ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಡಿ.27 ರಂದು ರಾಜ್ಯದಲ್ಲಿ 74 ಹೊಸ ಕೋವಿಡ್ ಕೇಸ್ ಪತ್ತೆಯಾಗಿದ್ದು, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರು 57, ಹಾಸನ 4, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 4, ಚಿಕ್ಕಬಳ್ಳಾಪುರ 3, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ತಲಾ 2 ಹೊಸ ಕೋವಿಡ್ ಕೇಸ್ ಪತ್ತೆಯಾಗಿವೆ.
ಮಂಗಳವಾರ ರಾಜ್ಯದಲ್ಲಿ 6,403 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನಲ್ಲಿ 2,104 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 57 ಮಂದಿಗೆ ಸೋಂಕು ದೃಢಪಟ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕೋವಿಡ್ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ 376, ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಶೇ.1.15ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಡಿ.31 ರಿಂದ ಎರಡು ದಿನ ಕರ್ನಾಟಕದ ಬಹುತೇಕ ಕಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು ಗ್ರಾಮಾಂತರ ಮತ್ತು ಹಾಸನದಲ್ಲಿ ತಲಾ 4, ಚಿಕ್ಕಬಳ್ಳಾಪುರದಲ್ಲಿ 3, ಮಂಡ್ಯ ಮತ್ತು ಮೈಸೂರಿನಲ್ಲಿ ತಲಾ ಇಬ್ಬರು ಹಾಗೂ ಚಾಮರಾಜನಗರ ಮತ್ತು ವಿಜಯನಗರದಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.
ಸೋಂಕಿತರಲ್ಲಿ 423 ಮಂದಿ ಮನೆ ಆರೈಕೆಗೆ ಒಳಗಾದರೆ, 41 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 16 ಮಂದಿ ತೀವ್ರ ನಿಗಾ ಘಟಕದಲ್ಲಿ ಹಾಗೂ 25 ಮಂದಿ ಸಾಮಾನ್ಯ ವಾರ್ಡ್ನಲ್ಲಿ ಇದ್ದಾರೆ. ಸೋಂಕಿತರಲ್ಲಿ 44 ಮಂದಿ ಇಂದು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.