ಬಿಬಿಎಂಪಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುವುದು ನಮ್ಮ ಆದ್ಯತೆ: ಡಿ ಕೆ ಶಿವಕುಮಾರ್

Date:

Advertisements

ಬೆಂಗಳೂರಿನಲ್ಲಿ ಬಡವರ ಮಕ್ಕಳು ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು ಅಹವಾಲು ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

“ಬೆಂಗಳೂರಿನ ಅತಿಥಿ ಉಪನ್ಯಾಸಕರು ಇಂದು ನನ್ನನ್ನು ಭೇಟಿ ಮಾಡಿ, ನಮ್ಮನ್ನು ಸೇವೆಯಲ್ಲಿ ಮುಂದುವರಿಸಬೇಕು. ಸೆಕ್ಯುರಿಟಿ ಏಜೆನ್ಸಿ ಅವರು ಶಿಕ್ಷಕರನ್ನು ನೇಮಿಸುತ್ತಾರೆ ಎಂಬ ದೂರು ಬಂದಿದೆ. ಯಾರು ಯಾವ ಕೆಲಸ ಮಾಡಬೇಕೋ ಅವರು ಅದನ್ನೇ ಮಾಡಬೇಕು. ಇಂದು ಆಗಮಿಸಿದವರಲ್ಲಿ ಉತ್ತಮವಾಗಿ ಬೋಧನೆ ಮಾಡುವ ಶಿಕ್ಷಕರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ವಿಚಾರವಾಗಿ ಮತ್ತೆ ಪರಿಶೀಲನೆ ಮಾಡುತ್ತೇನೆ” ಎಂದರು.

Advertisements

“ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದೆ ಎಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಸುಪರ್ದಿಗೆ ಈ ಶಾಲೆಗಳನ್ನು ನೀಡಿದ್ದೇವೆ. ಸರಿಯಾಗಿ ತರಬೇತಿ ಹೊಂದಿರುವ ಶಿಕ್ಷಕರನ್ನು ನೇಮಿಸಬೇಕಿದೆ. ಬಿಬಿಎಂಪಿ ವತಿಯಿಂದ ಎಲ್ಲ ಮೂಲಸೌಕರ್ಯ ಒದಗಿಸಲಾಗುವುದು, ಶಿಕ್ಷಣದ ಜವಾಬ್ದಾರಿಯನ್ನು ಇಲಾಖೆಗೆ ವಹಿಸಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಸಚಿವ ಬೈರತಿ ಸುರೇಶ್ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ನಮ್ಮಲ್ಲಿ ಕೆಲವು ಯೋಜನಾ ಪ್ರಾಧಿಕಾರಗಳು ಇವೆ. ಅವುಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಬೇಕು. ನಾಲ್ವರು ಸದಸ್ಯರನ್ನು ನೇಮಿಸಿ, ಎಲ್ಲರಿಗೂ ಅವಕಾಶ ಮಾಡಿಕೊಡಬೇಕು. ಈ ದೃಷ್ಟಿಯಿಂದ ಮಾರ್ಗದರ್ಶನ ನೀಡಿದ್ದೇನೆ. ಇನ್ನು ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚನೆ ಜವಾಬ್ದಾರಿ ಸಚಿವರಿಗೆ ನೀಡಿದ್ದು, ಸಚಿವರ ಜೊತೆ ಚರ್ಚೆ ಮಾಡುತ್ತಿದ್ದೇವೆ” ಎಂದರು.

ನಿಗಮ, ಮಂಡಳಿಗಳಿಗೆ ಯಾವಾಗ ನೇಮಕ ಆಗಲಿದೆ ಎಂದು ಕೇಳಿದಾಗ, “ಯಾವುದೇ ಕ್ಷಣದಲ್ಲಿ ಬೇಕಾದರೂ ಆಗಬಹುದು” ಎಂದು ತಿಳಿಸಿದರು.

ಕನ್ನಡ ನಾಮಫಲಕ ವಿಚಾರವಾಗಿ ಕನ್ನಡಪರ ಸಂಘಟನೆಗಳ ಹೋರಾಟದ ಬಗ್ಗೆ ಕೇಳಿದಾಗ, “ಕನ್ನಡ ಪರ ಸಂಘಟನೆಗಳು ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಮಾಡಬೇಕು. ಹೋರಾಟದ ಹೆಸರಿನಲ್ಲಿ ಯಾರ ಆಸ್ತಿಪಾಸ್ತಿಗೂ ಹಾನಿ ಮಾಡಬಾರದು. ಬೆಂಗಳೂರಿಗೆ ಬಂದು ವ್ಯಾಪಾರ ಮಾಡಿ ಬದುಕುತ್ತಿರುವವರು ತಮ್ಮ ಮಳಿಗೆ ಬೋರ್ಡ್ ನಲ್ಲಿ ಶೇ.60ನಷ್ಟು ಕನ್ನಡ ಇರಬೇಕು ಎಂಬ ಕಾನೂನು ಇದ್ದು, ಯಾರು ಎಷ್ಟೇ ದೊಡ್ಡ ವ್ಯಾಪಾರಸ್ಥರಾದರೂ ಎಲ್ಲರೂ ಅದನ್ನು ಪಾಲನೆ ಮಾಡಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X