ಯಾದಗಿರಿ | ರಾಷ್ಟ್ರೀಯ ಹೆದ್ದಾರಿ‌ಯಲ್ಲಿ ಬಸ್‌ ನಿಲುಗಡೆಗೆ ದಸಂಸ ಆಗ್ರಹ

Date:

Advertisements

ಶಹಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ‌ ಬಳಿ ಕೊಂಗಂಡಿ ಗ್ರಾಮದ ಮಾರ್ಗವಾಗಿ ತೆರಳುವ ಬಸ್‌ಗಳನ್ನು ಸದರಿ ಗ್ರಾಮದಲ್ಲಿ ನಿಲುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಯಾದಗಿರಿ ಜಿಲ್ಲಾ ಸಮಿತಿಯಿಂದ ಶಹಾಪುರ ಘಟಕದ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿದರು.

“ಕೊಂಗಂಡಿ ಗ್ರಾಮದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಈ ಮಾರ್ಗದಲ್ಲಿ ಸಂಚರಿಸುವ ಬಸ್‌ಗಳನ್ನು ಕೊಂಗಂಡಿ ಗ್ರಾಮದಲ್ಲಿ ನಿಲ್ಲಿಸಬೇಕು. ಶಹಾಪುರ ನಗರದ ಹೊಸ ಬಸ್ ನಿಲ್ದಾಣದಿಂದ ಪ್ರತಿಯೊಂದು ಗ್ರಾಮಗಳಿಗೆ ತೆರಳುವ ಬಸ್‌ಗಳು ಹಳೆ ಬಸ್ ನಿಲ್ದಾಣದ ಮಾರ್ಗವಾಗಿ ಸಂಚರಿಸಬೇಕು” ಎಂದು ಆಗ್ರಹಿಸಿದರು.

“ಅಧಿಕಾರಿಗಳು ಈ ವಿಷಯದಲ್ಲಿ ಹೆಚ್ಚಿನ ಕಾಳಜಿ ವಹಿಸಿ ಗಂಭೀರತೆಯಿಂದ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ಶಾಲೆ ಕಾಲೇಜಿಗೆ ತೆರಳುವುದಕ್ಕಾಗಿ ಅನಾನುಕೂಲ ಇರುವುದರಿಂದ ಸಮಯಕ್ಕೆ ಸರಿಯಾಗಿ ತೆರಳಲಾಗುತ್ತಿಲ್ಲ. ಕೊಂಗಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯಾರ್ಥಿಗಳು ಬಸ್‌ಗಾಗಿ ಕಾದು ಕುಳಿತಿದ್ದರೂ ಕೂಡ ಯಾವುದೇ ಬಸ್ ನಿಲ್ಲದೇ ಇರುವುದರಿಂದ ವಿದ್ಯಾರ್ಥಿಗಳ ಸಮಯ ಮೀರುತ್ತಿದ್ದು, ಶಾಲೆ/ಕಾಲೇಜುಗಳಿಗೆ ತೆರಳದೆ ಮನೆಗೆ ವಾಪಸ್ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ವಿದ್ಯಾರ್ಥಿಗಳ ಅನುಕೂಲಕ್ಕಾದರೂ ಬಸ್‌ ವ್ಯವಸ್ಥೆ ಕಲ್ಪಿಸಿ, ಈ ಮಾರ್ಗ ಮಧ್ಯೆ ಸಂಚರಿಸುವ ಬಸ್‌ಗಳು ಬೆಳಿಗ್ಗೆ 6 ರಿಂದ 12ರವರೆಗೆ ಮತ್ತು ಸಂಜೆ 4ರಿಂದ 10:30ರ ಸಮಯದವರೆಗೆ ನಿಲುಗಡೆ ಮಾಡಿದರೆ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ. ವಿದ್ಯಾರ್ಥಿ ಮತ್ತು ಸಾರ್ವಜನಿಕರಿಗೆ ಬಸ್‌ ವ್ಯವಸ್ಥೆ ಮಾಡದಿದ್ದರೆ ಡಿಸೆಂಬರ್ 29ರಂದು ಬೆಳಿಗ್ಗೆ 6ಕ್ಕೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಾರ್ವಜನಿಕರೊಂದಿಗೆ ಕೊಂಗಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

“ಶಹಾಪುರ ನಗರದ ಹೊಸ ಬಸ್ ನಿಲ್ದಾಣದಿಂದ ಪ್ರತಿಯೊಂದು ಗ್ರಾಮಕ್ಕೆ ಹಾಗೂ ಅಂತರ ಜಿಲ್ಲೆಗೆ ಸಂಚರಿಸುವ ಬಸ್‌ಗಳು ಹಳೆ ಬಸ್ ನಿಲ್ದಾಣದ ಮಾರ್ಗವಾಗಿ ಹೋದರೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ರೈತರಿಗೆ, ವೃದ್ದರಿಗೆ ಪ್ರಯಾಣ ಮಾಡಲು ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿ, ಬಸ್ ನಿಲುಗಡೆಗೆ ಕ್ರಮ ವಹಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಅಕ್ರಮವಾಗಿ ಹೂಳಲಾದ ಎಂಡೋಸಲ್ಫಾನ್ ಪ್ರಕರಣ; ನೊಟೀಸ್‌ ಜಾರಿ

ಈ ಸಂದರ್ಭದಲ್ಲಿ ಶರಣರೆಡ್ಡಿ ಹತ್ತಿಗೂಡುರ್, ಶರಣಪ್ಪ ಛಲವಾದಿ, ಹನುಮಂತ ದೊಡ್ಡಮನಿ, ಕಂಡಪ್ಪ ಅಯ್ಯಳ ಬಿ, ಬಸವರಾಜ್ ಪರಸಾಪುರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X