ಕಲಬುರಗಿ | ದಲಿತ ಸಂಘರ್ಷ ಸಮಿತಿಯಿಂದ ಮನುಸ್ಮೃತಿ ಪ್ರತಿಕೃತಿ ದಹನ

Date:

Advertisements

ಜಾತಿ ವ್ಯವಸ್ಥೆಯನ್ನು ಪ್ರತಿಪಾದಿಸುವ ಬ್ರಾಹ್ಮಣಶಾಹಿಯ ವಿರುದ್ಧ ಪ್ರತಿಭಟನೆಯ ಅಸ್ತ್ರವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಮನುಸ್ಮೃತಿ ದಹಿಸಿದ ಘಟನೆಯ ಸ್ಮರಣಾರ್ಥ ಸೋಮವಾರ ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಕಾರ್ಯಕರ್ತರು ಮನುಸ್ಮೃತಿ ದಹನ ಕಾರ್ಯಕ್ರಮ ಆಯೋಜಿಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಿಂದ ಮನುಸ್ಮೃತಿ ಪ್ರತಿಕೃತಿ ಅಣಕು ಶವಯಾತ್ರೆ ಮೂಲಕ ತೆರಳಿ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಯ ಹತ್ತಿರ ಸಮಾವೇಶಗೊಂಡು ಮನುಸ್ಮೃತಿ ಪ್ರತಿಕೃತಿಯನ್ನು ಇಟ್ಟು ಪೆಟ್ರೋಲ್‌ ಸುರಿದು ಬೆಂಕಿ ಹೊತ್ತಿಸಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಅರ್ಜುನ ಭದ್ರೆ ಮಾತನಾಡಿ, “ಭಾರತದಲ್ಲಿ ಬ್ರಾಹ್ಮಣ್ಯದ ನೆಲೆಯನ್ನು ಗಟ್ಟಿಗೊಳಿಸಲು ರೂಪಿಸಿದ ಸಂಹಿತೆಗಳನ್ನು ಚಾಚು ತಪ್ಪದೇ ಪಾಲಿಸಿಕೊಂಡು ಬರುವ ಒಂದು ಬೃಹತ್ ಜನಸಮುದಾಯ ನಮ್ಮ ನಡುವೆ ಇದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸುವ ಮೂಲಕ ಆ ಗ್ರಂಥ ಭಾರತೀಯ ಸಮಾಜಕ್ಕೆ ಎಷ್ಟು ಅಪಾಯಕಾರಿ ಎನ್ನುವುದನ್ನು ಶೋಷಿತ ಸಮುದಾಯಗಳಿಗೆ ಮನದಟ್ಟು ಮಾಡಿದರು. ಹಾಗೆಯೇ ನಾವು ಇಂದು ಕೇವಲ ಗ್ರಂಥವನ್ನು ಸುಡುತ್ತಿದ್ದೇವೆ. ಮುಂದೊಂದು ದಿನ ಗ್ರಂಥದಲ್ಲಿನ ಜಾತಿ ಶ್ರೇಷ್ಠತೆಯ ವಿಕೃತ ಚಿಂತನೆಗಳನ್ನು ಹೀಗೆಯೇ ದಹಿಸುತ್ತೇವೆ” ಎಂದು ಅವರು ಎಚ್ಚರಿಸಿದರು.

Advertisements

ಮನುಸ್ಮೃತಿಯನ್ನು ಪೋಷಿಸಿಕೊಂಡು ಬರುತ್ತಿರುವ ಹಿಂದುತ್ವ ಭಾರತವನ್ನು ನುಂಗಿದೆ. ಮನುಸ್ಮೃತಿ ಮತ್ತು ಹಿಂದುತ್ವ ಜನರ ತಲೆ ಕೆಡಿಸಬಹುದೇ ಹೊರತು ಹೊಟ್ಟೆಯ ಹಸಿವಿನ ಸಮಸ್ಯೆಗಳನ್ನು ನಿವಾರಿಸಲಾಗುವುದಿಲ್ಲ. ಮನುಸ್ಮøತಿ ಸಮಾಜದ ವ್ಯವಸ್ಥೆ ಹದಗೆಡಿಸಿದೆ. ಮನುಸ್ಮೃತಿಯ ನಿಯಮಗಳನ್ನು ಮುಂದುವರೆಸಿ ಕಾಪಾಡಿಕೊಂಡು ಬರುತ್ತಿರುವ ಸಂಘ ಪರಿವಾರದ ಹುನ್ನಾರಗಳಿಗೆ ಕಡಿವಾಣ ಹಾಕುವುದು ಅವಶ್ಯಕವಾಗಿದೆ ಎಂದು ಅವರು ಪ್ರತಿಪಾದಿಸಿದರು.

“ಡಿಸೆಂಬರ್ 25 ರಂದು ರಾತ್ರಿ 9 ಗಂಟೆಗೆ ಮನುಸ್ಮೃತಿ ಗ್ರಂಥಕ್ಕೆ ಬಾಪು ಸಾಹೇಬ್ ಸೇರಿದಂತೆ ಸಹಸ್ರ ಜನರು ಮನುಸ್ಮೃತಿ ಗ್ರಂಥಕ್ಕೆ ಬೆಂಕಿ ಇಟ್ಟಾಗ ಅವರೊಂದಿಗೆ ಐದು ಜನ ದಲಿತ ಸಮುದಾಯದ ಸ್ವಾಮೀಜಿಗಳು ಜೊತೆಯಲ್ಲಿದ್ದರು. ಅಂದಿನಿಂದ ಇಲ್ಲಿಯವರೆಗೂ ಆ ಘಟನೆ ವಾರ್ಷಿಕೋತ್ಸವವನ್ನು ಆಚರಿಸಲು ಹಲವಾರು ಜನ ಮಹಾಡಕ್ಕೆ ಹೋಗಿ ಮನುಸ್ಮೃತಿ ಪ್ರತಿಕೃತಿ ಸುಡುತ್ತಿದ್ದು, ಅದೇ ರೀತಿ ಚಳುವಳಿ ಮುಂದುವರೆಯಲಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಾಲ ಮರುಪಾವತಿಸುವಂತೆ ರೈತರಿಗೆ ಬ್ಯಾಂಕ್‌ಗಳ ನೋಟಿಸ್; ರೈತರ ಆಕ್ರೋಶ

ಪ್ರತಿಭಟನೆಯಲ್ಲಿ ಸಮಿತಿಯ ಪ್ರಮುಖರಾದ ಮಹಾಂತೇಶ್ ಬಡದಾಳ್, ಮಲ್ಲಿಕಾರ್ಜುನ್ ಕ್ರಾಂತಿ, ಮಲ್ಲಿಕಾರ್ಜುನ್ ಖನ್ನಾ, ರಾಜಕುಮಾರ್ ನಿಂಬಾಳ್, ಸೂರ್ಯಕಾಂತ್ ಆಜಾದಪೂರ್, ಶಿವಕುಮಾರ್ ಕೊರಳ್ಳಿ, ಮಹೇಶ್ ಕೋಕಿಲೆ, ಪರಶುರಾಮ್ ಯಡ್ರಾಮಿ, ಸುಭಾಷ್ ಕಲ್ಲೂರೆ, ರಾಜು ಆರೇಕರ್, ಮಾರುತಿ ಕಟ್ಟಿಮನಿ, ಸಾಯಿಬಣ್ಣಾ ಕೋಟನೂರ್, ಕಪಿಲ್ ಸಿಂಗೆ ಸೇರಿಂದಂತೆ ಅನೇಕರು ಪಾಲ್ಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X