ನಾಮಫಲಕದಲ್ಲಿ ಶೇ.60 ಕನ್ನಡ ಕಡ್ಡಾಯ; ನೆಲದ ನಿಯಮ ಪಾಲನೆ ಮಾಡಿ: ಸಿದ್ದರಾಮಯ್ಯ ಮನವಿ

Date:

Advertisements

”ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಮನವಿ ಮಾಡಿರುವ ಅವರು, “ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ” ಎಂದಿದ್ದಾರೆ.

“ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು ‘ಕನ್ನಡಿಗ’ರೇ ಎಂದು ಭಾವಿಸಿದ್ದೇವೆ. ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ ‘ಹೆಮ್ಮೆಯ ಕನ್ನಡಿಗ’ರಾಗಿ” ಎಂದು ಕರೆ ನೀಡಿದ್ದಾರೆ.

Advertisements

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಈ ಹಿಂದೆ ಮನವಿ ಮಾಡಿದ್ದರು. ಈ ಕುರಿತಂತೆ ಸಭೆ ನಡೆಸಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ‘ಕನ್ನಡ ನಾಮಫಲಕ ಹಾಕದೇ ಇರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಆದೇಶ ಹಾಗೂ ಪಾಲಿಕೆ ಸುತ್ತೋಲೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು’ ಎಂದು ಭರವಸೆ ನೀಡಿದ್ದರು.

ನಿಯಮ ಉಲ್ಲಂಘಟನೆಗೆ ಏನು ಕ್ರಮ?

‘ನಾಮಫಲಕಗಳಲ್ಲಿ ಕನ್ನಡ ಬಳಸದ ಅಂಗಡಿಗಳನ್ನು ಕಾನೂನಿನ ಪ್ರಕಾರ ಅಮಾನತಿನಲ್ಲಿಟ್ಟು, ಪರವಾನಗಿ ರದ್ದುಗೊಳಿಸಲಾಗುವುದು. ಈ ಬಗ್ಗೆ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಯ ಮೇಲೂ ಶಿಸ್ತು ಕ್ರಮ ಜರುಗಿಸಲಾಗುವುದೆಂದು’ ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X