ಲಿಂಗಾಯತರು ಹಿಂದೂಗಳಲ್ಲ ಎಂಬ ಕೆಲವರ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು, ಹಿಂದೆ ಪ್ರತ್ಯೇಕ ಧರ್ಮದ ರೂವಾರಿಯಾಗಿದ್ದ ಸಿದ್ದರಾಮಯ್ಯನವರ ಯೋಜನೆಯ ಮುಂದುವರೆದ ಭಾಗವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದ್ದಾರೆ.
ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ನಮೂದು ಮಾಡುವ ವಿಚಾರ ಅಖಿಲ ಭಾರತ ವೀರಶೈವ ಮಹಾಸಭಾದ 24 ನೇ ಮಹಾಧಿವೇಶನದಲ್ಲಾದ ನಿರ್ಣಯ, ಇದರೊಂದಿಗೆ ಲಿಂಗಾಯತರು ಹಿಂದೂಗಳಲ್ಲಾ ಎಂಬ ಕೆಲ ನಾಯಕರ ಹೇಳಿಕೆಗಳ ಬಗ್ಗೆ ಪರ – ವಿರೋಧ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಈ ಬಗ್ಗೆ ಯತ್ನಾಳ್ ಅವರು ಎಕ್ಸ್ ನಲ್ಲಿ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
“ಹಿಂದುತ್ವ ಈ ನೆಲದ ಆತ್ಮ, ಬಸವಣ್ಣನವರು ಆರಾಧಿಸಿದ ಲಿಂಗವೂ ಈಶ್ವರನ ಅಂಶವೇ, ಹಿಂದುತ್ವ ಬದುಕುವ ದಾರಿ. ಜಗತ್ತಿನ ಯಾವುದಾದರೂ ಧರ್ಮ ಇನ್ನೊಬ್ಬರ ಮೇಲೆ ದಾಳಿ ಮಾಡದೆ, ಎಲ್ಲರನ್ನು ಗೌರವಿಸಿರುವುದು ಹಿಂದುತ್ವ ಮಾತ್ರ” ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ
“ಲಿಂಗಾಯತ, ವೀರಶೈವ ಹಿಂದುತ್ವದ ಭಾಗವೇ ಹೊರತು ಬೇರೆಯಲ್ಲ. 2018ರ ವಿಧಾನಸಭೆ ಚುನಾವಣೆಗಾಗಿ ಸಿದ್ದರಾಮಯ್ಯನವರು ಈ ಗೊಂದಲವನ್ನು ಸೃಷ್ಟಿ ಮಾಡಿದ್ದರು, ಈಗ ಲೋಕಸಭೆ ಚುನಾವಣೆಗೆ ಬೇರೆ ಯಾವುದೇ ಚರ್ಚಾ ವಿಷಯವಿಲ್ಲದೆ ಈ ಪ್ರತ್ಯೇಕ ಧರ್ಮದ ಚರ್ಚೆ ಆರಂಭಿಸಿದ್ದಾರೆ” ಎಂದು ಹೇಳಿದ್ದಾರೆ.
“ಪಂಚಪೀಠಗಳು, ಬಸವಣ್ಣನವರ ಅನುಯಾಯಿಗಳು ಹಾಗು ಶರಣರ ತತ್ವಗಳು ಎಲ್ಲವೂ ಹಿಂದೂ ಸಂಸ್ಕೃತಿಯ ಭಾಗವೇ, ಅಲ್ಲಿಯೂ ಶಿವ, ಇಲ್ಲಿಯೂ ಶಿವನೇ! ‘ವೀರಶೈವ ಲಿಂಗಾಯತ’ ಹಿಂದು ಸಂಸ್ಕೃತಿಯ ಭಾಗವಾಗಿದೆ. ಹರ ಹರ ಮಹದೇವ್!” ಎಂದು ಬರೆದುಕೊಂಡಿದ್ದಾರೆ.