ಚಲಿಸುತ್ತಿದ್ದ ಕಾರು ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣ ಮಾತ್ರದಲ್ಲಿ ಇಡೀ ವಾಹನ ಹೊತ್ತಿ ಉರಿದು ಸುಟ್ಟು ಕರಕಲಾಗಿದ್ದು, ಕಾರು ಚಾಲಕ ಸಜೀವ ದಹನಗೊಂಡಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲ್ಲೂಕು ಅಂಚೆಪಾಳ್ಯದ ಹತ್ತಿರ ನೆಲಮಂಗಲದ ಟೋಲ್ ಬಳಿಯ ಪಾರ್ಲೆ ಜಿ ಬಿಸ್ಕೆಟ್ ಫ್ಯಾಕ್ಟರಿ ಬಳಿ ಹೆದ್ದಾರಿಯಲ್ಲಿ ಸಂಭವಿಸಿದೆ.
ಮಾರುತಿ ಎರ್ಟಿಗಾ ಸಿಎನ್‌ಜಿ (CNG) ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಡಿ. 26 ರಂದು ನಡೆದಿದೆ.
ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಹೊರಗಡೆ ಬರಲು ಸಾಧ್ಯವಾಗದೇ ಕೂತಲ್ಲೇ ಸಜೀವ ದಹನವಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ದೌಡಾಯಿಸಿದ್ದು, ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಘಟನೆಯಿಂದಾಗಿ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಹೈಬ್ರಿಡ್/ಪೆಟ್ರೋಲ್ ಎಕ್ಸ್ಎಲ್ 6 ಕಾರು ಅನಿಲ್ ಕುಮಾರ್ ಟಿ ಅವರಿಗೆ ಸೇರಿದ್ದು, ಬೆಂಗಳೂರು ಉತ್ತರ ಆರ್ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ.