ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ₹3 ಕೋಟಿ ಬೆಲೆಯ 22 ಕಾರು ಖರೀದಿಸಿ ಅಡಗಿಸಿಟ್ಟಿದ್ದ ಕೆಸಿಆರ್: ರೇವಂತ್ ರೆಡ್ಡಿ

Date:

Advertisements

ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 64 ಸ್ಥಾನಗಳಲ್ಲಿ ಭರ್ಜರಿ ಜಯ ಗಳಿಸುವುದರೊಂದಿಗೆ ಕಾಂಗ್ರೆಸ್‌ ನೇತೃತ್ವದ ಸರ್ಕಾರ ರಚನೆಯಾಗಿದ್ದು, ಇತ್ತೀಚೆಗಷ್ಟೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅಧಿಕಾರ ಸ್ವೀಕರಿಸಿದ್ದರು. ರೇವಂತ್ ರೆಡ್ಡಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಹಿಂದಿನ ಸಿಎಂ ಚಂದ್ರಶೇಖರ್ ರಾವ್ ಅವರ ಬಿಆರ್‌ಎಸ್‌ ಪಕ್ಷದ ಹಗರಣಗಳು ಒಂದೊಂದಾಗಿ ಬಹಿರಂಗಗೊಳ್ಳುತ್ತಿದೆ.

ಹೊಸ ಬೆಳವಣಿಗೆಯೊಂದರಲ್ಲಿ, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಸಿಆರ್, ತಲಾ 3 ಕೋಟಿ ಬೆಲೆಬಾಳುವ ಸುಮಾರು 22 ಟೊಯೊಟಾ ಲ್ಯಾಂಡ್ ಕ್ರೂಸರ್ ಕಾರುಗಳನ್ನು ಖರೀದಿಸಿತ್ತಲ್ಲದೇ, ಅದನ್ನು ಯಾರಿಗೂ ತಿಳಿಯದಂತೆ ರಹಸ್ಯ ಸ್ಥಳದಲ್ಲಿ ಬಚ್ಚಿಟ್ಟಿದ್ದ ವಿಚಾರ ಬೆಳಕಿಗೆ ಬಂದಿದೆ.

“ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂಬ ಅತಿಯಾದ ಆತ್ಮವಿಶ್ವಾಸದಲ್ಲಿ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖ‌ರ್ ರಾವ್ ಅವರ ಸರ್ಕಾರವು, ಸುಮಾರು ₹66 ಕೋಟಿ ಖರ್ಚು ಮಾಡಿ 22 ಟೊಯೊಟಾ ಲ್ಯಾಂಡ್ ಕ್ರೂಸರ್ ಕಾರುಗಳನ್ನು ಖರೀದಿಸಿತ್ತು” ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಮಾಹಿತಿ ನೀಡಿದ್ದಾರೆ.

Advertisements

‘ಪ್ರಜಾ ಪಾಲನಾ’ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ನಡೆದ ಸಂವಾದದ ವೇಳೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

“ಮುಖ್ಯಮಂತ್ರಿಯಾಗಿ ನಾನು ಅಧಿಕಾರ ಸ್ವೀಕರಿಸಿದ ನಂತರ ನನಗಾಗಿ ಹೊಸ ವಾಹನಗಳನ್ನು ಖರೀದಿಸದಂತೆ ಅಧಿಕಾರಿಗಳಿಗೆ ತಿಳಿಸಿದ್ದೆ. ಹಳೆಯ ಕಾರುಗಳನ್ನೇ ರಿಪೇರಿ ಮಾಡಿ ಬಳಸುವಂತೆ ಸೂಚಿಸಿದ್ದೆ. ಈ ವೇಳೆ ಅಧಿಕಾರಿಗಳು ಹೊಸ ಕಾರುಗಳನ್ನು ಈಗಾಗಲೇ ಖರೀದಿಸಿರುವ ಬಗ್ಗೆ ನನಗೆ ಮಾಹಿತಿ ನೀಡಿದರು” ಎಂದು ಹೇಳಿದ್ದಾರೆ.

“ಹಿಂದಿನ ಕೆಸಿಆರ್ ಸರ್ಕಾರ 22 ಲ್ಯಾಂಡ್ ಕ್ರೂಸರ್ ವಾಹನಗಳನ್ನು ಖರೀದಿಸಿತ್ತು. ಅವೆಲ್ಲವೂ ವಿಜಯವಾಡದಲ್ಲಿವೆ. ಕೆಸಿಆ‌ರ್ ಮೂರನೇ ಬಾರಿಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಅವುಗಳನ್ನು ತರಲು ಆಲೋಚಿಸಿದ್ದೆವು ಎಂದು ಅಧಿಕಾರಿಗಳು ತಿಳಿಸಿದರು. ಅಧಿಕಾರಿಗಳ ಬಾಯಿಂದ ಈ ವಿಚಾರ ಕೇಳಿ ನನಗೆ ಒಮ್ಮೆಲೆ ಶಾಕ್ ಆಯಿತು” ಎಂದು ರೇವಂತ್ ರೆಡ್ಡಿ ತಿಳಿಸಿದ್ದಾರೆ.

” ಖರೀದಿಸಿದ್ದ 22 ಕಾರುಗಳೆಲ್ಲವೂ ಬುಲೆಟ್ ಪ್ರೂಫ್ ಕಾರುಗಳಾಗಿದ್ದು, ಒಂದು ಕಾರಿನ ಬೆಲೆ ಸುಮಾರು ₹3 ಕೋಟಿ ಇದೆ. ಈ ರೀತಿಯಲ್ಲಿ ಕೆಸಿಆ‌ರ್ ಸರ್ಕಾರವು, ರಾಜ್ಯದ ಸಂಪತ್ತನ್ನು ಕೊಳ್ಳೆ ಹೊಡೆಯಲು ಹೊರಟಿತ್ತು” ಎಂದು ನೂತನ ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X