ಬೆಂಗಳೂರಿನ ಅಂಗಡಿ ಮುಂಗಟ್ಟುಗಳಂಥ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯವಿಲ್ಲದಿದ್ದರೆ ಅಂಥ ಅಂಗಡಿಗಳ ಪರವಾನಗಿ ರದ್ದುಗೊಳಿಸುವುದಾಗಿ ಬಿಬಿಎಂಪಿ ಆದೇಶಿಸಿದೆ.
ಫೆ.28ರ ವೇಳೆಗೆ ಅಂಗಡಿ, ಹೋಟೆಲ್‌ಗಳು ಹಾಗೂ ಮಾಲ್‌ಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇಲ್ಲದಿದ್ದರೆ ಪರವಾನಗಿ ರದ್ದುಗೊಳಿಸುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶಿಸಿದೆ.
ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅಧ್ಯಕ್ಷತೆಯಲ್ಲಿ ಭಾಷಾ ಬಳಕೆಯ ಬಗ್ಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ
ಎಲ್ಲ ಹೋಟೆಲ್‌ಗಳು ಹಾಗೂ ಇತರ ಅಂಗಡಿಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ರಾಜ್ಯದ ಅಧಿಕೃತ ಭಾಷೆ ಬಳಸಬೇಕು. ಆದೇಶ ಪಾಲಿಸದ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆದೇಶಿಸಿದೆ.
ಬೆಂಗಳೂರು ನಗರದಲ್ಲಿ 1400 ಕಿ.ಮೀ ಮುಖ್ಯ ರಸ್ತೆ ಹಾಗೂ ಉಪ ರಸ್ತೆಗಳಿವೆ. ರಾಜ್ಯ ಭಾಷೆ ಬಳಕೆಯ ನಾಮಫಲಕಗಳ ನಿಯಮಗಳನ್ನು ಅನುಸರಿಸದ ಅಂಗಡಿಗಳ ಬಗ್ಗೆ ಸಮೀಕ್ಷೆ ನಡೆಸಲಾಗುವುದು ಎಂದರು.
ಇತ್ತೀಚಿಗೆ ಕನ್ನಡಪರ ಸಂಘಟನೆಗಳು ಚಿಕ್ಕಪೇಟೆಯಲ್ಲಿ ಕನ್ನಡ ನಾಮಫಲಕಕ್ಕೆ ಸಂಬಂಧಿಸಿದಂತೆ ಅಂಗಡಿಗಳ ಮೇಲೆ ಪ್ರತಿಭಟನೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳೀಯ ಭಾಷೆ ಕಡ್ಡಾಯವಿಲ್ಲದಿದ್ದರೆ ಪರವಾನಗಿ ರದ್ದುಗೊಳಿಸಲಾಗುವುದು ಎಂದರು.