ಬಜರಂಗ್ ಪುನಿಯಾ ಜೊತೆ ಕುಸ್ತಿಯಾಡಿದ ರಾಹುಲ್ ಗಾಂಧಿ

Date:

Advertisements

ಹರ್ಯಾಣಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೇ ಸಂದರ್ಭದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರೊಂದಿಗೆ ಕುಸ್ತಿಯಾಡಿದ್ದಾರೆ.

ಬಜರಂಗ್ ಪುನಿಯಾ ಅವರೊಂದಿಗೆ ಕುಸ್ತಿಯಾಡಿರುವ ಹಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರು ಕುಸ್ತಿ ತಾಲೀಮು ನಡೆಸುತ್ತಿದ್ದು, ಇದನ್ನು ಹಲವು ಮಂದಿ  ನೋಡುತ್ತಿರುವುದು ಚಿತ್ರಗಳಲ್ಲಿ ಕಂಡು ಬಂದಿದೆ.

ಹಲವಾರು ವರ್ಷಗಳ ಸತತ ಪರಿಶ್ರಮ, ಶಿಸ್ತು, ತಾಳ್ಮೆಯ ಜೊತೆ ತಮ್ಮ ರಕ್ತವನ್ನು ಬಸಿದ ಆಟಗಾರ ತನ್ನ ದೇಶಕ್ಕೆ ಪದಕ ತಂದುಕೊಡುತ್ತಾನೆ. ಇಂದು ತಾನು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹಾಗೂ ಇತರ ಕುಸ್ತಿಪಟುಗಳನ್ನು ಭೇಟಿ ಮಾಡಿ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಿದೆ ಎಂದು ರಾಹುಲ್ ಗಾಂಧಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Advertisements

“ಈ ಆಟಗಾರರು, ಭಾರತದ ಸುಪುತ್ರಿಯರು ಅಖಾಡದಲ್ಲಿ ಕುಸ್ತಿ ಕೈಬಿಟ್ಟು ತಮ್ಮ ಹಕ್ಕುಗಳಿಗಾಗಿ ಮತ್ತು ನ್ಯಾಯಕ್ಕಾಗಿ ಬೀದಿಗಳಲ್ಲಿ ಹೋರಾಟ ನಡೆಸಿದರೂ ನ್ಯಾಯ ಸಿಗದಿದ್ದರೆ ಮುಂದೆ ತಮ್ಮ ಮಕ್ಕಳನ್ನು ಕ್ರೀಡೆಗಳಿಗೆ ಕಳಿಸಲು ಯಾರು ಪ್ರೋತ್ಸಾಹಿಸುತ್ತಾರೆ? ಇವರೆಲ್ಲ ರೈತ ಕುಟುಂಬದಿಂದ ಬಂದ ಅಮಾಯಕರು, ನೇರವಂತಿಕೆ ಹಾಗೂ ಸರಳ ಸ್ವಭಾವದ ಜನರು. ಇವರು ತ್ರಿವರ್ಣ ಧ್ವಜದ ಸೇವೆ ಮಾಡಲು ಬಿಡೋಣ ಹಾಗೂ ಸಂಪೂರ್ಣ ಗೌರವ ಹಾಗೂ ಘನತೆಯೊಂದಿಗೆ ಭಾರತವು ಹೆಮ್ಮೆ ಪಡುವಂತೆ ಮಾಡಲು ಅವಕಾಶ ನೀಡೋಣ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

ಬಜರಂಗ್ ಪುನಿಯಾ ಅವರೊಂದಿಗೆ ಇತರ ರಾಷ್ಟ್ರಮಟ್ಟದ ಕುಸ್ತಿಪಟುಗಳಾದ ದೀಪಕ್ ಪುನಿಯಾ ಸೇರಿದಂತೆ ಮುಂತಾದವರನ್ನು ರಾಹುಲ್ ಭೇಟಿ ಮಾಡಿದರು.

ದೀಪಕ್ ಪೂನಿಯಾ 2022 ರ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಾಗಿದ್ದಾರೆ.

ರಾಹುಲ್ ಗಾಂಧಿ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಜರಂಗ್ ಪುನಿಯಾ, ‘ರಾಹುಲ್ ಗಾಂಧಿ ಅವರು ಕುಸ್ತಿಪಟುವಿನ ದೈನಂದಿನ ಚಟುವಟಿಕೆಗಳನ್ನು ನೋಡಲು ಬಂದಿದ್ದರು. ಅವರು ನನ್ನೊಂದಿಗೆ ಕುಸ್ತಿ ಮತ್ತು ವ್ಯಾಯಾಮ ಮಾಡಿದರು’ ಎಂದು ತಿಳಿಸಿದ್ದಾರೆ.

ಕ್ರೀಡಾ ಸಚಿವಾಲಯವು ಸಂಜಯ್‌ ಸಿಂಗ್‌ ನೇತೃತ್ವದ ನೂತನ ಡಬ್ಲ್ಯುಎಫ್ಐ ಪದಾಧಿಕಾರಿಗಳ ಆಯ್ಕೆಯನ್ನು ಅಮಾನತುಗೊಳಿಸಿದೆ.

ಬಜರಂಗ್ ಪುನಿಯಾ ಸೇರಿದಂತೆ ಹಲವಾರು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುಗಳು ಬ್ರಿಜ್ ಭೂಷಣ್ ಅವರ ಸಹಾಯಕ ಸಂಜಯ್ ಸಿಂಗ್ ಆಯ್ಕೆಯನ್ನು ವಿರೋಧಿಸಿದ್ದಾರೆ.

ಸಂಜಯ್ ಸಿಂಗ್ ಅವರ ಆಯ್ಕೆಯನ್ನು ವಿರೋಧಿಸಿ ಭಜರಂಗ್ ಪುನಿಯಾ, ವೀರೇಂದ್ರ ಸಿಂಗ್ ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿದರೆ, ವಿನೀಶ್ ಪೋಗಟ್ ಅರ್ಜುನ ಪ್ರಶಸ್ತಿ ಹಾಗೂ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ವಾಪಸ್ ಮಾಡಿದರು. ಮತ್ತೊಬ್ಬ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಕುಸ್ತಿ ತ್ಯಜಿಸುವುದಾಗಿ ಘೋಷಿಸಿದ್ದಾರೆ.

blank profile picture 973460 640
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X