ಧಾರವಾಡ | ಮತದಾನ ಜಾಗೃತಿ ಅಭಿಯಾನ

Date:

Advertisements

ಪ್ರತಿಯೊಂದು ಚುನಾವಣೆಯಲ್ಲಿ ಮತದಾನ ಪ್ರಮಾಣ ಕ್ಷೀಣಿಸುವುದು ಆಘಾತಕಾರಿ ಸಂಗತಿ. ಪ್ರಜ್ಞಾವಂತರು ತಪ್ಪದೇ, ಮತದಾನ ಮಾಡಬೇಕು ಎಂದು ಧಾರವಾಡ ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ರೇಖಾ ಡೊಳ್ಳಿನವರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.‌

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಚುನಾವಣಾ ಸಾಕ್ಷರತಾ ಕ್ಲಬ್, ಅಂಜುಮನ್ ಮಹಾವಿದ್ಯಾಲಯ, ಎನ್‌ಎಸ್‌ಎಸ್‌ ಸಹಯೋಗದಲ್ಲಿ ತಾಲೂಕಿನ ಮರೇವಾಡ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿಗೆ ಚಾಲನೆ ನೀಡಿ ಮಾತನಾಡಿದರು.

ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಟಿಯಿಂದ ಸರ್ವರೂ ಹಕ್ಕು ಚಲಾಯಿಸಬೇಕು. ಕೆಲವರು ಮತದಾನ ಮಾಡದಿರಲು ಕಾರಣ ಇರಬಹುದು. ಅಂತವರಿಗೆ ಸರ್ಕಾರ ನೋಟಾ ಅವಕಾಶ ಕಲ್ಪಿಸಿದೆ. ಈ ನಿಟ್ಟಿನಲ್ಲಾದರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು” ಎಂದು ತಿಳಿಸಿದರು.

Advertisements

“ಮತದಾನ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದೆ. ಪ್ರತಿಯೊಬ್ಬ ವ್ಯಕ್ತಿ ಕಡ್ಡಾಯ ಮಾತದಾನ ಮಾಡಬೇಕು. ಮುಖ್ಯವಾಗಿ 18 ವರ್ಷ ತುಂಬಿದ ಯುವಕ ಮತ್ತು ಯುವತಿಯರು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು” ಎಂದು ಕರೆ ನೀಡಿದರು.

ಅಂಜುಮನ್ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್ ಎಂ ಮಕಾಂದಾರ ಮಾತನಾಡಿ, “ಸರ್ವರನ್ನೂ ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಪ್ರತಿಯೊಂದು ಶಿಕ್ಷಣ ಸಂಸ್ಥೆಗಳ ಸಾಮಾಜಿಕ ಜವಾಬ್ದಾರಿ. ದೇಶದ ಬಗ್ಗೆ ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ಅಭಿಪ್ರಾಯ ಹೊಂದಲು ಜನರು ಹಕ್ಕು ಚಲಾಯಿಸುವುದು ಮುಖ್ಯ. ಮೊದಲು ಯುವ ಜನಾಂಗ ಮತದಾನದಲ್ಲಿ ಪಾಲ್ಗೊಳ್ಳಬೇಕು. ಜತೆಗೆ ಕುಟುಂಬದ ಸದಸ್ಯರನ್ನು ತೊಡಗಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಚಿವ ಶಿವಾನಂದ ಪಾಟೀಲರ ರೈತ ವಿರೋಧಿ ಹೇಳಿಕೆ ಖಂಡನೀಯ: ಸೋಮು ಬಿರಾದಾರ

ಕವಿವಿ ಎನ್‌ಎಸ್‌ಎಸ್‌ ಸಂಯೋಜಕ ಡಾ ಮಹಾದೇವಪ್ಪ ದಳಪತಿ ಮಾತನಾಡಿ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಅವರು ಚಲಾಯಿಸುವ ಪ್ರತಿ ಮತಕ್ಕೂ ಮೌಲ್ಯವಿದೆ. 18 ವರ್ಷ ತುಂಬಿದ ಎಲ್ಲರೂ ತಪ್ಪದೇ, ಮತದಾನ ಮಾಡಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನೀಲವ್ವ ವಗ್ಗರ, ನೋಡಲ್ ಅಧಿಕಾರಿ ಡಾ.ಎನ್ ವಿ ಗುದಗನವರ್, ಪತ್ರಿಕೋದ್ಯಮದ ಮುಖ್ಯಸ್ಥ ಡಾ ಎಸ್ ಎಸ್ ಅದೋನಿ, ಐಕ್ಯೂಎಸಿ ಡಾ ಎನ್ ಬಿ ನಾಲತವಾಡ, ಡಾ.ಎಫ್ ಎಚ್ ನದಾಫ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X