್ಸಹಿಸಬೇಕು” ಎಂದರು.

Advertisements

“ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸರ್ಕಾರದ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಂಡು ಕಲಾವಿದರಿಂದ ಕಲೆಯನ್ನು ಪ್ರದರ್ಶಿಸುವ ಉತ್ತಮವಾದ ಕೆಲಸವನ್ನು ಈ ಇಲಾಖೆ ಮಾಡುತ್ತಿದೆ” ಎಂದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾತನಾಡಿ, “ಗ್ರಾಮೀಣ ಭಾಗಗಳಲ್ಲಿ ಜಾನಪದ ಕಲೆಗಳು ನಶಿಸಿಹೋಗುತ್ತವೆ. ಕಲೆಗಳನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಕಾರ್ಯಕ್ರಮಕ್ಕೆ ಜಗಳೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ ದೇವೇಂದ್ರಪ್ಪ ಅಧ್ಯಕ್ಷತೆಗೆ ಮನವಿ ಮಾಡಿಕೊಂಡಿದ್ದೇವೆ. ಈ ಗಿರಿಜನೋತ್ಸವ ಕಾರ್ಯಕ್ರಮಕ್ಕೆ ತಹಶೀಲಾರ್ ಸೈಯದ್ ಕಲೀಂ ಉಲ್ಲಾ ಚಾಲನೆ ನೀಡಲಿದ್ದಾರೆ. ತಾ.ಪಂ ಇಒ ಕೆ ಟಿ ಕರಿಬಸಪ್ಪ, ಪ. ಪಂ ಮುಖ್ಯಾಧಿಕಾರಿ ಲೋಕ್ಯಾನಾಯ್, ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎನ್ ಟಿ ಎರಿಸ್ವಾಮಿ, ತಾಲೂಕು ಅಧ್ಯಕ್ಷೆ ಸುಜಾತಮ್ಮ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಗಣಿತದಲ್ಲಿ ರಾಮಾನುಜನ್ ರವರ ಕೊಡುಗೆ ಅಪಾರ: ಅಶೋಕ ಸಜ್ಜನ

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಬಿ ಮಹೇಶ್ವರಪ್ಪ, ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎನ್ ಟಿ ಎರಿಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಲಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸುಜಾತಮ್ಮ, ದೈಹಿಕ ಸುರೇಶ್ ರೆಡ್ಡಿ, ಕಾಂಗ್ರೆಸ್ ಮುಖಂಡ ಪ್ರಭುಗೌಡ, ಪಲ್ಲಾಗಟ್ಟಿ ನಿರ್ದೇಶಕ ಪಕ್ಷದ ಕಾನನಕಟ್ಟೆ ಶೇಖರಪ್ಪ, ಮಾಳಮ್ಮನಹಳ್ಳಿ ವೆಂಕಟೇಶ್, ಮಾರುತಿ, ಜಯ್ಯಣ್ಣ, ತೋರಣ ಗಟ್ಟೆ ಬಡಪ್ಪ, ಪ ಪಂ ಸದಸ್ಯ ನಾಮ ನಿರ್ದೇಶನ ಸದಸ್ಯ ಸಣ್ಣ ತಾನಾಜಿ ಗೋಸಾಯಿ ಸೇರಿದಂತೆ ಬಹುತೇಕ ಮುಖಂಡರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X