ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ ₹3 ಕೋಟಿ ಸಾಲ ಪಡೆದ ವಂಚಕರು: ಬಂಧನ

Date:

Advertisements

ಮನೆ ಮಾರಾಟ ಮಾಡಲು ಹೊರಟಿರುವ ಮಹಿಳೆಯೊಬ್ಬರ ಆಸ್ತಿ ದಾಖಲೆ ಪತ್ರಗಳನ್ನು ನಕಲು ಮಾಡಿ ಬೆಂಗಳೂರಿನ ಮೂರು ಬ್ಯಾಂಕ್‌ಗಳಲ್ಲಿ ಬರೋಬ್ಬರಿ ₹3 ಕೋಟಿ ಸಾಲ ಪಡೆದಿದ್ದ ಐವರು ಆರೋಪಿಗಳನ್ನು ಸದ್ಯ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ ಪೊಲೀಸರು) ಬಂಧಿಸಿದ್ದಾರೆ.

ಅಂಬುಜಾಕ್ಷಿ ನಾಗರಕಟ್ಟಿ (75) ಮೋಸ ಹೋದವರು. ಇವರು ಬೆಂಗಳೂರಿನ ಜೆ.ಪಿ.ನಗರದ 6ನೇ ಹಂತದ ನಿವಾಸಿ. ಇವರು ತಮ್ಮ 1,350 ಚದರ ಅಡಿಯ ನಿವೇಶನವನ್ನು ಮಾರಾಟ ಮಾಡಿ ತಮ್ಮ ಮಗನ ಜತೆಗೆ ವಿದೇಶದಲ್ಲಿ ವಾಸ ಮಾಡಲು ನಿರ್ಧಾರ ಮಾಡಿದ್ದರು.

ಈ ಹಿನ್ನೆಲೆ, ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ತಮ್ಮ ನಿವಾಸವನ್ನು ಮಾರಾಟ ಮಾಡಲು ನಿರ್ಧಾರ ಮಾಡಿದ್ದರು. ಹಾಗಾಗಿ, ಈ ಬಗ್ಗೆ ತಮ್ಮ ನೆರೆಹೊರೆಯವರಿಗೆ ಮಾಹಿತಿ ನೀಡಿದ್ದರು.

Advertisements

ಅವರ ನೆರೆಹೊರೆಯವರ ಪೈಕಿ ಮಂಜುನಾಥ್ ಎಂಬುವವರು ತಮ್ಮ ಸ್ನೇಹಿತ್ ಭಾಸ್ಕರ್ ಕೃಷ್ಣ ಎಂಬುವವರು ಮನೆ ಖರೀದಿ ಮಾಡುತ್ತಾರೆ ಎಂದು ಪರಿಚಯ ಮಾಡಿಕೊಟ್ಟಿದ್ದಾರೆ.

ಮನೆ ಖರೀದಿ ವಿಚಾರವಾಗಿ ಕೃಷ್ಣ ಅಂಬುಜಾಕ್ಷಿ ಅವರನ್ನು ಭೇಟಿ ಮಾಡಿ ಮನೆ ಖರಿದೀಸುತ್ತೇನೆ ಎಂದು ತಿಳಿಸಿ, ಮುಂಗಡವಾಗಿ ₹10 ಸಾವಿರ ಹಣ ನೀಡಿದ್ದರು. ಬಳಿಕ, ಕಾನೂನು ಅನುಮತಿ ಪಡೆಯಬೇಕು ಎಂದು ಮಹಿಳೆಯಿಂದ ಆಸ್ತಿ ದಾಖಲೆ ಪತ್ರಗಳ ನಕಲು ಪ್ರತಿಗಳನ್ನು ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: ಎಕ್ಸ್‌ನಲ್ಲಿ ಅಭಿಯಾನ ಆರಂಭ

ಮತ್ತೆ ಕೆಲವು ದಿನಗಳ ಬಳಿಕ, ಕೃಷ್ಣ ತನ್ನ ಸ್ನೇಹಿತ್ ಮಹೇಶ ಹಾಗೂ ಇತರ ಸ್ನೇಹಿತರೊಂದಿಗೆ ಬ್ಯಾಂಕ್ ಅಧಿಕಾರಿಗಳಂತೆ ಅಂಬುಜಾಕ್ಷಿಯವರ ಮನೆಗೆ ತೆರಳಿದ್ದಾರೆ.

ಈ ವೇಳೆ, ಕೃಷ್ಣ ತನಗೆ ಸಾಲ ಬೇಕಿದ್ದು, ಹಾಗಾಗಿ ಅಂಬುಜಾಕ್ಷಿ ಅವರ ಸಹಿ ಬೇಕು ಎಂದು ತಿಳಿಸಿದ್ದಾನೆ. ಈ ಹಿಂದೆ ಬ್ಯಾಂಕ್ ಉದ್ಯೋಗಿಯಾಗಿದ್ದ ಅಂಬುಜಾಕ್ಷಿ ಆತನ ಉದ್ದೇಶವನ್ನು ಅರಿತು ಪ್ರಶ್ನೆ ಮಾಡಿದ್ದಾಳೆ. ಬಳಿಕ, ತನ್ನ ಆಸ್ತಿಯನ್ನು ಆತನಿಗೆ ಮಾರಲು ನಿರಾಕರಿಸಿದ್ದಾಳೆ.

ನಂತರ ಅಂಬುಜಾಕ್ಷಿ ಅವರ ಹೆಸರಿನಲ್ಲಿ ಈಗಾಗಲೇ ಮೂರು ಬ್ಯಾಂಕ್‌ಗಳಲ್ಲಿ 3 ಕೋಟಿ ಸಾಲ ಪಡೆದಿರುವ ಬಗ್ಗೆ ತಿಳಿದುಬಂದಿದೆ. ಆರೋಪಿಗಳು ಬ್ಯಾಂಕ್‌ಗಳಿಂದಲೂ ಹಣ ಡ್ರಾ ಮಾಡಿಕೊಂಡಿದ್ದರು.

ಅಂಬುಜಾಕ್ಷಿ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಮತ್ತಿಬ್ಬರು ಬಂಧನಕ್ಕಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X