ಮೈಸೂರು | ದೇಶವನ್ನು ವಿಭಜಿಸಲು ಹೊರಟಿರುವ ಕೋಮು ರಾಜಕಾರಣ ಕೊನೆಗಾಣಬೇಕು: ಸಚಿವ ಎಚ್.ಸಿ ಮಹದೇವಪ್ಪ

Date:

Advertisements

ಸ್ವಾತಂತ್ರ್ಯ ಸಂಗ್ರಾಮದ ಮೂಲಕ ಸಮೃದ್ಧ ಭಾರತದ ನಿರ್ಮಾಣಕ್ಕೆ ಪೂರಕವಾಗುವಂತೆ ದೇಶದ ಆತ್ಮವಾದ ಸಂವಿಧಾನದ ಆಶಯವನ್ನು ಬಲಪಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದರೆ, ಧರ್ಮ ಮತ್ತು ದೇವರ ಹೆಸರಿನಲ್ಲಿ ದೇಶವನ್ನು ವಿಭಜಿಸಲು ಹೊರಟಿರುವ ಕೋಮುವಾದಿ ರಾಜಕಾರಣವನ್ನು ಕೊನೆಗಾಣಿಸಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.

ಮೈಸೂರು ನಗರ ಮತ್ತು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಸೇವಾದಳ ಸಹಯೋಗದಲ್ಲಿ ಗುರುವಾರ (ಡಿ.28) ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ 138ನೇ ಭಾರತದ ರಾಷ್ಟ್ರೀಯ ಕಾಂಗ್ರೆಸ್ ಹಾಗೂ 100ನೇ ಕಾಂಗ್ರೆಸ್ ಸೇವಾದಳ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚಳವಳಿಗೆ ಅಗಾಧವಾದ ಶಕ್ತಿ ಇದೆ‌. ಇಂದಿನ ದೇಶದ ಪರಿಸ್ಥಿತಿಗೆ ಅನುಗುಣವಾಗಿ ಚಳವಳಿಯನ್ನು ನಿರಂತರವಾಗಿ ನಡೆಸುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭಿಸಲು ಕಾಂಗ್ರೆಸ್ ಪಕ್ಷ ಸಿದ್ಧವಿದೆ.

Advertisements

ಅನೇಕ ಧರ್ಮಗಳು, ವಿವಿಧ ಭಾಷೆಯ ಜನರು ವಾಸಿಸುವ ಬಹುತ್ವದ ಭಾರತಕ್ಕೆ ಕಾಂಗ್ರೆಸ್ ಅನೇಕ ಕೊಡುಗೆಗಳನ್ನು ನೀಡಿದೆ. ಇಂದು ಕೋಮುವಾದ, ಮತೀಯವಾದ, ಧರ್ಮಾಂದತೆ, ಸ್ವಾತಂತ್ರ್ಯದ ಉದ್ದೇಶ ಕಾಂಗ್ರೆಸ್ ಹೋರಾಟದ ಆಶಯಗಳನ್ನು ನಾಶ ಮಾಡಲು ಹೊರಟಿದ್ದಾರೆ. ಭಾರತದ ಇಡೀ ಚರಿತ್ರೆಯನ್ನು ತಿರುಚುವ ಕೆಲಸ ಮಾಡಲಾಗುತ್ತದೆ. ನಮ್ಮ ನಾಗರೀಕ ಬದುಕನ್ನು, ಸಾಂಸ್ಕೃತಿಕ ಜೀವನ ನಾಶಮಾಡಿ ಬಹುತ್ವಕ್ಕೆ ಭಂಗ ತರುವ ಕೆಲಸ ನಡೆಯುತ್ತಿದೆ. ಹೀಗಾಗಿ ಸರ್ವಾಧಿಕಾರ ಆಡಳಿತವನ್ನು ಕೊನೆಗಾಣಿಸಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಎಂದರೆ ಒಗ್ಗೂಡುವಿಕೆ ಎಂದರ್ಥ. ಜನರನ್ನು ಒಗ್ಗೂಡಿಸಿ ಜನಶಕ್ತಿಯ ಮೂಲಕ ಪರಕೀಯರು ನಮ್ಮನ್ನು ಆಳುವಿಕೆಯ ವಿರುದ್ಧವಾಗಿ ಕಾಂಗ್ರೆಸ್ ಹೋರಾಟ ಮಾಡಿದೆ. ವಸಹಾತುಶಾಹಿ ಸಾಮ್ರಾಟರ ವಿರುದ್ಧವಾಗಿ ಸಂಘಟನಾತ್ಮಕವಾಗಿ ಅಹಿಂಸೆ ಮತ್ತು ಅಸಹಕಾರ ಚಳವಳಿಯನ್ನು ಮಾಡಿರುವ ಕಾಂಗ್ರೆಸ್‌ನ ಉದ್ದೇಶ ಕೋಮುಸೌರ್ಹದತೆ ಕಾಪಾಡುವುದು, ಅಸ್ಪೃಶ್ಯತೆ ನಿವಾರಣೆ ಮಾಡುವುದು ಆಗಿದೆ ಎಂದು ಹೇಳಿದರು.

ಕಾಂಗ್ರೆಸ್ ಹೋರಾಟ ರಾಜಕೀಯ ಉದ್ದೇಶವನ್ನು ಇಟ್ಟುಕೊಂಡು ಮಾಡಿದ್ದಲ್ಲ. ಜನರು ಮತ್ತು ದೇಶದ ಹಿತಕ್ಕಾಗಿ ಮಾಡಿದ ಚಳವಳಿ. ಕಾಂಗ್ರೆಸ್‌ನ ಅನೇಕ ನಾಯಕರ ತ್ಯಾಗ, ಬಲಿದಾನಗಳನ್ನು ಮಾಡಿರುವುದು ಚರಿತ್ರೆಯಲ್ಲಿ ದಾಖಲಾಗಿದೆ. ಹೀಗಾಗಿ ಕಾಂಗ್ರೆಸ್‌ ಪಕ್ಷದ ಸದಸ್ಯರು ಎಂದು ಹೇಳಲು ನಮ್ಮೆಲ್ಲರಿಗೂ ಹಮ್ಮೆ ಇದೆ.

ಸ್ವಾತಂತ್ರ್ಯ ಹೊರಾಟಕ್ಕೂ ಮೊದಲೇ ದಕ್ಷಿಣ ಆಫ್ರಿಕಾದಲ್ಲಿ ಕರಿಯರು ಹಾಗೂ ಬಿಳಿಯರ ನಡುವಿನ ಹೋರಾಟವನ್ನು ಕಾಂಗ್ರೆಸ್ ಮಾಡಿದೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ, ನೆಹರು ಹಾಗೂ ವಲ್ಲಭಾಯ್ ಪಟೇಲ್ ಸೇರಿದಂತೆ ಅನೇಕ ಘಟಾನುಘಟಿ ನಾಯಕರು ಭಾಗಿಯಾಗಿದ್ದಾರೆ. ಸಾಮಾಜಿಕ, ಆರ್ಥಿಕವಾಗಿ ಜನರ ಸ್ಥಿತಿಗತಿಗೆ ಅನುಗುಣವಾಗಿ ನಾವು ಸಂವಿಧಾನ ಪಡೆಯಲು ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನದ ರಚಿಸಿದರು. ಆದರೆ, ಇಂದು ಸ್ವಾತಂತ್ರ್ಯ ಸಂಗ್ರಾಮದ ಗೋಜಿಗೆ ಹೋಗದವರು ಇಂದು ಮೂಗುತೂರಿಸುತ್ತುದ್ದಾರೆ.

ಜವಾಹರ ಲಾಲ್ ನೆಹರು ಅವರಿಗೆ ಬದ್ಧತೆ ಇತ್ತು. ವೈಚಾರಿಕ ಮತ್ತು ವೈಜ್ಞಾನಿಕ ಆಲೋಚನೆ ಮೈಗೂಡಿಸಿಕೊಂಡಿದ್ದರು. ದೇಶವನ್ನು ಮುನ್ನಡೆಸುವ ದಾರಿ ಅವರಿಗೆ ಸ್ಪಷ್ಟವಾಗಿ ತಿಳಿದಿತ್ತು. ನೆಹರು ಅವರು ಈ ದೇಶದ ಸರ್ವಾಂಗೀಣ ಅಭಿವೃದ್ದಿಗೆ ಅಹರ್ನಶಿ ಶ್ರಮಿಸಿದ್ದಾರೆ. ಸ್ವಾಂತಂತ್ರ್ಯ ದೊರೆತಾಗ ದೇಶದಲ್ಲಿ ಶಿಕ್ಷಣ, ಸಾಕ್ಷರತೆ ಕೇವಲ ಶೇ.10ರಷ್ಟಿತ್ತು. ಪ್ರಸ್ತುತ ಶೇ.84ರಷ್ಟಿದೆ. ಆದರೆ, ಶ್ರೇಣಿಕೃತ ಸಮಾಜ ಬಹುಸಂಖ್ಯಾತರನ್ನು ಶಿಕ್ಷಣದಿಂದ ವಂಚಿಸಿತ್ತು. ತಳಸಮುದಾಯಕ್ಕೆ ಮತ್ತು ಶೂದ್ರಸಮುದಾಯಗಳಿಗೆ ಶಿಕ್ಷಣ ವಂಚಿಸುವ ಕಾರ್ಯಕ್ರಮ ರೂಪಿಸಿತ್ತು ಎಂದರು.

ನಮ್ಮ ದೇಶದ ಕೃಷಿ, ನೀರಾವರಿ ವ್ಯವಸ್ಥೆ, ಯುವಕರ ಭವಿಷ್ಯ, ಮಹಿಳೆಯರ ಮತ್ತು ಅಲ್ಪಸಂಖ್ಯಾತರ ಹಕ್ಕು, ಅಂತಾರಾಷ್ಟ್ರೀಯ ಹಾಗೂ ಕೈಗಾರಿಕ ನೀತಿಗಳು ಹೇಗಿರಬೇಕು ಎಂಬುದು ಹಾಗೂ ದೇಶದ ಸಂಪನ್ಮೂಲ ಸರಿಸಮಾನವಾಗಿ ಹಂಚುವಲ್ಲಿ ಕಾಂಗ್ರೆಸ್ ಪ್ರಗತಿ ಸಾಧಿಸಿದೆ. ಆದರೆ ಇತ್ತೀಚಿನ ವರ್ಷದಲ್ಲಿ ಏನೂ ಕೆಲಸ ಮಾಡದೆ, ಮಾಡಿರುವ ಕೆಲಸಕ್ಕೆ ಅಪಪ್ರಚಾರ ಮಾಡಿ, ನಮ್ಮ ನಾಯಕರನ್ನು ಅವಹೇಳನ ಮಾಡುವ ಕೋಮುವಾದಿಗಳಿಗೆ ಕಾಂಗ್ರೆಸ್ ತಕ್ಕಪಾಠ ಕಲಿಸಲಿದೆ ಎಂದು ಹೇಳಿದರು.

ಇದೇ ವೇಳೆ ‘ಡೊನೆಟ್ ಫಾರ್ ದೇಶ್’ ವಂತಿಕೆ ಸಂಗ್ರಹ ಅಭಿಯಾನಕ್ಕೆ ಸಚಿವರು ವೈಯಕ್ತಿಕವಾಗಿ 1.38ಲಕ್ಷ ರೂ. ನೀಡುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಡಿ.ತಿಮ್ಮಯ್ಯ, ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಮೂರ್ತಿ, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ನಗರ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಎಂ.ಶಿವಣ್ಣ, ಮಾಜಿ ಸಂಸದ ಶಿವಣ್ಣ, ಮಾಜಿ ಶಾಸಕಿ ಸುನಿತಾ ವೀರಪ್ಪಗೌಡ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X