ಮಧ್ಯಪ್ರದೇಶ : ತಡರಾತ್ರಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ: 12 ಮಂದಿ ಸಜೀವ ದಹನ

Date:

Advertisements

ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾದ ಆಘಾತಕಾರಿ ಘಟನೆ ವರದಿಯಾಗಿದೆ.

ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ ಹೊತ್ತಿ ಉರಿದಿದೆ. ಪರಿಣಾಮ ಬಸ್ಸಿನಲ್ಲಿದ್ದ  ಪ್ರಯಾಣಿಕರು ಸೇರಿದಂತೆ ಒಟ್ಟು 12 ಮಂದಿ ಸಜೀವ ದಹನಗೊಂಡು, ಇತರೆ 16 ಜನ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಈ ಭೀಕರ ಘಟನೆ ಮಧ್ಯ ಪ್ರದೇಶದ ಗುಣ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ ಸಂಭವಿಸಿದೆ.

Advertisements

ಮೃತದೇಹಗಳನ್ನು ಹೊರ ತೆಗೆಯುವ ಹಾಗೂ ಗಾಯಾಳುಗಳನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಗುಣ ಜಿಲ್ಲೆಯ ಜಿಲ್ಲಾಧಿಕಾರಿ ತರುಣ್ ರಥಿ ತಿಳಿಸಿದ್ದಾರೆ.

ಉನ್ನತಾಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು, ಘಟನೆಯ ಕುರಿತು ತನಿಖೆ ಪರಿಶೀಲನೆ ನಡೆಸುತ್ತಿದ್ದಾರೆ‌.

“ಗುನಾ-ಅರೋನ್ ಮಾರ್ಗದಲ್ಲಿ ಡಂಪರ್ ಮತ್ತು ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ದೊರೆತ ಮಾಹಿತಿಯ ಪ್ರಕಾರ 14 ಜನರನ್ನು ಗುನಾ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಇದುವರೆಗೆ 11 ಜನರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಸದ್ಯ ಗಾಯಾಳುಗಳ ಆರೈಕೆ ಹಾಗೂ ಅವರು ಚೇತರಿಸಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ಗುಣ ಜಿಲ್ಲಾಧಿಕಾರಿ ತರುಣ್ ರಥಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X