ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬ ಒನಕೆಯಿಂದ ಹೊಡೆದು ಪತ್ನಿಯನ್ನೇ ಕೊಲೆಗೈದ ಘಟನೆ ಗುರುವಾರ ತಡರಾತ್ರಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಅಲ್ಲಾಪುರ ಎಂಬ ಗ್ರಾಮದಲ್ಲಿ ನಡೆದಿದೆ.
ಕಾಶಮ್ಮಾ ಗುತ್ತೆದಾರ (60) ಕೊಲೆಯಾದ ಮಹಿಳೆ, ಪತಿ ಮಾರುತಿ ಗುತ್ತೆದಾರ 62) ಬಂದಿತ ಆರೋಪಿ. ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ ಪತಿ ಮಾರುತಿ ರಾತ್ರಿ ಮಲಗಿದ್ದ ವೇಳೆ ಒನಕೆಯಿಂದ ತಲೆಗೆ ಹೊಡೆದಿದ್ದಾನೆ. ಪತ್ನಿ ಕಾಶಮ್ಮಾ ಸ್ಥಳದಲ್ಲೇ ಸಾವನಪ್ಪಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
“ಹತ್ಯೆಗೈದ ಆರೋಪಿ ಪ್ರತಿನಿತ್ಯ ಕುಡಿದು ಬಂದು ಜಗಳ ಮಾಡುತ್ತಿದ್ದನು. ಕೊಲೆಯಾದ ಮಹಿಳೆಯ ಪುತ್ರ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಗೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ರಟಕಲ್ ಪೊಲೀಸ್ ಠಾಣೆ ಪಿಎಸ್‌ಐ ಪುಷ್ಪಾ ಈದಿನ.ಕಾಮ್ ದೊಂದಿಗೆ ಮಾತನಾಡಿ ತಿಳಿಸಿದ್ದಾರೆ.