14 ವರ್ಷದೊಳಗಿನ ಬಾಲಕರ ಕರ್ನಾಟಕ ಹಾಕಿ ತಂಡದಲ್ಲಿ ಕೊಡಗಿನ 9 ಆಟಗಾರರು

Date:

Advertisements

ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಗೊಂಡಿರುವ 14 ವರ್ಷದೊಳಗಿನ ಬಾಲಕರ ಕರ್ನಾಟಕ ರಾಜ್ಯ ಹಾಕಿ ತಂಡದಲ್ಲಿ ಕೊಡಗಿನ ಒಂಬತ್ತು ವಿದ್ಯಾರ್ಥಿಗಳು ಸ್ಥಾನ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಇದೇ ತಿಂಗಳ 28ರಿಂದ ಜ.1ರವರೆಗೆ ನಡೆಯಲಿರುವ 14 ವರ್ಷದೊಳಗಿನ ಬಾಲಕರ ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಈ ತಂಡ ಕರ್ನಾಟಕವನ್ನು ಪ್ರತಿನಿಧಿಸಲಿದೆ.

ಕರ್ನಾಟಕವನ್ನು ಪ್ರತಿನಿಧಿಸಲಿರುವ ರಾಜ್ಯ ತಂಡದಲ್ಲಿ ಗೋಣಿಕೊಪ್ಪಲು ಲಯನ್ಸ್ ಶಾಲೆಯ ಆರು ವಿದ್ಯಾರ್ಥಿಗಳು ಸೇರಿದಂತೆ, ಕೊಡಗಿನ ಒಟ್ಟು ಒಂಬತ್ತು ವಿದ್ಯಾರ್ಥಿಗಳನ್ನು ಒಳಗೊಂಡ ಈ ತಂಡ ಈಗಾಗಲೇ ಗ್ವಾಲಿಯರ್ ನಗರಕ್ಕೆ ಪ್ರಯಾಣ ಬೆಳೆಸಿದೆ. ಮೈಸೂರು ವಿಭಾಗ ಮಟ್ಟದ 14 ವರ್ಷದೊಳಗಿನ ಬಾಲಕರ ಹಾಕಿ ಪಂದ್ಯಾವಳಿಯಲ್ಲಿ ಹಾಸನ ತಂಡವನ್ನು ಮಣಿಸುವ ಮೂಲಕ ಪ್ರಥಮ ಸ್ಥಾನ ಪಡೆದ ಕೊಡಗು ತಂಡ, ಕಳೆದ ಅಕ್ಟೋಬರ್ 9ರಿಂದ 11ರವರೆಗೆ ಕೂಡಿಗೆಯಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿಯೂ ಬಳ್ಳಾರಿ ತಂಡವನ್ನು ಪರಾಭವಗೊಳಿಸುವ ಮೂಲಕ ವಿಜಯಿಯಾಗಿ ರಾಷ್ಟ್ರಮಟ್ಟದ ಪಂದ್ಯಾವಳಿಗೆ ಅರ್ಹತೆ ಪಡೆದುಕೊಂಡಿತ್ತು.

ಗೋಣಿಕೊಪ್ಪಲು ಲಯನ್ಸ್ ಶಾಲೆಯ ವಿದ್ಯಾರ್ಥಿಗಳಾದ ಬಿ.ಪಿ.ಸಂಚಯ್ ತಮ್ಮಯ್ಯ, ಸಿ.ಟಿ.ಉತ್ಸವ್ ಉತ್ತಪ್ಪ, ಸಿ.ಟಿ. ಉತ್ಕರ್ಷ್ ಉತ್ತಯ್ಯ, ಸಾರ್ಥಕ್ ಬೆಳ್ಳಿಯಪ್ಪ (ಗೋಲ್ ಕೀಪರ್), ಎ.ಜೆ. ಪ್ರಕುಲ್ ಗಣಪತಿ, ಮತ್ತು ಸಿ.ಬಿ. ಅಯಾನ್ ಅಯ್ಯಪ್ಪ, ಪೊನ್ನಂಪೇಟೆ ಸಂತ ಅಂತೋಣಿ ಶಾಲೆಯ ವಿದ್ಯಾರ್ಥಿಗಳಾದ ನಾಚಪ್ಪ, ಬೋಪಣ್ಣ ಹಾಗೂ ಮಡಿಕೇರಿಯ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪ್ರೀತಮ್ ಕರ್ನಾಟಕವನ್ನು ಪ್ರತಿನಿಧಿಸಲಿರುವ ಈ ತಂಡದಲ್ಲಿದ್ದಾರೆ.

Advertisements

ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಗೋಣಿಕೊಪ್ಪಲು ಲಯನ್ಸ್ ಶಾಲೆಯ ದೈಹಿಕ ಶಿಕ್ಷಕರಾದ ಗಾನ್ ಗಣಪತಿ, ಇಡೀ ರಾಜ್ಯ ತಂಡದಲ್ಲಿರುವ ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳು ಕೊಡಗಿನವರು ಎಂಬುದು ಹೆಚ್ಚು ಅಭಿಮಾನ ಮೂಡಿಸುತ್ತದೆ. ವಿಭಾಗ ಮಟ್ಟದಲ್ಲಿ ಮತ್ತು ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ತೋರಿರುವ ಈ ತಂಡ ರಾಷ್ಟ್ರಮಟ್ಟದಲ್ಲೂ ಸಾಧನೆಗೈಯ್ಯುವ ನಂಬಿಕೆಯಿದೆ. ಕಳೆದ ಹಲವು ತಿಂಗಳಿಂದ ನಿರಂತರ ಅಭ್ಯಾಸದಲ್ಲಿ ತೊಡಗಿರುವ ಈ  ವಿದ್ಯಾರ್ಥಿಗಳು ಪ್ರಸಕ್ತ ವರ್ಷ ಕರ್ನಾಟಕಕ್ಕೆ ಪ್ರಶಸ್ತಿ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X