ಯಾರೊಬ್ಬರೂ ‘ಗೃಹಲಕ್ಷ್ಮೀ’ಯಿಂದ ವಂಚಿತರಾಗದಂತೆ ವಿಶೇಷ ಅದಾಲತ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

Advertisements

“ಗೃಹಲಕ್ಷ್ಮೀ ಯೋಜನೆಯ ಯಾವೊಬ್ಬ ಫಲಾನುಭವಿಗಳೂ ಕೂಡ ಯೋಜನೆಯಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿ ವಿಶೇಷ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿ ತಾಲೂಕಿನ ಹಲಗಾದಲ್ಲಿ ಬುಧವಾರ ಗೃಹಲಕ್ಷ್ಮೀ ಅದಾಲತ್‍ಗೆ ಚಾಲನೆ ನೀಡಿ ಮಾತನಾಡಿದ ಅವರು, “ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಸೂಚನೆಯ ಹಿನ್ನೆಲೆಯಲ್ಲಿ ಡಿ.29ರವರೆಗೆ ವಿಶೇಷ ಶಿಬಿರಗಳು ರಾಜ್ಯಾದ್ಯಂತ ನಡೆಯಲಿವೆ” ಎಂದು ತಿಳಿಸಿದರು.

“ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನದಲ್ಲಿ ಉಂಟಾಗುವ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ. ಯೋಜನೆಯ ಫಲಾನುಭವಿಗಳಿಗೆ ಏನಾದರೂ ಸಮಸ್ಯೆಗಳಿದ್ದರೆ ನಿಮ್ಮ ವ್ಯಾಪ್ತಿಯ ಗ್ರಾಮ ಪಂಚಾಯ್ತಿ ಕಚೇರಿಗೆ ತೆರಳಿ ಪರಿಹಾರ ಕಂಡುಕೊಳ್ಳಿ” ಎಂದು ಸಚಿವೆ ಸೂಚಿಸಿದರು.

Advertisements

“ಬೆಳಗಾವಿ ಜಿಲ್ಲೆಯಲ್ಲಿಯೇ ಸುಮಾರು 11 ಲಕ್ಷ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿದ್ದಾರೆ. ತಿಂಗಳಿಗೆ 202 ಕೋಟಿ ಹಣವನ್ನು ನೀಡಲಾಗುತ್ತಿದೆ. ಹಲಗಾ ಗ್ರಾಮವೊಂದರಲ್ಲಿಯೇ 1600 ಫಲಾನುಭವಿಗಳಿದ್ದಾರೆ. ಹಲಗಾ ಗ್ರಾಮದ ಕೆಲ ಫಲಾನುಭವಿಗಳು ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂದು ಸಮಸ್ಯೆ ತೋಡಿಕೊಂಡಿದ್ದಾರೆ. ಕೆಲವರಿಗೆ ಬ್ಯಾಂಕ್ ಖಾತೆಯ ಸಮಸ್ಯೆ ಇದೆ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿಲ್ಲ, ಕೆವೈಸಿ ಆಗಿಲ್ಲ, ಹೀಗೆ ವಿವಿಧ ತಾಂತ್ರಿಕ ಕಾರಣಗಳಿಂದಾಗಿ ಅವರಿಗೆ ಹಣ ಹೋಗಿಲ್ಲ. ವಿಶೇಷ ಶಿಬಿರದಲ್ಲಿ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು” ಎಂದು ತಿಳಿಸಿದರು.

ಇದೇ ವೇಳೆ ಸಚಿವೆ ಹೆಬ್ಬಾಳ್ಕರ್, ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿದ್ದ ಹಲವು ಫಲಾನುಭವಿಗಳನ್ನು ಸ್ವತಃ ಭೇಟಿಯಾಗಿ ಸಮಸ್ಯೆ ಆಲಿಸಿದರು. ಸ್ಥಳದಲ್ಲಿಯೇ ಪರಿಹಾರವನ್ನು ಒದಗಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಬಾರಿ ಉಪ ನಿರ್ದೇಶಕಿ ರೇವತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X