ತುಮಕೂರು | ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದನೆ ಹೇಳಿಕೆ ನೀಡುತ್ತಿರುವ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸಾರ್ವಜನಿಕರ ನಡುವೆ ದ್ವೇಷ ಬಿತ್ತುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಒತ್ತಾಯಿಸಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಪಿಸಿಆರ್ ಅಧ್ಯಕ್ಷ ತಾಜುದ್ದೀನ್ ಷರೀಫ್ ಮತ್ತು ಕಾರ್ಯದರ್ಶಿ ಗೌಸ್ ಪಾಷಾ ಪತ್ರಿಕಾ ಹೇಳಿಕೆ ನೀಡಿದ್ದಾರೆ. “ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ವಿಧಿಸಲಾಗಿರುವ ಹಿಜಾಬ್ ನಿಷೇಧವನ್ನು ಹಿಂಪಡೆಯುತ್ತೇವೆಂದು ಮೂಲಭೂತ ಹಕ್ಕನ್ನು ಎತ್ತಿ ಹಿಡಿಯುವ ಕುರಿತು ಹೇಳಿಕೆ ನೀಡಿದ್ದರು. ಈ ಬಗ್ಗೆ ಮಾತನಾಡಿದ್ದ ಪ್ರಭಾಕರ್ ಭಟ್, ರಾಜ್ಯದಲ್ಲಿ ಕೋಮು ದ್ವೇಷದ ಭಾಷಣ ಮಾಡಿ ಶಾಂತಿ ಸುವ್ಯವಸ್ಥೆ ಕದಡುವ ನಿರಂತರ ಪ್ರಯತ್ನದಲ್ಲಿದ್ದಾರೆ” ಎಂದು ಆರೋಪಿಸಿದ್ದಾರೆ.

“ಈ ಹಿಂದೆಯೂ ಕೂಡ ಪ್ರಭಾಕರ್ ಭಟ್ ಹಲವು ಭಾಷಣದಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ದ್ವೇಷ ಭಾಷಣ ಮಾಡಿದ್ದಾರೆ. ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿರುವ ಕಲ್ಲಡ್ಕ ಭಟ್, ‘ಮುಸಲ್ಮಾನ್ ಹುಡುಗರು ಅಷ್ಟೇ ಅಲ್ಲ, ಮುಸ್ಲಿಂ ಮಹಿಳೆಯರು ಮತಾಂತರ ಮಾಡುತ್ತಿದ್ದಾರೆ. ನಿಮ್ಮ ಮುಸ್ಲಿಂ ಸಮಾಜದಲ್ಲಿ ಹುಡುಗಿಯರು ಇಲ್ಲವಾ. ಹಿಂದೂ ಹುಡುಗಿಯರನ್ನು ಯಾಕೆ ಟಾರ್ಗೆಟ್ ಮಾಡುತ್ತೀರಾ. ಮತಾಂತರ ಮಾಡಲು ಲವ್ ಜಿಹಾದ್ ಪ್ರಯತ್ನಗಳಾಗುತ್ತಿವೆ. ಮುಸ್ಲಿಮರಿಗೆ ಈ ಹಿಂದೆ ತಲಾಕ್ ಹೇಳುವ ಅವಕಾಶ ಇತ್ತು. ಮೋದಿ ಸರ್ಕಾರದಿಂದ ತ್ರಿವಳಿ ತಲಾಕ್ ಇಲ್ಲದಾಗಿದೆ. ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ’ ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಸಾರ್ವಜನಿಕರ ನಡುವೆ ಧಾರ್ಮಿಕ ಸಂಘರ್ಷ ಹುಟ್ಟು ಹಾಕಲು ಯತ್ನ ನಡೆಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

Advertisements

“ಪ್ರಭಾಕರ್ ಭಟ್ ಅವರು ಹೇಳಿಕೆಗಳು ಆಧಾರ ರಹಿತವಾಗಿವೆ. ಇಡೀ ಮುಸ್ಲಿಂ ಸಮಯದಾಯದ ವಿರುದ್ಧ ಪ್ರಮುಖವಾಗಿ ಮಹಿಳೆಯರ ವಿರುದ್ಧ ದ್ವೇಷ ಭಾಷಣ ಮಾಡುತ್ತ ಜನರಲ್ಲಿ ಆತಂಕ ಸೃಷ್ಟಿಸುವ, ಗಲಭೆ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಅವರ ವಿರುದ್ಧ ಪೊಲೀಸರು ಕೂಡಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X