ಕೆಪಿಟಿಸಿಎಲ್ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ: ಸಚಿವ ಕೆ ಜೆ ಜಾರ್ಜ್

Date:

Advertisements

ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ತಾಂತ್ರಿಕ ವಿಭಾಗದಲ್ಲಿ 15-20 ವರ್ಷದಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡು ಸೇವಾ ಭದ್ರತೆ ಒದಗಿಸುವ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ಕಾನೂನಿನ ಅವಕಾಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಈ ಕುರಿತು ಮಾತನಾಡಿದ ಸಚಿವರು, “ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಲ್ಲಿ ಸ್ಟೇಷನ್ ಆಪರೇಟರ್‌ಗಳು, ಸ್ಟೇಷನ್ ಸಹಾಯಕರು, ಗ್ಯಾಂಗ್ ಮೆನ್ ಮತ್ತು ಮೀಟರ್ ರೀಡರ್ ಹುದ್ದೆಗಳಲ್ಲಿ ಸಾಕಷ್ಟು ಮಂದಿ 15-20 ವರ್ಷಗಳಿಗಿಂತ ಹೆಚ್ಚು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸೇವಾ ಭದ್ರತೆ ಒದಗಿಸಿ ಒಳಗುತ್ತಿಗೆ ವ್ಯಾಪ್ತಿಗೆ ತರಲು ಸರ್ಕಾರ ಯೋಚಿಸಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

Advertisements

“ಈ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯು ಈಗಾಗಲೇ ಒಂದು ಸುತ್ತಿನ ಸಮಾಲೋಚನೆ ನಡೆಸಿದೆ. ವಿವಿಧ ಹುದ್ದೆಗಳಲ್ಲಿ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುತ್ತಿರುವವರನ್ನು ಒಳಗುತ್ತಿಗೆಗೆ ಒಳಪಡಿಸುವ ಕುರಿತು ನಿಯಮಗಳಲ್ಲಿ ಅವಕಾಶಗಳಿರುವ ಬಗ್ಗೆ ಪರಿಶೀಲಿಸಿ ಇದೇ ಡಿಸೆಂಬರ್ 29ರೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ವರದಿ ಆಧರಿಸಿ ಸರಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ,” ಎಂದು ಜಾರ್ಜ್‌ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X