ಚಿತ್ರದುರ್ಗ | ಸಾಕು ನಾಯಿಗಳಿಂದ ಕಾರ್ಮಿಕನ ಮೇಲೆ ಮಾರಣಾಂತಿಕ ದಾಳಿ

Date:

Advertisements

ಕಾರ್ಮಿಕನ ಮೇಲೆ ಹಿರಿಯೂರಿನ ಅಸೆಂಟ್ ಕಾಲೇಜು ಮಾಲೀಕನ ಮೂರು ಸಾಕು ನಾಯಿಗಳು ದಾಳಿ ನಡೆಸಿ ಕಾರ್ಮಿಕನನ್ನು ಗಂಭೀರವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ನಂದಿಹಳ್ಳಿ ಸಮೀಪ ಮಂಗಳವಾರ ರಾತ್ರಿ ನಡೆದಿದೆ.

ಶಿರಾದ ಯರದಕಟ್ಟೆ ಗ್ರಾಮದ ಮಧು (23 ವರ್ಷ) ಗಾಯಾಳು. ನಂದಿಹಳ್ಳಿ ಬಳಿ ಇರುವ ಖಾಸಗಿ ಅಸೆಂಟ್ ಪಿಯು ಕಾಲೇಜು ಶಿಕ್ಷಣ ಸಂಸ್ಥೆಯ ಮಾಲೀಕನಿಗೆ ಸೇರಿದ ನಾಯಿಗಳು ವ್ಯಕ್ತಿಯ ಬಲಗೈ, ಬೆನ್ನು, ತೊಡೆ ಸೇರಿದಂತೆ ದೇಹದ ಇನ್ನಿತರ ಭಾಗಗಳಿಗೆ ಮನಸೋ ಇಚ್ಛೆ ದಾಳಿ ನಡೆಸಿ, ಕಚ್ಚಿ ಗಂಭೀರ ಗಾಯಗೊಳಿಸಿವೆ. ಇದರಿಂದ ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಗಾಯಗೊಂಡ ವ್ಯಕ್ತಿಯನ್ನು ನಗರದ ಸಾರ್ವಜನಿಕ ಆಸ್ಪತ್ರೆ ಹಾಗೂ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ. ಗಾಯಾಳು ಊಟ ತರಲು ನಂದಿಹಳ್ಳಿ ಕಡೆಯಿಂದ ಆದಿವಾಲ ಕಡೆಗೆ ನಡೆದುಕೊಂಡು ಬರುವಾಗ, ಪಿಯು ಕಾಲೇಜಿನ ಸಂಸ್ಥೆಯ ಮಾಲೀಕನ ನಾಯಿಗಳು ದಾಳಿ ನಡೆಸಿವೆ. ಕಾರ್ಮಿಕನ ಕಿರುಚಾಟ ಕೇಳಿ ವಾಹನ ಸವಾರರು ಗಾಯಾಳುವನ್ನು ರಕ್ಷಿಸಿದ್ದಾರೆ. ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಇರಬೇಕಿದ್ದ ನಾಯಿಗಳು ರಸ್ತೆಗೆ ಬಂದು ಅಮಾಯಕನ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿ ಸಂಸ್ಥೆಯ ಕಾರ್ಯದರ್ಶಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಆಸ್ಪತ್ರೆ ಬಳಿ ಬಂದು ಗಾಯಾಳುವನ್ನು ನೋಡುತ್ತಾ ನಿಂತಿದ್ದ ಸಂಸ್ಥೆಯ ಟ್ರಸ್ಟಿ ಮೂರ್ತಿ ಅವರನ್ನು ಅಲ್ಲಿದ್ದ ಸಾರ್ವಜನಿಕರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅಮಾಯಕನ ಜೀವಕ್ಕೆ  ಅಪಾಯವಾದರೆ ನೀವೇ ಹೊಣೆಗಾರರು, ಜೊತೆಗೆ ನಿಮ್ಮ ಶಿಕ್ಷಣ ಸಂಸ್ಥೆಯನ್ನು ಮುಚ್ಚ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

Download Eedina App Android / iOS

X