ಯುವಜನರನ್ನು ವಂಚಿಸಿದ ಕಾಂಗ್ರೆಸ್ ಸ‌ರ್ಕಾರ: ಕೋಟಾ ಶ್ರೀನಿವಾಸ ಪೂಜಾರಿ

Date:

Advertisements

ರಾಜ್ಯ ಸರಕಾರವು ಯುವನೀತಿ ಅನುಷ್ಠಾನದ ವೇಳೆ ಕರ್ನಾಟಕದ ಯುವಜನರನ್ನು ವಂಚಿಸಿದೆ ಎಂದು ರಾಜ್ಯ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು ಆರೋಪಿಸಿದರು.

ಬೆಂಗಳೂರು ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಯುವನೀತಿ ಕುರಿತ ಪ್ರಣಾಳಿಕೆಯಲ್ಲಿ ಪದವಿ ಪಡೆದ ಎಲ್ಲ ನಿರುದ್ಯೋಗಿಗಳಿಗೆ 3 ಸಾವಿರ, ಡಿಪ್ಲೊಮಾ ಮಾಡಿದ ನಿರುದ್ಯೋಗಿಗೆ ಒಂದೂವರೆ ಸಾವಿರ ಕೊಡುವುದಾಗಿ ಹೇಳಿದ್ದರು. ಡಿಗ್ರಿ ಮತ್ತು ಡಿಪ್ಲೊಮಾ ಆದ 40 ಲಕ್ಷ ಜನರಿದ್ದಾರೆ. ಆದರೆ, ಬಿಜೆಪಿ ಯುವನೀತಿ ಅನುಷ್ಠಾನ ವಿಳಂಬದ ಕುರಿತು ಟೀಕಿಸಿದ ಬಳಿಕ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ” ಎಂದು ಆಕ್ಷೇಪಿಸಿದರು.

“2022-23ರಲ್ಲಿ ಡಿಗ್ರಿ ಪಡೆದ 4 ಲಕ್ಷ ಯುವಕರು, 48 ಸಾವಿರ ಜನ ಡಿಪ್ಲೊಮಾ ಪಡೆದವರು ಎಂದು ಅಂದಾಜು ಮಾಡಿದ್ದಾರೆ. ಅದರಲ್ಲಿ ಉದ್ಯೋಗ ಪಡೆದವರನ್ನು ಕೈಬಿಟ್ಟು ಹೆಚ್ಚು ಕಡಿಮೆ 3 ರಿಂದ 3.5 ಲಕ್ಷ ನಿರುದ್ಯೋಗಿಗಳಿಗೆ 600- 700 ಕೋಟಿ ಖರ್ಚು ಮಾಡಿ ಯುವನೀತಿ ಅನುಷ್ಠಾನ ಮಾಡಿದ್ದಾಗಿ ಹೇಳಿ ಹೆಮ್ಮೆಪಡುವ ಕೆಲಸ ಮಾಡಿದ್ದಾರೆ” ಎಂದು ದೂರಿದರು.

Advertisements

“ಹಿಂದೆ, ಪದವಿ- ಡಿಪ್ಲೊಮಾ ಪಡೆದ ಎಲ್ಲ ನಿರುದ್ಯೋಗಿಗಳಿಗೆ ಭತ್ಯೆ ಕೊಡುವ ಘೋಷಣೆ ಮಾಡಿದ್ದರು. ಈಗ 2022-23ನೇ ಸಾಲು ಎಂದಿದ್ದಾರೆ. ನೈಜ ಮಾನದಂಡದ ಪ್ರಕಾರ ಅನುಷ್ಠಾನ ಆದರೆ, 10 ಸಾವಿರ ಕೋಟಿಯಾದರೂ ಬೇಕಿತ್ತು” ಎಂದರು.

ಈ ಸುದ್ದಿ ಓದಿದ್ದೀರಾ? ಎಲ್ಲರನ್ನು ಸಮಾನತೆಯಿಂದ ಕಾಣುವ ರಾಮರಾಜ್ಯ ನಿರ್ಮಾಣ ಯಾವಾಗ?: ಪ್ರಿಯಾಂಕ್ ಖರ್ಗೆ

“ಕೇವಲ ಮತಕ್ಕಾಗಿ ಪಂಚ ಗ್ಯಾರಂಟಿ ಜಾರಿ ಮಾಡಿದ್ದಾರೆ. ನಿಜವಾಗಿ ಗ್ಯಾರಂಟಿ ಅನುಷ್ಠಾನದಲ್ಲಿ ಸರಕಾರ ವಿಫಲವಾಗಿದೆ. ಇನ್ನು ತಮ್ಮ ಪಕ್ಷದಲ್ಲಿ ಯಾವುದೇ ಶಿಸ್ತು ಮತ್ತು ಅಶಿಸ್ತು ಸೇರಿದಂತೆ ಪಕ್ಷದ ಮುಖಂಡರ ಎಲ್ಲ ಚಟುವಟಿಕೆಗಳನ್ನು ರಾಜ್ಯಾಧ್ಯಕ್ಷರು ಮತ್ತು ರಾಷ್ಟ್ರೀಯ ತಂಡಗಳು ಕಾಲಕಾಲಕ್ಕೆ ಗಮನಿಸಲಿವೆ. ಸಕಾಲದಲ್ಲಿ ಸರಿಯಾದ ನಿರ್ಧಾರ ಆಗಲಿದೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

“ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಅದರಲ್ಲಿ ಎರಡು ಮಾತಿಲ್ಲ. ಆದರೆ, ಸರಕಾರವು ಹಿಂಸಾಚಾರ ಇಲ್ಲದೆ ಇದನ್ನು ಅನುಷ್ಠಾನಕ್ಕೆ ತರಬೇಕಿದೆ. ಸರಕಾರವು ಹಿಂಸಾಚಾರಕ್ಕೆ ಎಡೆ ಕೊಡದಿರಲಿ. ಆದರೆ, ಕನ್ನಡದ ಸಾರ್ವಭೌಮತೆಗಾಗಿ ಬೀದಿಯಲ್ಲಿ ನಿಂತು ಕೂಗುವ ಪರಿಸ್ಥಿತಿಯೂ ಬರಬಾರದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ನಲವತ್ತು ಸಾವಿರ ಕೋಟಿ ಗುಳುಂ ಮಾಡೀರೆಂದು ನಿಮ್ಮ ಪಕ್ಷದವರೇ ಹೇಳುವರು,, ಮೊದಲು ಅದನ್ನು ರಾಜ್ಯದ ಬೊಕ್ಕಸಕ್ಕೆ ವಾಪಸ್ ಕೊಡಿ ಆಮೇಲೆ ನಿಮ್ಮ ಹರಿಶ್ಚಂದ್ರಗಿರಿ ಹೇಳಿರಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X