ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿ ಅಪಪ್ರಚಾರ ಮಾಡುತ್ತಿದ್ದಾರೆ: ಸಚಿವ ಶಿವಾನಂದ ಪಾಟೀಲ್

Date:

Advertisements

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಕಾರಣಕ್ಕೆ ಬಿಜೆಪಿ ಹೊಸ ನಾಯಕರು ರೈತರು, ಸಾಲಮನ್ನಾ ವಿಷಯದಲ್ಲಿ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಮ್ಮ ಹೇಳಿಕೆಗೆ ಸಮಜಾಯಿಷಿ ನೀಡಿದ್ದಾರೆ.

ಸೋಮವಾರ ವಿಜಯಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿನ ನನ್ನ ಮಾತನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ. ಚುನಾವಣೆ ಗೆಲ್ಲುವ ಕುರಿತು ಪಕ್ಷ ಬಿಜೆಪಿ ಹೊಸ ನಾಯಕರಿಗೆ ನೀಡಿರುವ ಗುರಿ ಗೆಲ್ಲುವುದಕ್ಕಾಗಿ ನನ್ನ ಹೇಳಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ದೇಶದಲ್ಲಿ ಈ ಹಿಂದೆ ಭೀಕರ ಬರ ಆವರಿಸಿದ್ದಾಗ ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ದೇಶದ ರೈತರ 72 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದರು. ರಾಜ್ಯ ಸರ್ಕಾರ ಬರದ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಮಾಡಲಿ ಎಂದು ಬಯಸುವ ಬಿಜೆಪಿ ನಾಯಕರು, ಕೇಂದ್ರದಲ್ಲಿ ತಮ್ಮದೇ ಸರ್ಕಾರ ಅಧಿಕಾರದಲ್ಲಿದೆ, ದೇಶದ 14 ರಾಜ್ಯಗಳಲ್ಲಿ ಭೀಕರ ಬರ ಆವರಿಸಿದ್ದು, ಸಾಲಮನ್ನಾ ಮಾಡಿಸಲಿ” ಎಂದು ಸವಾಲು ಹಾಕಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

“ಕೇಂದ್ರದ ಬಿಜೆಪಿ ಸರ್ಕಾರ ರೈತ ವಿರೋಧಿ ಎಪಿಎಂಸಿ ಕಾನೂನು ಜಾರಿಗೆ ತಂದುದನ್ನು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿತ್ತು. ತಮ್ಮ ಇಂಥ ತಪ್ಪುಗಳನ್ನು ಮುಚ್ಚಿಕೊಳ್ಳಲು ಹೀಗೆ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ಕೇಂದ್ರ ಸರ್ಕಾರ ಸಕ್ಕರೆ, ಕೊಬ್ಬರಿ, ಈರುಳ್ಳಿ ರಫ್ತು ಸ್ಥಗಿತ ಮಾಡಿದ್ದರಿಂದ ಬೆಲೆ ಕುಸಿತವಾಗಿದೆ. ಕಬ್ಬು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 60 ರೂ. ಗೆ ಕೆಜಿ ಮಾರಾಟವಾಗುತ್ತದೆ. ಆದರೆ ರಾಜ್ಯದಲ್ಲಿ ನಾವು ಪ್ರತಿ ಟನ್ ಕಬ್ಬಿಗೆ 3500 ರೂ. ದರ ನೀಡುವ ಅವಕಾಶ ಇದ್ದರೂ ಕೇಂದ್ರದ ನೀತಿಯಿಂದಾಗಿ 3100 ರೂ. ದರ ನೀಡುತ್ತಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X