ರೈತರ ಆತ್ಮಹತ್ಯೆ ಕುರಿತು ಹಗುರ ಮಾತು | ಸಚಿವ ಶಿವಾನಂದ ಪಾಟೀಲ್ ಕ್ಷಮೆ ಕೇಳಬೇಕು:‌ ಬಿಜೆಪಿ ನಾಯಕರ ಆಗ್ರಹ

Date:

Advertisements

ಸಾಲಮನ್ನಾಕ್ಕಾಗಿ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತೆ ಎಂಬ ಸಚಿವ ಶಿವಾನಂದ ಪಾಟೀಲ್​​ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಎಕ್ಸ್‌ ತಾಣದಲ್ಲಿ ವಾಗ್ದಾಳಿ ನಡೆಸಿ, “ಪದೇ ಪದೇ ಅನ್ನದಾತರನ್ನು ಅವಮಾನಿಸುವುದು, ರೈತರ ಜೀವನವನ್ನು ಹಂಗಿಸುವುದು, ರೈತರ ಮೇಲೆ ದೌರ್ಜನ್ಯ ನಡೆಸುವುದು, ಕಾಂಗ್ರೆಸ್ ತನ್ನ ಸಂಸ್ಕೃತಿಯನ್ನಾಗಿ ಅಳವಡಿಸಿಕೊಂಡಂತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಶಿವಾನಂದ ಪಾಟೀಲರಿಗೆ ರೈತರನ್ನು ನಿಂದಿಸಿ ಅವಹೇಳನ ಮಾಡುವ ಉಸ್ತುವಾರಿ ವಹಿಸಿಕೊಟ್ಟಂತಿದೆ” ಎಂದು ಕಿಡಿಕಾರಿದ್ದಾರೆ.

“ಈ ಹಿಂದೆಯೂ ಶಿವಾನಂದ ಪಾಟೀಲರು ‘ರೈತರು ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ’
ಎಂದು ಅಮೂಲ್ಯ ರೈತ ಜೀವಗಳನ್ನು ಹಗುರವಾಗಿ ಪರಿಗಣಿಸಿ ಅಮಾನವೀಯ ಹೇಳಿಕೆ ನೀಡಿದ್ದ ನೆನಪು ಇನ್ನೂ ಹಸಿರಾಗಿರುವಾಗಲೇ, ಮತ್ತೆ ಅದೇ ದಾಟಿಯ ಅವರ ರೈತ ದ್ವೇಷಿ ಮಾತುಗಳು ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಸ್ಪಷ್ಟವಾಗಿ ಪ್ರತಿನಿಧಿಸುತ್ತದೆ” ಎಂದು ಹರಿಹಾಯ್ದಿದ್ದಾರೆ.

Advertisements

“ಬರಗಾಲ ಬರಲೆಂದೇ ಅಪೇಕ್ಷಿಸುತ್ತಾರೆ’ ಎಂಬ ವಂಗ್ಯದ ಮಾತುಗಳು ರೈತರ ಮೇಲಿನ ಕ್ರೌರ್ಯದ ಮನಸ್ಥಿತಿ ಪ್ರತಿಬಿಂಬಿಸುತ್ತಿದೆ. ‘ಪುಕ್ಸಟ್ಟೆ ಆಶ್ವಾಸನೆ’ ನೀಡಿ ಅಧಿಕಾರಕ್ಕೆ ಬಂದವರು ನೀವು, ರೈತರಿಗೆ ಸರ್ಕಾರ ಏನೇ ನೀಡಿದರೂ ಅದು ಈ ರಾಜ್ಯದ ಅಭಿವೃದ್ಧಿಯ ಕಾಳಜಿಯೇ ಹೊರತೂ ಭಿಕ್ಷೆಯಲ್ಲ, ನಮ್ಮ ರೈತರು ಸ್ವಾಭಿಮಾನಿಗಳು, ಅವರು ಪರಿಹಾರಕ್ಕಾಗಿ ಕಾಯುವುದಿಲ್ಲ, ಬದಲಿಗೆ ರೈತರ ಕಷ್ಟಗಳಿಗೆ ಸ್ಪಂದಿಸುವ ಸರ್ಕಾರಗಳನ್ನ ಬಯಸುತ್ತಾರೆ, ಆದರೆ ಆಮಿಷಗಳನ್ನೊಡ್ಡಿ, ಅಧಿಕಾರಕ್ಕೆ ಬಂದು ನಿತ್ಯವೂ ಬೆಲೆ ಏರಿಕೆಯ ಬರೆ ಎಳೆಯುವ ನಿಮ್ಮನ್ನು ಶಾಶ್ವತವಾಗಿ ತಿರಸ್ಕರಿಸುವ ಕಾಲ ಹತ್ತಿರದಲ್ಲಿದೆ” ಎಂದಿದ್ದಾರೆ.

“ಈ ಕಾಂಗ್ರೆಸ್ ಸರ್ಕಾರ ‘ನಿರ್ದಯ ಸರ್ಕಾರ, ದಪ್ಪ ಚರ್ಮದ ಮಂತ್ರಿಗಳನ್ನು ಪೋಷಿಸುತ್ತಿರುವ ಸರ್ಕಾರ’. ಸಚಿವ ಶಿವಾನಂದ ಪಾಟೀಲರು ಈ ಕೂಡಲೇ ಕ್ಷಮೆ ಕೋರಬೇಕೆಂದು ಆಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಾಲ ಮನ್ನಾಕ್ಕಾಗಿ ಬರಗಾಲ ಬರಬೇಕೆಂಬುದು ರೈತರ ಆಸೆ: ಸಚಿವ ಶಿವಾನಂದ ಪಾಟೀಲ್

ರೈತರನ್ನು ಕಡೆಗಣಿಸಿದರೆ ಅವರ ಶಾಪಕ್ಕೆ ಸರ್ಕಾರ ಗುರಿ

“ಸಚಿವ ಶಿವಾನಂದ ಪಾಟೀಲ್​ ಹಿಂದೆಯೂ ಸಹ ರೈತರ ಆತ್ಮಹತ್ಯೆ ವಿಚಾರವಾಗಿ ಮಾತನಾಡಿದ್ದರು. ಪರಿಹಾರ ಜಾಸ್ತಿ ಸಿಗುತ್ತೆಂದು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದಿದ್ದರು. ಮೊದಲು ಒಂದು ಲಕ್ಷ ಪರಿಹಾರ ಇತ್ತು, ಈಗ 5 ಲಕ್ಷ ರೂ. ಕೊಡುತ್ತಾರೆ. ಅದಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೇಳಿದ್ದರು. ಇದು ರೈತ ವಿರೋಧಿ ಸರ್ಕಾರ, ಈ ಸರ್ಕಾರಕ್ಕೆ ನಾಚಿಕೆ ಆಗಬೇಕು. ಹಿಂದೆ ರೈತರ ಬಗ್ಗೆ ಹಗುರವಾಗಿ ಹೇಳಿದಾಗಲೂ ಕ್ರಮ ತೆಗೆದುಕೊಳ್ಳಲಿಲ್ಲ. ಮುಖ್ಯಮಂತ್ರಿಯಾದರೂ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ರೈತರನ್ನು ಕಡೆಗಣಿಸಿದರೆ ಅವರ ಶಾಪಕ್ಕೆ ಸರ್ಕಾರ ಗುರಿಯಾಗುತ್ತದೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್​ ಅಶೋಕ್​ ಹೇಳಿದ್ದಾರೆ.

ಮಂತ್ರಿಮಂಡಲದಲ್ಲಿ ಮುಂದುವರಿಯಬಾರದು

“ಶಿವಾನಂದ್ ಪಾಟೀಲ್ ಸ್ವತಃ ಒಬ್ಬ ರೈತರಾಗಿ ಇಂತ ಹೇಳಿಕೆ ದುರದೃಷ್ಟಕರ. ಮಂತ್ರಿ ಮಂಡಲದಲ್ಲಿ ಅವರು ಮುಂದುವರಿಯಬಾರದು. ಇದು ರೈತ ವಿರೋಧಿ ಸರ್ಕಾರ. ಸಾಲಮನ್ನಾಕ್ಕಾಗಿ ರೈತರು ಬರಗಾಲಕ್ಕಾಗಿ ಕಾಯುತ್ತಿದ್ದಾರೆ ಅನ್ನೋದು ಸೂಕ್ತವಲ್ಲ. ಅವರು ಮಾನಸಿಕರಾಗಿ ಅಸ್ವತ್ಥರಾಗಿದ್ದಾರೆ. ಕರ್ನಾಟಕಕ್ಕೆ ಅವರು ಅವಮಾನ ಮಾಡಿದ್ದಾರೆ. ತಕ್ಷಣವೇ ಸಚಿವ ಸ್ಥಾನದಿಂದ ವಜಾ ಆಗಬೇಕು” ಎಂದು ಶಾಸಕ ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X