ಬೀದರ್‌ | ಬಿಎಸ್‌ಎಸ್‌ಕೆ ಆಡಳಿತ ಮಂಡಳಿ ವಜಾಕ್ಕೆ ಆಗ್ರಹ

Date:

Advertisements

ಜಿಲ್ಲೆಯ ರೈತರ ಜೀವನಾಡಿಯಾಗಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಆಡಳಿತ ಮಂಡಳಿ ಮತ್ತು ವ್ಯವಸ್ಥಾಪಕ ನಿರ್ದೇಶಕರು ಕಾರ್ಮಿಕರ  ಸುಮಾರು 1.19 ಕೋಟಿ ರೂ. ದುರುಪಯೋಗ ಮಾಡಿಕೊಂಡಿದ್ದು, ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಅಪರಾಧಿಕ ಪ್ರಕರಣ ದಾಖಲಿಸುವಂತೆ ಭಾರತ ಕಮ್ಯೂನಿಸ್ಟ್ ಪಕ್ಷ ಮತ್ತು ಅಖಿಲ ಭಾರತ ಕಿಸಾನ ಸಭಾ ಒತ್ತಾಯಿಸಿದೆ.

ಸಿಪಿಐ ಮತ್ತು ಎಐಕೆಎಸ್ ಕಾರ್ಯಕರ್ತರು ಜಂಟಿಯಾಗಿ ಬೀದರ್‌ ನಗರದ ಭಗತ್‌ ಸಿಂಗ್‌ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಸಲ್ಲಿಸಿದರು.

ರೈತರ ಕಲ್ಪವೃಕ್ಷವಾಗಿದ್ದ ಹಳ್ಳಿಖೇಡ್ (ಬಿ) ಪಟ್ಟಣದ ಬೀದರ ಸಹಕಾರಿ ಸಕ್ಕರೆ ಕಾರ್ಖಾನೆ ಇದನ್ನು ಸಂಪೂರ್ಣವಾಗಿ ಮುಚ್ಚಲು ಇಂದಿನ ಆಡಳಿತ ಮಂಡಳಿ ಮತ್ತು ವ್ಯವಸ್ಥಾಪಕ ನಿರ್ದೇಶಕರು ಹೊಣೆಗಾರರಾಗಿದ್ದಾರೆ. ಸರ್ಕಾರದ ಅನುಮತಿ ಇಲ್ಲದೆಯೇ ಬಿಎಸ್‌ಎಸ್‌ಕೆ ಆಡಳಿತ ಮಂಡಳಿ ಬೀಗ್‌ ಹಾಕಿದ್ದಾರೆ. ರೈತರ ಬಾಕಿ ಹಣ, ಕಾರ್ಮಿಕರ ಭವಿಷ್ಯ ನಿಧಿ, ವಿಮೆ ಹಣ, ನಿವೃತ್ತಿ ಹಣ ಮತ್ತು ಕಾರ್ಮಿಕರ ಉಪದಾನ ಸಂದಾಯ ಹಣ ಕಾರ್ಖಾನೆಗೆ ಬಂದರೂ ಹಣವನ್ನು ನಿವೃತ್ತಿ ಹೊಂದಿರುವ ಕಾರ್ಮಿಕರಿಗೆ ಕೊಡಲಿಲ್ಲ. ಸರ್ಕಾರದ ಅನುಮತಿ ಇಲ್ಲದೆಯೇ ನೌಕರರನ್ನು ಕೆಲಸಕ್ಕೆ ತೆಗೆದುಕೊಳ್ಳದೇ ಕಾರ್ಖಾನೆಯನ್ನು ಮುಚ್ಚಲ್ಪಟ್ಟಿದೆ, ಕಾರ್ಮಿಕರು ಬೋನಸ್ ಮತ್ತು ಇತರೆ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Advertisements

ನೌಕರರ ಹಣ ದುರುಪಯೋಗ ಮಾಡಿಕೊಂಡಿರುವ ಆಡಳಿತ ಮಂಡಳಿ ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನು ವಜಾಗೊಳಿಸಬೇಕು. ನೌಕರರ ಹಣ ದುರುಪಯೋಗ ಮಾಡಿಕೊಂಡಿರುವ ಆಡಳಿತ ಮಂಡಳಿ ಮತ್ತು ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಅಪರಾಧಿಕ ಪ್ರಕರಣವನ್ನು ದಾಖಲಿಸಬೇಕು. ಆಡಳಿತ ಮಂಡಳಿ ಮತ್ತು ನೌಕರರ ಸಭೆ ಕರೆಯಬೇಕು. ಬಿಎಸ್‌ಎಸ್‌ಕೆ ಜವಾಬ್ದಾರಿ ಸರ್ಕಾರವೇ ವಹಿಸಿಕೊಳ್ಳಬೇಕು. ನೌಕರರಿಗೆ ಬರಬೇಕಾದ ಸಂಬಳ ಮತ್ತು ಇತರೆ ಬಾಕಿ ಹಣ ಹಾಗೂ ರೈತರಿಗೆ ಕೊಡಬೇಕಾದ ಬಾಕಿ ಹಣವನ್ನು ಸರ್ಕಾರದಿಂದ ಕೊಡಿಸಬೇಕು ಎಂದು ಒತ್ತಾಯಿಸಿದರು.‌

ಈ ಸುದ್ದಿ ಓದಿದ್ದೀರಾ? ಬೀದರ್‌ | ಆಟವಾಡುತ್ತಿದ್ದ ಮಗು ಮೇಲೆ ಹರಿದ ಕಾರು; ಸ್ಥಳದಲ್ಲೇ ಎರಡು ವರ್ಷದ ಮಗು ಸಾವು

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಎಂ.ಡಿ. ಶಫಾಯತ್‌ಅಲಿ,ಬಾಬುರಾವ ಹೊನ್ನಾ, ಅಲಿ ಅಹ್ಮದ್ ಖಾನ್, ಚಾಂದೋಬಾ ಭೋಸ್ಲೆ, ನಜೀರ್ ಅಹ್ಮದ್, ಶಿವಾಜಿರಾವ ಭೋಸ್ಲೆ, ಪ್ರಭು ಹೊಚಕನಳ್ಳಿ, ನಿಜಾಮೋದ್ದೀನ್, ಖಮರ್ ಪಟೇಲ್, ಪ್ರಭು ತಗಣಿಕರ್, ಶಿವರಾಜ ಕಮಠಾಣ, ಪಾಂಡುರಂಗ ಪ್ಯಾಗೆ, ಶೇಖ ನವಾಜ್, ಜಿ.ಎ.ಭೋಸ್ಲೆ ವಾಗನಗೇರಾ, ಮೊಗಲಪ್ಪಾ ಸುಂದಾಳ, ಚಂದ್ರಕಲಾ, ಭೀಮಣ್ಣಾ ಭಂಡೆ, ಖಾದರ್ ಶಾಹ‌ ಸೇರಿದಂತೆ ಇತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X