ಕಲಬುರಗಿ | ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಆಗ್ರಹ

Date:

Advertisements

ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಹಾಗೂ ಸೌಹಾರ್ದತೆಗೆ ಭಂಗ ಉಂಟು ಮಾಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ನನ್ನು ಕೂಡಲೇ ಬಂಧಿಸಬೇಕು. ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಿಪಿಐಎಂ ಆಗ್ರಹಿಸಿದೆ.

ಕಲಬುರಗಿಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಜಿಲ್ಲಾ ಸಮಿತಿಯ ಕಾರ್ಯಕರ್ತರು ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಸಿಪಿಐಎಂ ಜಿಲ್ಲಾ ಕಾರ್ಯಾದರ್ಶಿ ಕೆ.ನೀಲಾ ಮಾತನಾಡಿ, “ಕಳೆದೆರಡು ದಿನಗಳ ಹಿಂದೆ ಶ್ರೀರಂಗಪಟ್ಟಣದಲ್ಲಿ ನಡೆದ ಸಮಾವೇಶವನ್ನುದ್ದೇಶಿಸಿ ಮುಸ್ಲಿಂ ಮಹಿಳೆಯರನ್ನು ಅವಹೇಳನಕಾರಿಯಾಗಿ ನಿಂದಿಸಿ ಕೋಮು ಪ್ರಚೋದಕ ಹೇಳಿಕೆ ನೀಡಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಈ ಹೇಳಿಕೆ ಅವರ ಕೀಳುತನದ ಮಟ್ವವನ್ನು ತೋರ್ಪಡಿಸುತ್ತದೆ ಇದು ಅತ್ಯಂತ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ರಾಜ್ಯ ಸರಕಾರ ರಾಜ್ಯದ ಸೌಹಾರ್ದತೆಗೆ ಗಂಭೀರ ಧಕ್ಕೆ ತರುತ್ತಿರುವ ಮತ್ತು ಅಲ್ಪಸಂಖ್ಯಾತರನ್ನು ಅವಾಚ್ಯವಾಗಿ ನಿಂದಿಸುತ್ತಿರುವ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದಿರುವುದು ನಾಚಿಕೆಗೇಡು, ಸರಕಾರದ ದಿವ್ಯ ಮೌನವು ಇಂತಹ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಗಳಿಗೆ ಸಂಬಂಧಿಸಿ ಅದರ ಸಮ್ಮತಿಯಂತೆ ಕಂಡು ಬರುತ್ತಿದೆ ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಿಎಸ್‌ಎಸ್‌ಕೆ ಆಡಳಿತ ಮಂಡಳಿ ವಜಾಕ್ಕೆ ಆಗ್ರಹ

ಈ ಸಂದರ್ಭದಲ್ಲಿ ಸಿಪಿಐ ರಾಜ್ಯ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಪ್ರಕಾಶ, ಎಚ್.ಆರ್. ನವಿನಕುಮಾರ, ಟಿ.ಯಶ್ವಂತ, ಬಸವರಾಜ ಪೂಜಾರ, ಮುನಿ ವೆಂಕಟಪ್ಪಾ, ಎಂ.ಬಿ. ಸಜ್ಜನ, ಭಿಮಶೇಟ್ಟಿ ಯಂಪಳ್ಳಿ, ಗೌರಮ್ಮಾ ಪಿ ಪಾಟೀಲ್, ಶಾಂತಾ ಎನ್. ಘಂಟೆ, ಸುನಿಲ್ ಕುಮಾರ ಬಜಾಲ್, ಸುರೇಶ ಕಲ್ಲಾಗರ, ಮೀನಾಕ್ಷಿ ಬಾಳಿ, ಸಾಯಬಣ್ಣ ಗುಡುಬಾ, ಬಿ.ಎಂ.ಭಟ್, ಸಿ ಕುಮಾರಿ, ಪದ್ಮಿನಿ ಕಿರಣಗಿ, ಸಿದ್ದು ಹರವಾಳ, ಶ್ರೀಮಂತ ಬಿರಾದಾರ, ನಾಗಯ್ಯ ಸ್ವಾಮಿ, ಶರಣಬಸಪ್ಪಾ ಮಮಶೆಟ್ಟಿ ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X