ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ ಎಂಬ ಆರೋಪಕ್ಕೆ ಯತ್ನಾಳ್ ಸಾಕ್ಷಿ ಒದಗಿಸಿದ್ದಾರೆ:‌ ಸಿದ್ದರಾಮಯ್ಯ

Date:

Advertisements
  • ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಿಟ್ ಎಂಡ್ ರನ್ ಮಾಡಬಾರದು: ಸಿದ್ದರಾಮಯ್ಯ
  • ತಮ್ಮ ಬಳಿ ಇರುವ ಮಾಹಿತಿಯನ್ನು ನಾಗಮೋಹನ್ ದಾಸ್ ತನಿಖಾ ಆಯೋಗಕ್ಕೆ ಒಪ್ಪಿಸಬೇಕು

ಕೊರೋನಾ ಕಾಲದಲ್ಲಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, “ಕೊರೋನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು ರೂ.4,000 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ” ಎಂದು ಪ್ರಶ್ನಿಸಿದ್ದಾರೆ.

“ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಿಟ್ ಎಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಇದಕ್ಕಾಗಿ ಅವರು ಕೊರೋನಾ ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಇರುವ ಎಲ್ಲ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ತನಿಖಾ ಆಯೋಗಕ್ಕೆ ಒಪ್ಪಿಸಬೇಕು” ಎಂದು ಕೋರಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

“ಬಿಜೆಪಿ ಶಾಸಕ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ ವಿಜಯೇಂದ್ರ ಸೇರಿದಂತೆ ಹಿಂದಿನ ಸರ್ಕಾರದ ಸಂಪುಟದಲ್ಲಿದ್ದ ಕೆಲವು ಸಚಿವರ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ ಬಿಜೆಪಿ ನಾಯಕರು ಈ ಬಗ್ಗೆ ಮೌನವಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ” ಎಂದಿದ್ದಾರೆ.

“ತನ್ನನ್ನು ದೇಶದ ‘ಚೌಕಿದಾರ’ ಎಂದು ಬಣ್ಣಿಸಿಕೊಳ್ಳುತ್ತಿರುವ ಮತ್ತು ‘ನ ಖಾವೂಂಗಾ ನಾ ಖಾನೆ ದೂಂಗಾ’ ಎಂದು ಆಗಾಗ ಗುಟುರು ಹಾಕುವ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ತಮ್ಮದೇ ಪಕ್ಷದ ನಾಯಕ ಮಾಡುತ್ತಿರುವ ಇಂತಹ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮೌನವಾಗಿರುವುದು ನಿಗೂಢವಾಗಿದೆ. ಇದು ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಲ್ಲಿ ಕೇಂದ್ರದ ನಾಯಕರಿಗೂ ಪಾಲು ಹೋಗಿದೆ ಎನ್ನುವ ಆರೋಪಕ್ಕೆ ಎಡೆ ಮಾಡಿಕೊಡುವುದಿಲ್ಲವೇ ಪ್ರಧಾನಿಗಳೇ?” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X