ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗದ ಬೀರಾವರ ಗ್ರಾಮದಲ್ಲಿ ನಡೆದಿದೆ. ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಬಿಸಿಯೂಟ ತಯಾರಿಸಲಾಗಿತ್ತು. ಆದರೆ, ಅದನ್ನು ಸೇವಿಸಿದ ವಿದ್ಯಾರ್ಥಿಗಳಲ್ಲಿ ವಾಂತಿ-ಭೇದಿ ಕಾರಣಿಸಿಕೊಂಡಿದೆ. ತಕ್ಷಣ ವಿದ್ಯಾರ್ಥಿಗಳನ್ನು ಜಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆಹಾರ ಕಲುಷಿತವಾಗಿದ್ದ ಕಾರಣ ವಾಂತಿ-ಭೇದಿ ಕಾಣಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಹೇಳಲಾಗಿದೆ.