ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ನೆಲೆಯೂರುವಂತೆ ಮಾಡಿದ್ದು ಕಾಂಗ್ರೆಸ್: ಡಿ ಕೆ ಶಿವಕುಮಾರ್

Date:

Advertisements

ನಮ್ಮ ದೇಶಕ್ಕೆ ಎದುರಾಗಿರುವ ಸಂಕಷ್ಟವನ್ನು ಎದುರಿಸಿ, ನಾವೆಲ್ಲ ಶಕ್ತಿ ತುಂಬಬೇಕು. ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ 139ನೇ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಗುರುವಾರ ಮಾತನಾಡಿದ ಅವರು, “ಈ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ನೆಲೆಯೂರುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷ. ಈ ದೇಶದ ಇತಿಹಾಸ, ಅಭಿವೃದ್ಧಿ ಪರ್ವ ಬರೆದದ್ದು ನಮ್ಮ ಹೆಗ್ಗಳಿಕೆ” ಎಂದರು.

“ಅನ್ಯರು ಏನು ಬೇಕಾದರೂ ಹೇಳಬಹುದು, ಆದರೆ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು, ಅದನ್ನು ಅಭಿವೃದ್ದಿಯ ಪಥದಲ್ಲಿ ಕೊಂಡೊಯ್ದದ್ದು ಕಾಂಗ್ರೆಸ್. ನಿರ್ಲಕ್ಷಿತ ಸಮುದಾಯಕ್ಕೆ ಧ್ವನಿ, ವಿದ್ಯಾಭ್ಯಾಸ, ಆರ್ಥಿಕ ಶಕ್ತಿ ಕೊಟ್ಟದ್ದು, ಅಣೆಕಟ್ಟುಗಳ ನಿರ್ಮಾಣ ಸೇರಿದಂತೆ ದೇಶವನ್ನು ಅಭಿವೃದ್ದಿಶೀಲವನ್ನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಹೇಳಲು ಹೆಮ್ಮೆಯಾಗುತ್ತದೆ” ಎಂದು ಹೇಳಿದರು.

Advertisements

“ಮಹಾತ್ಮ ಗಾಂಧಿ, ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಇಂದಿರಾಗಾಂಧಿ ಸೇರಿದಂತೆ ಸಾವಿರಾರು ಜನ ಈ ದೇಶಕ್ಕೆ ತಮ್ಮ ಬದುಕನ್ನು ಸಮರ್ಪಿಸಿಕೊಂಡಿದ್ದಾರೆ. ಕಾರ್ಯಕರ್ತರ ಪರಿಶ್ರಮದಿಂದ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ನಾವು ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳ ಮೂಲಕ ಸುಮಾರು 60 ಸಾವಿರ ಕೋಟಿ ಹಣ ನೇರವಾಗಿ ಜನರಿಗೆ ಸೇರಿದೆ” ಎಂದರು.

“ಜ.10 ರಂದು ಕೇಂದ್ರ ನಾಯಕರು ಹಾಗೂ ರಾಜ್ಯದ ಎಲ್ಲ ಶಾಸಕರನ್ನು ಒಳಗೊಂಡು ಲೋಕಸಭೆ ಚುನಾವಣೆ ತಯಾರಿಗೆ ಸಭೆ ನಡೆಸಲಾಗುವುದು. ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡುವುದರ ಬಗ್ಗೆ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಾಗುವುದು. ಕಾರ್ಯಕರ್ತರು ಮನೆ, ಮನೆಗೆ ತೆರಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಚಾರ ಮಾಡಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

ಆ‌ರ್‌ಎಸ್ಎಸ್‌ಗೂ ರಾಮಮಂದಿರಕ್ಕೂ ಸಂಬಂಧವಿಲ್ಲ

“ಆರ್‌ಎಸ್‌ಎಸ್‌ಗೂ ರಾಮಮಂದಿರಕ್ಕೂ ಏನೂ ಸಂಬಂಧವಿಲ್ಲ. ಆದರೆ ಬಿಜೆಪಿ, ಆರ್ ಎಸ್ಎಸ್ ನವರನ್ನು ಬಳಸಿಕೊಂಡು ಮನೆ, ಮನೆಗೆ ತೆರಳಿ, ಅಕ್ಷತೆ ಕೊಟ್ಟು ಇಲ್ಲಿಂದಲೇ ರಾಮಮಂದಿರಕ್ಕೆ ನಮನ ಸಲ್ಲಿಸಿ ಎಂದು ಪ್ರಚಾರ ಮಾಡುತ್ತಿದೆ. ಬಿಜೆಪಿಯವರು ಭಾವನೆ ಮೇಲೆ ರಾಜಕಾರಣ ಮಾಡುತ್ತಿದ್ದರೆ, ನಾವು ಜನರ ಬದುಕಿನ ಬಗ್ಗೆ ರಾಜಕಾರಣ ಮಾಡುತ್ತಿದ್ದೇವೆ. ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವುದು ನಮ್ಮ ಉದ್ದೇಶ” ಎಂದರು.

“ಪ್ರತಿಯೊಂದು ವಾರ್ಡ್, ಪಂಚಾಯಿತಿಯಲ್ಲಿ ಆಶ್ರಯ ಸಮಿತಿ ಸೇರಿದಂತೆ ಅನೇಕ ಸಮಿತಿಗಳಿದ್ದು, ಇಲ್ಲೆಲ್ಲಾ ಕಾರ್ಯಕರ್ತರಿಗೆ ಶೀಘ್ರ ಸ್ಥಾನಗಳನ್ನು ಕಲ್ಪಿಸಲಾಗುವುದು. ಎರಡು ವರ್ಷಗಳಿಗೆ ಒಮ್ಮೆ ಬದಲಾವಣೆ ಮಾಡಬೇಕು ಎನ್ನುವ ಆಲೋಚನೆ ನಮ್ಮಲ್ಲಿದೆ. ಕಾರ್ಯಕರ್ತರ ಕೆಲಸಗಳ ಬಗ್ಗೆ ನಮಗೆ ಅರಿವಿದೆ, ಅವರಿಗೆ ನ್ಯಾಯ ಒದಗಿಸಲಾಗುವುದು. ರಾಜಕಾರಣದಲ್ಲಿ ಅಧಿಕಾರ ಶಾಶ್ವತವಲ್ಲ. ಆದರೆ ಕಾರ್ಯಕರ್ತರ ತ್ಯಾಗವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕಾಗಿರುವುದು ನಮ್ಮ ಕರ್ತವ್ಯ” ಎಂದು ಹೇಳಿದರು.

ಗ್ಯಾರಂಟಿ ಕವನ ವಾಚಿಸಿದ ಡಿಸಿಎಂ

ಐದನೇ ಗ್ಯಾರಂಟಿ ಯೋಜನೆ ಯುವನಿಧಿ ನೋಂದಣಿ ಉದ್ಘಾಟನಾ ಸಮಾರಂಭದಲ್ಲಿ ವಾಚಿಸಿ, ಭಾರೀ ಮೆಚ್ಚುಗೆಗೆ ವ್ಯಕ್ತವಾಗಿದ್ದ ತಮ್ಮ ಕವನವನ್ನು ಡಿಸಿಎಂ ಮತ್ತೊಮ್ಮೆ ವಾಚಿಸಿದರು.

“ಐದು ಬೆರಳು ಸೇರಿ ಒಂದು ಮುಷ್ಠಿಯಾಯಿತು,
ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು,
ಅರಳಿದ ಕಮಲದ ಹೂವು ಇದನ್ನು ನೋಡಿ ಉದುರಿ ಹೋಯಿತು,
ಐದು ಗ್ಯಾರಂಟಿ ನೋಡಿ ಮಹಿಳೆ ತಾನು ಹೊತ್ತ ತೆನೆಯ ಎಸೆದು ಹೋದಳು,
ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು,
ಕರ್ನಾಟಕ ಸಮೃದ್ಧವಾಯಿತು,
ಕರ್ನಾಟಕ ಪ್ರಬುದ್ಧವಾಯಿತು” ಎಂದು ಕವನ ವಾಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X