34 JN.1 ಸೋಂಕಿತ ಪ್ರಕರಣ ಪತ್ತೆ | ಇಂದು ಸಂಪುಟ ಉಪ ಸಮಿತಿ ಸಭೆ: ದಿನೇಶ್ ಗುಂಡೂರಾವ್

Date:

Advertisements

ರಾಜ್ಯದಲ್ಲಿ ಒಟ್ಟು 34 JN.1 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಂಗಳವಾರ ಸಂಪುಟ ಉಪ ಸಮಿತಿ ಸಭೆಯಲ್ಲಿ ವಿಸ್ತೃತ ಚರ್ಚೆ ಮಾಡಲಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ರಾಜ್ಯದ ಜನರು ಕೋವಿಡ್ ಸಂಬಂಧ ಆತಂಕ ಪಡುವ ಅಗತ್ಯವಿಲ್ಲ. JN.1 ಉಪತಳಿ ಅಪಾಯಕಾರಿ ಅಲ್ಲ ಎಂಬುದನ್ನ ತಜ್ಞರು ಈಗಾಗಲೇ ಹೇಳಿದ್ದಾರೆ. ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸ್ಬಲ್ಪ ಎಚ್ಚರಿಕೆ ವಹಿಸಬೇಕು” ಎಂದರು.

“ರಾಜ್ಯದಲ್ಲಿ ಕೋವಿಡ್ ಸೊಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಡೆಸಿದ ಜಿನೋಮೊ ಸಿಕ್ವೇನ್ಸಿಂಗ್‌ನಲ್ಲಿ ಒಮೆಕ್ರಾನ್ ವೈರಾಣು ಉಪತಳಿ JN.1 ಪತ್ತೆಯಾಗಿದೆ. ಸುಮಾರು 34 ಕೋವಿಡ್ ಸೊಂಕಿತರಿಗೆ JN.1 ಪಾಸಿಟಿವ್ ಬಂದಿದೆ” ಎಂದು ತಿಳಿಸಿದ್ದಾರೆ.

Advertisements

“JN.1 ವೈರಾಣು ರಾಜ್ಯದಲ್ಲಿ ಇರಬಹುದು ಎಂದು ಮೊದಲೇ ನಿರೀಕ್ಷಿಸಲಾಗಿತ್ತು. ಆದರೆ ಅದು ಜಿನೋಮೊ ಸಿಕ್ವೆನ್ಸಿಂಗ್ ನಲ್ಲೇ ನಮಗೆ ಸ್ಪಷ್ಟವಾಗಿ ಗೊತ್ತಾಗೊದು. ಹೀಗಾಗಿ ಜಿನೋಮೊ ಸಿಕ್ವೆನ್ಸಿಂಗ್ ಗೆ ಕಳಿಸಿದ್ವಿ.‌ ಇದೀಗ ವರದಿ ಬಂದಿದ್ದು, ರಾಜ್ಯದಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

“ಆರೋಗ್ಯ ಇಲಾಖೆಯಿಂದ ಕೂಡ ಈಗಾಗಲೇ ಎಲ್ಲ ರೀತಿಯ ತಯಾರಿಗಳನ್ನ ಮಾಡಿಕೊಳ್ಳಲಾಗಿದೆ. ಕೋವಿಡ್ ಎದುರಿಸಲು ಸನ್ನದ್ದರಾಗುವಂತೆ ಎರಡು ಮೂರು ಬಾರಿ ಸಭೆ ನಡೆಸಿ ಆಸ್ಪತ್ರೆಗಳಿಗೆ ಹಾಗೂ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

“JN.1 ಪ್ರಕರಣಗಳ ಸಂಬಂಧ ಯಾರು ಹೊಸದಾಗಿ ಗಾಬರಿಪಡುವ ಅಗತ್ಯವಿಲ್ಲ.‌ ಬಹುತೇಕ JN.1 ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆಯಾಗಿವೆ. ಬೆಂಗಳೂರಿನಲ್ಲಿ – 20, ಮೈಸೂರು – 4, ಮಂಡ್ಯ – 3 ಸೇರಿದಂತೆ ರಾಮನಗರದಲ್ಲಿ – 1 ಒಮೆಕ್ರಾನ್ ಉಪತಳಿ JN.1 ಪತ್ತೆಯಾಗಿದ್ದು, ಇಲ್ಲಿಯವರೆಗೆ ಕೋವಿಡ್ ಬಂದವರಲ್ಲಿ ಮೂವರು ಸಾವನ್ನಪ್ಪಿರುವುದು ವರದಿಯಾಗಿದೆ. ಸಾವನ್ನಪ್ಪಿದವರಲ್ಲೂ JN.1 ಪಾಸಿಟಿವ್ ಇದ್ದಿದ್ದು ವರದಿಯಲ್ಲಿ ಬೆಳಕಿಗೆ ಬಂದಿದೆ” ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ನಾಳೆ ಸಭೆ

“ಕೋವಿಡ್ ಸಂಬಂಧ ರಚಿಸಲಾಗಿರುವ ಕ್ಯಾಬಿನೆಟ್ ಉಪಸಮಿತಿ ಸಭೆ ನಾಳೆ ನಡೆಯಲಿದೆ. ನಾಳೆಯ ಸಭೆಯಲ್ಲಿ JN.1 ಪ್ರಕರಣಗಳು ಸೇರಿದಂತೆ, ಕೋವಿಡ್ ನಿಯಂತ್ರಣ ಹಾಗೂ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು.‌ ಸದ್ಯಕ್ಕೆ ಯಾವುದೇ ಹೊಸ ನಿರ್ಬಂಧವಿಲ್ಲ. ಈಗಾಗಲೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿಯನ್ನ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರು ಮಾಸ್ಕ್ ಧರಿಸುವುದು ಉತ್ತಮ ಎಂಬುದು ನಮ್ಮ ಸಲಹೆ. ಇನ್ನು 60 ವರ್ಷ ಮೇಲ್ಪಟ್ಟವರು, ಇತರ ಕಾಯಿಲೆ ಹೊಂದಿದವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ” ಎಂದರು.‌

“JN.1 ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಮಾರ್ಗಸೂಚಿ ಇಲ್ಲ. ಹೊಸ ವರ್ಷಾಚರಣೆಗೆ ನಿರ್ಭಂದ ಹೇರುವು ಬಗ್ಗೆ ಯಾವುದೇ ಚಿಂತನೆಗಳಲ್ಲ. ನಾಳೆಯ ಸಭೆಯಲ್ಲಿ Tac ಸಮಿತಿಯ ತಜ್ಞರೊಂದಿಗೂ ಚರ್ಚಿಸಿ ಮುಂದೆ ಯಾವ ಕ್ರಮಗಳ ಬಗ್ಗೆ ತೀರ್ಮಾನಿಸ್ತೇವೆ. ಜನ‌ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಜಾರಿ ಮಾಡ್ತಿಲ್ಲ.‌ಆ ಮಟ್ಟಕ್ಕೆ ಭಯ ಆಗುವ ಅಗತ್ಯವಿಲ್ಲ. ಪಾಸಿಟಿವ್ ಬಂದವರು ಐಸೊಲೇಷನ್‌ನಲ್ಲಿದ್ದಾರೆ” ಎಂದು ಸಚಿವರು ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕರ್ನಾಟಕದಲ್ಲಿ 34 JN.1 ಸೋಂಕಿತ ಪ್ರಕರಣಗಳು ಪತ್ತೆಯಾಗಿರುವುದು ಗಮನಾರ್ಹ 🚨. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆ ಪ್ರಕಾರ, ಜನರಿಗೆ ಆತಂಕಪಡಲು ಅಗತ್ಯವಿಲ್ಲ ಮತ್ತು ಇದು ಅಪಾಯಕಾರಿಯಲ್ಲ. ಸರಿಯಾದ ಎಚ್ಚರಿಕೆ ಮತ್ತು ತಯಾರಿ ಮುಖ್ಯವಾಗಿದೆ 🛡️. ಇಂಥ ಸೂಕ್ಷ್ಮ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ಸರ್ಕಾರದ ಪ್ರತಿಕ್ರಿಯೆ ಮತ್ತು ಜನತೆಯ ಜಾಗರೂಕತೆ ಅತ್ಯಗತ್ಯ. ಸುದ್ದಿಯ ವಿಸ್ತೃತ ವಿವರಗಳಿಗೆ, ಇಲ್ಲಿ ಓದಿ: ಈ ದಿನ ಸಂಪಾದಕೀಯ 📰.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X