ತುಮಕೂರು | ಕನ್ನಡಪರ ಸಂಘಟನೆ ಮುಖಂಡರ ಬಂಧನಕ್ಕೆ ಕರವೇ ಖಂಡನೆ

Date:

Advertisements

ಕರ್ನಾಟಕದಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಮುಖಂಡರ ಬಂಧವನವನ್ನು ವಿರೋಧಿಸಿ ಹಾಗೂ ತುಮಕೂರು ನಗರದಲ್ಲಿರುವ ಅಂಗಡಿ ಮುಂಗಟ್ಟುಗಳ ನಾಮಫಲಕವನ್ನು ಕಡ್ಡಾಯವಾಗಿ ಕನ್ನಡದಲ್ಲಿ ಬರೆಸುವಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಕುಮಾರ್ ಮಾತನಾಡಿ, “ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಇಲ್ಲಿನ ನೆಲ, ಜಲ ಬಳಸಿಕೊಂಡು ತಮ್ಮ ಉದ್ಯಮ ಬೆಳೆಸುತ್ತಿರುವ ಬೇರೆ ರಾಜ್ಯಗಳ ಮಂದಿಗೆ ಕನ್ನಡ ಭಾಷೆ ಮಾತ್ರ ಬೇಡ ಎನ್ನುವುದು ತರವಲ್ಲ. ಕರ್ನಾಟಕ ಸರ್ಕಾರದ ಕರ್ನಾಟಕ ಅಂಗಡಿಗಳು ಮತ್ತು ಸ್ಥಾಪನೆಗಳ ಕಾಯ್ದೆ‌ ಕಲಂ 12(ಎ) ಅಡಿಯಲ್ಲಿ ಎಲ್ಲ ಅಂಗಡಿ ಮುಂಗಟ್ಟುಗಳ ನಾಮಫಲಕ ಶೇ.60ರಷ್ಟು ದಪ್ಪನಾಗಿ ಕನ್ನಡದಲ್ಲಿ, ಇತರೆ ಭಾಷೆಯಲ್ಲಿ ಶೇ.40ರಷ್ಟು ಇರಬೇಕೆಂಬ ನಿಯಮವಿದೆ. ಇದನ್ನು ಜಾರಿ ಮಾಡದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡರ ನೇತೃತವ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ಕನ್ನಡ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಸರ್ಕಾರ ಅವರ ಮೇಲೆ ಹಾಕಿರುವ ಕೇಸನ್ನು ಕೂಡಲೇ ರದ್ದು ಮಾಡಿ, ಅವರನ್ನು ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

“ತುಮಕೂರು ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಇಲ್ಲಿಗೆ ಎಲ್ಲ ಭಾಷಿಕರು ಬಂದು ತಮ್ಮ ವ್ಯಾಪಾರ ವಹಿವಾಟು ನಡೆಸುತಿದ್ದಾರೆ. ಆದರೆ ಬಹುತೇಕರು ತಮ್ಮ ಅಂಗಡಿ ಮುಂಗಟ್ಟುಗಳ ಮುಂದೆ ಹಾಕಿರುವ ನಾಮಫಲಕದಲ್ಲಿ ಕನ್ನಡದ ಬಳಕೆ ಬಗ್ಗೆ ನಿರ್ಲಕ್ಷ್ಯ ತೋರಿರುವುದು ಖಂಡನೀಯ. ಮುಂದಿನ 15 ದಿನ ಅಂದರೆ 2024ರ ಜನವರಿ 15ರೊಳಗೆ ಕನ್ನಡ ನಾಮಫಲಕ ಪ್ರದರ್ಶಿಸದ ಅಂಗಡಿ ಮುಂಗಟ್ಟುಗಳ ಮಾಲೀಕರು ಆಗಿರುವ ನೂನ್ಯತೆಯನ್ನು ಸರಿಪಡಿಸಿಕೊಳ್ಳದಿದ್ದರೆ ಬೆಂಗಳೂರಿನ ರೀತಿ ತುಮಕೂರು ನಗರದಲ್ಲಿಯೂ ಕನ್ನಡ ಸಂಘಟನೆಗಳು ಬೀದಿಗಳಿದು ಕಾರ್ಯಾಚರಣೆ ನಡೆಸಲಿವೆ” ಎಂದು ಧನಿಯಕುಮಾರ್ ಎಚ್ಚರಿಕೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ಹೊಂದಾಣಿಕೆ ರಾಜಕಾರಣ ಬಿಡದ ಹೊರತು ಕಾಂಗ್ರೆಸ್‌ಗೆ ಉಳಿಗಾಲವಿಲ್ಲ: ಕೆಂಚಮಾರಯ್ಯ

ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ ಅವರು ಮನವಿ ಸ್ವೀಕರಿಸಿ ಮಾತನಾಡಿ, “ಇಂದೇ ಪಾಲಿಕೆಯ ಮೂಲಕ ನಗರದಲ್ಲಿರುವ ಎಲ್ಲ ಅಂಗಡಿ ಮುಂಗಟ್ಟುಗಳ ಮಾಲೀಕರು ಕರ್ನಾಟಕ ಶಾಪ್ಸ್ ಅಂಡ್ ಎಸ್ಟಾಬ್ಲಿಷ್‌ಮೆಂಟ್ ಕಾಯ್ದೆ(ಕರ್ನಾಟಕ ಅಂಗಡಿಗಳು ಮತ್ತು ಸ್ಥಾಪನೆಗಳ ಕಾಯ್ದೆ‌) 1963 ಕಲಂ 2ಎ ಅನ್ವಯ ತಮ್ಮ ಅಂಗಡಿ ಮುಂಗಟ್ಟುಗಳ ನಾಮಫಲಕರಗಳನ್ನು ಪರಿಷ್ಕರಿಸಿಕೊಳ್ಳಲು ಸೂಚನೆ ನೀಡಲಾಗುವುದು” ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಕನ್ನಡ ಸಂಘಟನೆಗಳ ಮುಖಂಡರುಗಳಾದ ಕನ್ನಡ ಪ್ರಕಾಶ್, ಹಿರಿಯ ಕ್ರೀಡಾಪಟು ಟಿ ಕೆ ಆನಂದ್, ಪಿ ಎನ್ ರಾಮಯ್ಯ, ರಕ್ಷಿತ್ ಕರಿಮಣ್ಣೆ, ಶಬ್ಬೀರ್ ಅಹಮದ್,‌ ರಾಮಚಂದ್ರರಾವ್, ಮಹಿಳಾ ಘಟಕದ ಸುಕನ್ಯಾ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X