ಖೇಲ್ ರತ್ನ, ಅರ್ಜುನ ಪ್ರಶಸ್ತಿ ವಾಪಸ್: ಪ್ರಧಾನಿ ಮೋದಿಗೆ ಪತ್ರ ಬರೆದ ವಿನೇಶ್ ಫೋಗಟ್

Date:

Advertisements

ಕಾಮನ್‌ವೆಲ್ತ್ ಮತ್ತು ಏಷ್ಯನ್ ಕ್ರೀಡೆಗಳ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ತಾವು ಪಡೆದ ರಾಷ್ಟ್ರ ಗೌರವಗಳಾದ ರಾಜೀವ್‌ ಗಾಂಧಿ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಹಿಂದೆ, ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕ್ರೀಡೆಯನ್ನು ತ್ಯಜಿಸುವುದಾಗಿ ಘೋಷಿಸಿದರು. ನಂತರದಲ್ಲಿ ಕುಸ್ತಿಪಟುಗಳಾದ ಭಜರಂಗ್ ಪುನಿಯಾ, ವೀರೇಂದ್ರ ಸಿಂಗ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದರು.

ವಿನೇಶ್ ಫೋಗಟ್ ಅವರು ಪ್ರಧಾನಿ ಮೋದಿಯವರಿಗೆ ಬರೆದ ಪತ್ರವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಈ ಕುಸ್ತಿಪಟುಗಳು ಹಲವಾರು ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಮಾಜಿ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ಶರಣ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಳೆದ 7 ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರು.

ಬ್ರಿಜ್ ಭೂಷಣ್ ಅವರ ಆಪ್ತ ಸಹಾಯಕ ಸಂಜಯ್ ಸಿಂಗ್ ಭಾರತೀಯ ಕುಸ್ತಿ ಒಕ್ಕೂಟದ ಚುನಾವಣೆಯಲ್ಲಿ ಗೆದ್ದ ನಂತರ ಫೋಗಟ್ ಮತ್ತು ಇತರ ಇಬ್ಬರು ಕುಸ್ತಿಪಟುಗಳು ತಮ್ಮ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.

ಈ ನಡುವೆ, ಕ್ರೀಡಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರವು ಭಾರತೀಯ ಕುಸ್ತಿ ಒಕ್ಕೂಟವನ್ನು ಅಮಾನತುಗೊಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X