ಗದಗ | ಡಿ.26ರಿಂದ ‘ಯುವನಿಧಿ’ ನೋಂದಣಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.

Date:

Advertisements

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ” ಯೋಜನೆಗೆ ಅರ್ಹ ಫಲಾನುಭವಿಗಳು ಡಿಸೆಂಬರ್ 26 ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು‌ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಪ್ರಕಟಣೆಯಲ್ಲಿ ತಿಳಿಸಿರುವ ಅವರು, “2023ರ ವರ್ಷದಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರರು ಮತ್ತು ಡಿಪ್ಲೊಮಾ ಪಡೆದ ನಿರುದ್ಯೋಗಿ ವಿದ್ಯಾವಂತರಿಗೆ ಕರ್ನಾಟಕ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು ಪಾವತಿಸಲಾಗುವುದು” ಎಂದು ಹೇಳಿದರು.

“ಡಿಸೆಂಬರ್ 26 ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಈ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಜನವರಿ 2024 ರಿಂದ ಯೋಜನೆ ಜಾರಿಗೊಳ್ಳಲಿದ್ದು, ಅರ್ಹ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ದೊರೆಯಲಿದೆ. ಪಧವೀದರರಿಗೆ ₹3,000 ಮಾಸಿಕ ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ ₹1,500 ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ್ ಜೋಡಣೆಯ ಅಭ್ಯರ್ಥಿಗಳಿಗೆ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

Advertisements

ಯುವ ನಿಧಿ ನೋಂದಣಿಗೆ ಚಾಲನೆ:

ಡಿಸೆಂಬರ್‌ 26ರ ಮಂಗಳವಾರ ಯುವನಿಧಿ ಯೋಜನೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿಗಳ ಘನ ಉಪಸ್ಥಿತಿಯಲ್ಲಿ ಹಾಗೂ ಇತರೆ ಎಲ್ಲ ಸಚಿವ ಸಂಪುಟದ ಸಚಿವರುಗಳು, ವಿಧಾನಸಭಾ ಸದಸ್ಯರುಗಳು, ವಿಧಾನ ಪರಿಷತ್ ಸದಸ್ಯರುಗಳು ಮತ್ತು ಇತರೆ ಗಣ್ಯರ ಉಪಸ್ಥಿತಿಯಲ್ಲಿ ನೋಂದಣಿ ಪ್ರಕಿಯೆ ಚಾಲನಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮಕ್ಕಳ ಕಲಿಕೆಗೆ ಶಿಕ್ಷಕರ ಜೊತೆಗೆ ಪೋಷಕರ ಪಾತ್ರ ಮುಖ್ಯ: ಸಿಆರ್‌ಪಿ ಜಿ ಗುಂಡೂರಾವ್

ನೋಂದಣಿ ಪ್ರಕ್ರಿಯೆ:

ಅರ್ಹ ನಿರುದ್ಯೋಗಿಗಳು ಸೇವಾಸಿಂಧು ಪೋರ್ಟಲ್ https://sevasindhugs.karnataka.gov.in ಗೆ‌ ಭೇಟಿ ನೀಡಿ ನೋಂದಣಿ‌ ಮಾಡಬಹುದು.
ಇದಲ್ಲದೇ ಕರ್ನಾಟಕ‌ ಒನ್, ಗ್ರಾಮ‌ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X