2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ ಬೆಂಗಳೂರು ಪ್ರೆಸ್‌ಕ್ಲಬ್

Date:

Advertisements
  • ವರ್ಷದ ವ್ಯಕ್ತಿ ಪ್ರಶಸ್ತಿಗೆ ಪ್ರೆಸ್‌ಕ್ಲಬ್ ಡಿಸಿಎಂ ಡಿ ಕೆ ಶಿವಕುಮಾರ್ ಆಯ್ಕೆ
  • ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿಗೆ ಶಾಮನೂರು ಶಿವಶಂಕರಪ್ಪ ಆಯ್ಕೆ
  • ಸಂತೊಷ್ ಲಾಡ್, ಡಾ. ಕೆ. ಗೋವಿಂದರಾಜುಗೆ ಪ್ರೆಸ್‌ಕ್ಲಬ್ ಪ್ರಶಸ್ತಿ
  • 29 ಸಾಧಕ ಪತ್ರಕರ್ತರಿಗೆ ‘ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’

ಪ್ರೆಸ್‌ಕ್ಲಬ್ ಆಫ್ ಬೆಂಗಳೂರು 2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಪ್ರೆಸ್‌ಕ್ಲಬ್ ಸದಸ್ಯರು ಆಯ್ಕೆ ಮಾಡಿದ್ದಾರೆ.

ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಹಿರಿಯ ರಾಜಕಾರಣಿ ಶಾಸಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರಿಗೆ ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ ನೀಡಲಾಗುತ್ತಿದೆ.

ಪತ್ರಿಕಾ ವಿತರಕರಿಗೆ ಅಪಘಾತವಿಮೆ ಯೋಜನೆ ಪ್ರಕಟಿಸಿದ ಕಾರ್ಮಿಕ ಸಚಿವ ಸಂತೊಷ್ ಲಾಡ್ ಹಾಗೂ ಏಷ್ಯಾ ಬ್ಯಾಸ್ಕೇಟ್ ಬಾಲ್ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಗೊಂಡ ಮೊದಲ ಕನ್ನಡಿಗ ಡಾ. ಕೆ. ಗೋವಿಂದರಾಜು ಅವರಿಗೆ ಪ್ರೆಸ್‌ಕ್ಲಬ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಾಗೆಯೇ ಮಾಧ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವ 29 ಸಾಧಕ ಪತ್ರಕರ್ತರಿಗೆ ‘ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’ ನೀಡಲಾಗುತ್ತಿದೆ.

Advertisements

ಡಿ. 31ರಂದು ಬೆಳಗ್ಗೆ 11.30ಕ್ಕೆ ಪ್ರೆಸ್‌ಕ್ಲಬ್ ಆವರಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರೆಸ್‌ಕ್ಲಬ್ ಆಫ್ ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಿದೆ.

‘ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’ ಪಡೆದವರು

1. ಸದಾಶಿವ ಶೆಣೈ. ಕೆ

2. ಆರ್. ಶಂಕರ್

3. ಡಾ. ಕೂಡ್ಲಿ ಗುರುರಾಜ್

4. ಕೆ.ಕೆ ಮೂರ್ತಿ (ಕಂ.ಕ ಮೂರ್ತಿ)

5. ನಾಗರಾಜ. ಎಂ (ಪ್ರಜಾವಾಣಿ)

6. ರೂಪಾ ಆರ್. ರಾವ್

7. ಸತೀಶ್‌ಕುಮಾರ್ ಬಿ.ಎಸ್

8. ರಾಕೇಶ್ ಪ್ರಕಾಶ್ (ಟೈಮ್ಸ್ ಆಫ್ ಇಂಡಿಯಾ)

9. ರಮೇಶ್ ಬಿ.ಎನ್ (ಅಭಿಮನ್ಯು)

10. ಕಿರಣ್ ಹೆಚ್.ವಿ

11. ಚನ್ನಕೃಷ್ಣ ಪಿ.ಕೆ

12. ವಿಜಯ್‌ಕುಮಾರ್ ಮಲಗಿಹಾಳ್

13. ಮನೋಜ್‌ಕುಮಾರ್

14. ಮುತ್ತು. ಪಿ

15. ಶ್ರೀಕಂಠ ಶರ್ಮ. ಆರ್

16. ಸಿದ್ದೇಶ್‌ಕುಮಾರ್ ಹೆಚ್.ಪಿ

17. ಅಫ್ಶಾನ್ ಯಾಸ್ಮಿನ್

18. ಚಂದ್ರಶೇಖರ್. ಎಂ

19. ಭಾಸ್ಕರ್ ಕೆ.ಎಸ್

20. ಸುಭಾಷ್ ಹೂಗಾರ್

21. ಪ್ರಸನ್ನಕುಮಾರ್ ಲೂಯಿಸ್

22. ಶಂಕರೇಗೌಡ ಹೆಚ್.ಡಿ

23. ಜನಾರ್ಧನಾಚಾರಿ ಕೆ.ಎಸ್

24. ಲಿಂಗರಾಜು ಡಿ. ನೊಣವಿನಕೆರೆ

25. ಮೋಹನ್‌ರಾವ್ ಸಾವಂತ್. ಜಿ

26. ಅನಂತರಾಮು ಸಂಕ್ಲಾಪುರ್. ಎಲ್

27. ಕೌಶಿಕ್. ಆರ್ (ಸ್ಪೋರ್ಟ್ಸ್)

28. ಲಕ್ಷ್ಮಿ ಸಾಗರ ಸ್ವಾಮಿಗೌಡ

29. ಚಿದಾನಂದ ಪಟೇಲ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X