ಗೂಢಚಾರ ಆರೋಪದ ಮೇಲೆ ಕಳೆದ ತಿಂಗಳು ಗಲ್ಲು ಶಿಕ್ಷೆಗೆ ಒಳಗಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ಕತಾರ್ ನ್ಯಾಯಾಲಯವು ಗಲ್ಲು ಶಿಕ್ಷೆಯನ್ನು ಕಡಿತಗೊಳಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಭಾರತದ ವಿದೇಶಾಂಗ ಇಲಾಖೆ, ದಹ್ರಾ ಗ್ಲೋಬಲ್ ಪ್ರಕರಣದಲ್ಲಿ ಗಲ್ಲು ಶಿಕ್ಷೆಯನ್ನು ಕಡಿತಗೊಳಿಸಲು ಮನವಿ ಮಾಡಿತ್ತು. ಆದಾಗ್ಯೂ, ಅದಕ್ಕೆ ನ್ಯಾಯಾಲಯ ಏನು ಹೇಳಿದೆ ಎಂದು ಸ್ಪಷ್ಟಪಡಿಸಲಾಗಿಲ್ಲ. ವಿವರವಾದ ತೀರ್ಪಿನ ಬಗ್ಗೆ ನಿರೀಕ್ಷಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.
ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಭಾರತ ಸರ್ಕಾರ ಮನವಿ ಸಲ್ಲಿಸಿದ ಕೆಲವು ವಾರಗಳ ನಂತರ ಈ ಬೆಳವಣಿಗೆ ಉಂಟಾಗಿದೆ.
ಭಾರತೀಯ ಅಧಿಕಾರಿಗಳು ಕಾನೂನು ತಂಡದೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಹಾಗೆಯೇ ಕುಟುಂಬ ಸದಸ್ಯರು ಮುಂದಿನ ಕ್ರಮಗಳ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?
“ದಹ್ರಾ ಗ್ಲೋಬಲ್ ಪ್ರಕರಣದಲ್ಲಿ ಕತಾರ್ ನ್ಯಾಯಾಲಯ ಇಂದು ತೀರ್ಪು ನೀಡಿದ್ದನ್ನು ನಾವು ಗಮನಿಸಿದ್ದು, ಮರಣ ದಂಡನೆಯನ್ನು ತಗ್ಗಿಸಲಾಗಿದೆ. ವಿವರವಾದ ತೀರ್ಪಿಗಾಗಿ ಕಾಯುತ್ತಿದ್ದೇವೆ” ಎಂದು ವಿದೇಶಾಂಗ ಇಲಾಖೆಯು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
“ಕುಟುಂಬದ ಸದಸ್ಯರೊಂದಿಗೆ ಕತಾರ್‌ನ ನಮ್ಮ ರಾಯಭಾರಿ ಹಾಗೂ ಇತರ ಅಧಿಕಾರಿಗಳು ಮನವಿ ಸಲ್ಲಿಸುವಾಗ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರು. ಪ್ರಕರಣದ ಆರಂಭದಿಂದಲೂ ನಾವು ಅವರ ಬೆಂಬಲಕ್ಕೆ ನಿಂತಿದ್ದೇವೆ. ಎಲ್ಲ ರೀತಿಯ ಕಾನೂನು ನೆರವು ನೀಡುವುದನ್ನು ವಿಸ್ತರಿಸುವುದನ್ನು ಮುಂದುವರೆಸುತ್ತೇವೆ. ಕತಾರ್ ಅಧಿಕಾರಿಗಳೊಂದಿಗೆ ಪ್ರಕರಣವನ್ನು ಮುಂದುವರಿಸುತ್ತೇವೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕತಾರ್‌ನ ಅಲ್ ದಹ್ರಾದ ಖಾಸಗಿ ಕಂಪನಿಯಲ್ಲಿ ಈ ಅಧಿಕಾರಿಗಳು ಕೆಲಸ ಮಾಡುತ್ತಿದ್ದು,ಕಳೆದ ವರ್ಷದ ಆಗಸ್ಟ್‌ನಲ್ಲಿ ಗೂಢಚಾರಿ ಆರೋಪದ ಮೇಲೆ ಬಂಧಿಸಲಾಗಿತ್ತು. ವಿಚಾರಣೆ ಪೂರ್ಣಗೊಂಡ ನಂತರ ಅಕ್ಟೋಬರ್ 26ರಂದು ಕತಾರ್ ನ್ಯಾಯಾಲಯ ಈ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.
ತೀರ್ಪಿನ ಬಗ್ಗೆ ಆಘಾತ ವ್ಯಕ್ತಪಡಿಸಿದ್ದ ಭಾರತ ಸರ್ಕಾರ ಪ್ರಕರಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವುದರೊಂದಿಗೆ ಕಾನೂನಿನ ಆಯ್ಕೆಗಳನ್ನು ಕೈಗೊಳ್ಳುವುದಾಗಿ ತಿಳಿಸಿತ್ತು.