ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದೆ ತಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಬೇಕು. ಹದಿ ಹರೆಯದ ವಯಸ್ಸಿನಲ್ಲಿ ಕ್ಷಣಿಕ ಸುಖ ನೀಡುವ ಮಾದಕ ವಸ್ತುಗಳ ಮೋಹಕ್ಕೆ ಬಿದ್ದು ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಸಿಪಿಐ ಮಂಜುನಾಥ ನಡುವಿನಮನಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಗದಗ ಜಿಲ್ಲೆ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ ನರಗುಂದ ಪೊಲೀಸ್ ಠಾಣೆ ಹಾಗೂ ಪದವಿ ಪೂರ್ವ ಕಾಲೇಜು ಚಿಕ್ಕನರಗುಂದ ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮಾದಕ ವಸ್ತುಗಳ ಬಳಕೆ ಮತ್ತು ಪೂರೈಕೆಯ ವಿರುದ್ಧ ಹಮ್ಮಿಕೊಂಡಿದ್ದ ವಿಶೇಷ ಅಭಿಯಾನದಲ್ಲಿ ಮಾತನಾಡಿದರು.
“ಪ್ರಸ್ತುತ ದಿನಗಳಲ್ಲಿ ಯುವಜನರು ಹೆಚ್ಚಾಗಿ ಮಾದಕ ಪದಾರ್ಥಗಳ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳ ಸೇವನೆ ಮಾಡುವ ಯುವ ಸಮುದಾಯ ಹೆಚ್ಚಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದರಿಂದ ಸಮಾಜದ ಸ್ವಾಸ್ಥ್ಯ ಕೂಡಾ ಹಾಳಾಗುತ್ತಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಹೊಸ ಎಪಿಎಂಸಿ ನಿರ್ಮಾಣ; ಹಳೆ ಎಪಿಎಂಸಿ ಕುರಿತು ನಿರ್ಲಕ್ಷ್ಯ
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ, ಎಸ್‌ಡಿಎಂಸಿ ಅಧ್ಯಕ್ಷ ಶರಣಬಸಪ್ಪ ಹಳೇಮನಿ, ಕಾಲೇಜು ಪ್ರಾಂಶುಪಾಲ ಎಸ್ ವಿ ದಂಡನಾಯ್ಕರ ಹಾಗೂ ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.