ಧಾರವಾಡ | ಯುವನಿಧಿ ಯೋಜನೆಗೆ ನೊಂದಣಿ ಆರಂಭ: ಅಪರ ಜಿಲ್ಲಾಧಿಕಾರಿ

Date:

Advertisements

ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಜಿಲ್ಲೆಯಲ್ಲಿ ಇಂದಿನಿಂದ ನೋಂದಾಣಿ ಪ್ರಕ್ರಿಯೆ ಆರಂಭವಾಗಿದೆ. ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಹೇಳಿದ್ದಾರೆ.

ಇಂದು ಬೆಳಿಗ್ಗೆ (ಡಿ.27) ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ಯುವನಿಧಿ ಯೋಜನೆಯ ಬಿತ್ತಿಪತ್ರವನ್ನು ಅನಾವರಣಗೊಳಿಸಿ, ಸಭೆಯ ಅಧ್ಯಕ್ಷೆತೆ ವಹಿಸಿದ್ದ ಅವರು ಮಾತನಾಡಿದರು.

ಈ ಯೋಜನೆಯಡಿಯಲ್ಲಿ ಪದವೀಧರರು, ಡಿಪ್ಲೋಮಾ ತೇರ್ಗಡೆಯಾದವರು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಾಂಗ ಮಾಡಿ, 2023ರಲ್ಲಿ ತೇರ್ಗಡೆಯಾದ ಮತ್ತು ಫಲಿತಾಂಶ ಪ್ರಕಟಗೊಂಡ 180 ದಿವಸದ ಒಳಗಡೆ ಕೆಲಸ ದೊರೆಯದ ನಿರುದ್ಯೋಗಿ ಅರ್ಹ ಅಭ್ಯರ್ಥಿಗಳಿಗೆ ಸೇವಾಸಿಂಧು ಪೋರ್ಟಲ್‌ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಯುವನಿಧಿ ಯೋಜನೇಯ ನೋಂದಣಿ ಪ್ರಕ್ರಿಯೆಯು ಡಿ.26 ರಿಂದ ಜಿಲ್ಲೆಯಲ್ಲಿ ಆರಂಭವಾಗಿದೆ.

Advertisements

ಈ ಯುವನಿಧಿ ಯೋಜನೆಗೆ ನೋಂದಣಿಯಾದ ಪದವೀಧರರಿಗೆ ರೂ. 3,000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ. 1,500 ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಅಗತ್ಯವಾದ ಎಲ್ಲ ದಾಖಲೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಮುಂಚಿತವಾಗಿ ತಾತ್ಕಾಲಿಕ ಪದವಿ ಹಾಗೂ ಡಿಪ್ಲೋಮಾ ಪ್ರಮಾಣ ಪತ್ರ ಪಡೆದು 180ದಿನಗಳು ಪೂರ್ಣಗೊಳ್ಳುವ ಮುಂಚೆ ಅರ್ಜಿ ಸಲ್ಲಿಸತಕ್ಕದ್ದು, 180 ದಿನಗಳ ನಂತರ ಸೌಲಭ್ಯವನ್ನು ನೀಡಲಾಗುವುದು. ಅಭ್ಯರ್ಥಿಯು ನಿರುದ್ಯೋಗಿ ಎಂದು ದೃಢೀಕರಿಸಬೇಕು ಮತ್ತು ಘೋಷಣೆಯನ್ನು ಸಲ್ಲಿಸಬೇಕು. ಉದ್ಯೋಗ ದೊರಕಿದ ನಂತರ ಅಭ್ಯರ್ಥಿಯು ತಕ್ಷಣವೇ ಮುಚ್ಚಳಿಕೆ ಪತ್ರ ನೀಡತಕ್ಕದ್ದು ಎಂದು ಅವರು ತಿಳಿಸಿದರು.

ನೋಂದಾಯಿತ ಅಭ್ಯರ್ಥಿ ವಿವರಗಳನ್ನು ಎನ್‌ಎಡಿ ಮೂಲಕ ಪರಿಶೀಲಿಸಲಾಗುವುದು. ಪದವಿ ಹಾಗೂ ಡಿಪ್ಲೋಮಾದ ಪ್ರಮಾಣ ಪತ್ರಗಳನ್ನು ಮ್ಯಾನುವೆಲ್ ಮೂಲಕ ಅಪ್ಲೋಡ್ ಮಾಡಿದರೆ, ಅಪ್ಲೋಡ್ ಮಾಡಿದ ದಾಖಲೆಗಳ ವಿವರಗಳನ್ನು ಆಯಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಿಗೆ  ರವಾನಿಸಲಾಗುವುದು, ತಪ್ಪು ಘೋಷಣೆ ಅಥವಾ ಉದ್ಯೋಗ ಪಡೆದಿರುವುದನ್ನು ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ.

ಪಾವತಿಸಿದ ಮೊತ್ತವನ್ನು ಕಾನೂನಿನ ಪ್ರಕಾರ ವಸೂಲಿ ಮಾಡಲಾಗುವುದು. ಯುವನಿಧಿ ಯೋಜನೆಯಡಿ ನೋಂದಾಯಿತ ಅಭ್ಯರ್ಥಿಗಳ ದತ್ತಾಂಶವನ್ನು ಪರಿಶೀಲನೆಗಾಗಿ ಕೌಶಲ್ಯ ಸಂಪರ್ಕ ಪೆರ್ಟಲ್‍ಗೆ ಲಭ್ಯವಿರುವ ದತ್ತಾಂಶದೊಂದಿಗೆ ವರ್ಗಾಯಿಸಲಾಗುವುದು.

ನಿರುದ್ಯೋಗಿಯಾಗಿರುವುದನ್ನು ನಿಗದಿತ ನಮೂನೆಯಲ್ಲಿ ಪ್ರತಿ ತಿಂಗಳ 25ನೇ ತಾರೀಖು ಅಥವಾ ಅದಕ್ಕಿಂತ ಮೊದಲು ಆಧಾರ್ ಆಧಾರಿತ ಒಟಿಪಿ ಮೂಲಕ ಘೋಷಣೆ ಮಾಡತಕ್ಕದ್ದು. 2023ರಲ್ಲಿ ಪದವಿ, ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಸೇವಾಸಿಂಧು ಆನ್‍ಲೈನ್‍ನಲ್ಲಿ ನೋಂದಣಿಯಾಗಿ  ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ವೇದಿಕೆಯ ಮೇಲೆ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಡಾ.ಚಂದ್ರಪ್ಪ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಪ್ರಭಾರಿ ಸಹಾಯಕ ನಿರ್ದೇಶಕ ಮಹೇಶ ಅವರು ಉಪಸ್ಥಿತರಿದ್ದರು. ಸಭೆಯಲ್ಲಿ ಪದವಿ ಹಾಗೂ ಡಿಪ್ಲೋಮಾ ಕಾಲೇಜಿನ ಪ್ರಾಂಶುಪಾಲರು ಮತ್ತು ಜಿಲ್ಲಾ, ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X