ಬೆಂಗಳೂರು | ಕರಗ ಹೊತ್ತ ಅರ್ಚಕನ ಕೊಲೆಗೆ ಯತ್ನ; ದೂರು ದಾಖಲು

Date:

Advertisements
  • ಕರಗ ಹೊತ್ತ ಜ್ಞಾನೇಂದ್ರ ಅವರ ಮೈ ಮೇಲೆ ಸುಟ್ಟ ಗಾಯ
  • ಆದಿನಾರಾಯಣ ವಿರುದ್ಧ ಕೊಲೆ ಯತ್ನ ಆರೋಪ; ಎಫ್‌ಐಆರ್‌ ದಾಖಲು

ರಾಜಧಾನಿ ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಬೆಂಗಳೂರು ಕರಗ ಏ. 6ರಂದು ನಡೆದಿದ್ದು. ಈ ವೇಳೆ, ಕರಗಕ್ಕೆ ಅಪಚ್ಯುತಿ ತರಲು ಕೆಲವು ಕಿಡಿಗೇಡಿಗಳು ಉತ್ಸವಕ್ಕೆ ಬಳಸುವ ಹೂವಿಗೆ ಖಾರದ ಪುಡಿ ಹಾಗೂ ಕೆಲವು ರಾಸಾಯನಿಕಗಳನ್ನು ಮಿಶ್ರಣ ಮಾಡಿ ಎರಚಿದ್ದಾರೆ ಎಂದು ಕರಗ ಹೊತ್ತ ಅರ್ಚಕ ಜ್ಞಾನೇಂದ್ರ ಆರೋಪಿಸಿದ್ದಾರೆ.

ಕರಗ ಹೊತ್ತ ಜ್ಞಾನೇಂದ್ರ ಅವರ ಮೈ ಮೇಲೆ ಸುಟ್ಟ ಗಾಯಗಳಾಗಿದ್ದು, ರಾಸಾಯನಿಕ ವಸ್ತು ಎರಚಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಹಲಸೂರು ಗೇಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

“ಕರಗ ಉತ್ಸವದ ವೇಳೆ ಜ್ಞಾನೇಂದ್ರ ಮೇಲೆ ಆದಿನಾರಾಯಣ ಎಂಬ ವ್ಯಕ್ತಿ ಯಾವುದೋ ವಸ್ತು ಎಸೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜ್ಞಾನೇಂದ್ರ ನೀಡಿದ ದೂರಿನ ಮೇರೆಗೆ ಜಯನಗರದ ಆದಿನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ” ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ರಾಜಧಾನಿಯಲ್ಲಿ ದೇಶದ ಮೊದಲ 3‘ಡಿ’ ತಂತ್ರಜ್ಞಾನದ ಅಂಚೆ ಕಚೇರಿ

“ಈ ಘಟನೆಯಿಂದ ಜ್ಞಾನೇಂದ್ರ ಅವರ ಕುತ್ತಿಗೆ, ಎದೆ, ಹೊಟ್ಟೆಭಾಗ ಸೇರಿದಂತೆ ನಾನಾ ಕಡೆಗಳಲ್ಲಿ ಸುಟ್ಟಗಾಯಗಳಾಗಿವೆ. ಹಲವು ವರ್ಷಗಳಿಂದ ಕರಗ ಹೊರುವ ವಿಚಾರವಾಗಿ ಆದಿನಾರಾಯಣ ಹಾಗೂ ಜ್ಞಾನೇಂದ್ರ ನಡುವೆ ಮನಸ್ತಾಪವಿದೆ. ಈ ಕಾರಣಕ್ಕಾಗಿ ಆತ ಕೃತ್ಯ ಎಸಗಿರಬಹುದು” ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X